ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರದ ಸಾರ್ವಜನಿಕರಿಗೆ ಮನವಿ ಮಾಡಿದ ಅರಣ್ಯ ಇಲಾಖೆ

|
Google Oneindia Kannada News

ರಾಮನಗರ, ಮೇ 16: ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಸೋಲೂರು ಹೋಬಳಿಯ ಕೊಟ್ಟಗಾಣಹಳ್ಳಿಯಲ್ಲಿ 62 ವರ್ಷದ ಮಹಿಳೆ ಚಿರತೆ ದಾಳಿಯಿಂದ ಮೃತಪಟ್ಟಿದ್ದಾರೆ. ಇದರಿಂದಾಗಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ವತಿಯಿಂದ ಮಾನವ ಪ್ರಾಣಹಾನಿ ಘಟನೆಗಳು ನಡೆದ ಸ್ಥಳದ ಸುತ್ತಮುತ್ತ ಕ್ಯಾಮರಾ ಟ್ರ್ಯಾಪ್ ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಸದರಿ ಪ್ರದೇಶದಲ್ಲಿ ಬೋನುಗಳನ್ನು ಇರಿಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಕಾಡಂಚಿನ ಗ್ರಾಮಗಳಲ್ಲಿ ಇಲಾಖಾ ಕ್ಷೇತ್ರಾಧಿಕಾರಿಗಳು ಹಗಲು-ರಾತ್ರಿ ಈಗಾಗಲೇ ಗಸ್ತು ತಿರುಗುವಂತೆ ಸೂಚಿಸಲಾಗಿದೆ. ಚಿರತೆ ಹಾವಳಿ ತಡೆಗಟ್ಟಲು ರಚಿಸಲಾಗಿರುವ ""ವನ್ಯಪ್ರಾಣಿ ಹಿಮ್ಮೆಟ್ಟಿಸುವ ತಂಡ'' ಕಾರ್ಯಾಚರಣೆಯು ತೀವ್ರ ಪ್ರಗತಿಯಲ್ಲಿದ್ದು, ಚಿರತೆಯನ್ನು ಸೆರೆ ಹಿಡಿಯುವವರೆಗೂ ಸಾರ್ವಜನಿಕರು ಈ ಕೆಳಕಂಡ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಕೋರಲಾಗಿದೆ.

Forest Department Appealed To The Public Of Magadi Taluk

1) ಮಕ್ಕಳು, ವೃದ್ಧರು ಮತ್ತು ಮಹಿಳೆಯರು ಯಾವುದೇ ಕಾರಣಕ್ಕೂ ಒಂಟಿಯಾಗಿ ಓಡಾಡಬಾರದು. ಗುಂಪಾಗಿ ಓಡಾಡಬಹುದು ಮತ್ತು ಸಂಜೆ ೬ ರ ನಂತರ ಮನೆ ಸೇರಬೇಕು.

2) ಯಾವುದೇ ಕಾರಣಕ್ಕೂ ಬಯಲು ಬಹಿರ್ದೆಸೆಗೆ ಹೋಗಬಾರದು.

 ಮಾಗಡಿಯಲ್ಲಿ ವೃದ್ಧೆ ಮೇಲೆ ಚಿರತೆ ದಾಳಿ; ವಾರದಲ್ಲಿ ಇದು ಎರಡನೇ ಬಲಿ ಮಾಗಡಿಯಲ್ಲಿ ವೃದ್ಧೆ ಮೇಲೆ ಚಿರತೆ ದಾಳಿ; ವಾರದಲ್ಲಿ ಇದು ಎರಡನೇ ಬಲಿ

3) ಚಿರತೆಯು ಕಂಡಲ್ಲಿ ಯಾವುದೇ ಕಾರಣಕ್ಕೂ ಹೆಚ್ಚು ಜನ ಸೇರಿ ಗದ್ದಲ ಮಾಡಬಾರದು. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು.

Forest Department Appealed To The Public Of Magadi Taluk

4) ದನಗಳನ್ನು ಮೇಯಿಸಲು ಮತ್ತು ಹೊಲಕ್ಕೆ ಹೋದಾಘ ಬಯಲು ಪ್ರದೇಶದಲ್ಲಿ ಕುಳಿತುಕೊಳ್ಳಬೇಕು. ಪೊದೆಗಳ ಬಳಿ ಒಂಟಿಯಾಗಿ ಕೂರಬಾರದು. ಚಿರತೆಯ ಬಗ್ಗೆ ಸದಾ ಕಾಲ ಎಚ್ಚರಿಕೆಯಿಂದಿರಬೇಕು.

5) ಸಂಜೆ ೬ ರ ನಂತರ ಸಾಕು ಪ್ರಾಣಿಗಳನ್ನು ಮನೆಯ ಅಥವಾ ಕೊಟ್ಟಿಗೆಯಲ್ಲಿ ಕೂಡಿ ಹಾಕಬೇಕು.

6) ಸಾಕು ಪ್ರಾಣಿಯನ್ನು ಚಿರತೆ ಹತ್ಯೆ ಮಾಡಿದಲ್ಲಿ ಅದನ್ನು ಮುಟ್ಟಬಾರದು ಮತ್ತು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು.

7) ಚಿರತೆಯ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ಈ ಕೆಳಕಂಡ ಸಂಖ್ಯೆಗೆ ಕೂಡಲೇ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಅರಣ್ಯ ಇಲಾಖೆ ಸಹಾಯವಾಣಿ: 1926

ಉಪ ಅರಣ್ಯ ಸಂರಕ್ಷಣಾಧಿಕಾರಿ, ರಾಮನಗರ ವಿಭಾಗ, ರಾಮನಗರ: 9448381927

English summary
A 62 year old woman has died of a leopard attack at Kottaganalli, Magadi Taluk. This is why the forest and wildlife conservationists are appealing to the public.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X