ಮಂಡ್ಯದಲ್ಲಿ ಸೋಂಕು ಹೆಚ್ಚಳಕ್ಕೆ ಸರ್ಕಾರದ ನಿರ್ಲಕ್ಷ್ಯ ಕಾರಣ: ಎಚ್ಡಿಕೆ
ರಾಮನಗರ, ಮೇ 19: ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳಕ್ಕೆ ಸರ್ಕಾರದ ನಿರ್ಲಕ್ಷ್ಯ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದರು.
ಚನ್ನಪಟ್ಟಣದ ಗೋವಿಂದಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಒಂದೇ ದಿನದಲ್ಲಿ 62 ಕೊರೊನಾ ವೈರಸ್ ಪ್ರಕರಣ ದಾಖಲಾಗಿವೆ. ಜಿಲ್ಲೆಯಲ್ಲಿ ಕೊರೊನಾ ನಿರ್ಲಕ್ಷ್ಯ ಧೋರಣೆಯ ಬಗ್ಗೆ ಹಿಂದೆಯೇ ಎಚ್ಚರಿಕೆ ನೀಡಿದ್ದೆ. ಅದನ್ನು ಸರ್ಕಾರ ಲಘುವಾಗಿ ಪರಿಗಣಿಸಿದ್ದರಿಂದ ಇದೀಗ ಅನಾಹುತ ಹೆಚ್ಚಾಗುತ್ತಿದೆ ಎಂದರು.
ಮುಂಬೈಯಿಂದ ಬಂದ ಇನ್ನೂ 900 ಮಂದಿಯ ಆರೋಗ್ಯ ತಪಾಸಣೆಯ ವರದಿ ಬರಬೇಕಿದೆ. ವರದಿ ಬಂದಾಗ ಇನ್ನೆಷ್ಟು ಜನರಿಗೆ ಕೊರೊನಾ ಪಾಸಿಟಿವ್ ಬರಲಿದೆಯೋ ತಿಳಿಯುತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ರಾಮನಗರ ಜಿಲ್ಲೆಯು ಮಂಡ್ಯ ಜಿಲ್ಲೆಯ ಗಡಿಯಲ್ಲೇ ಇರುವುದರಿಂದ ಇಲ್ಲಿನ ಅಧಿಕಾರಿಗಳಿಗೆ ಹೇಳಿದ್ದೇನೆ, ಮಂಡ್ಯದಲ್ಲಿ ಅಧಿಕಾರಿಗಳು ಮೈ ಮರೆತಂತೆ ನೀವು ಮೈಮರೆಯಬಾರದು. ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ಎಂದು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.












Click it and Unblock the Notifications