ಹುಟ್ಟು ಹಬ್ಬ; ಅಭಿಮಾನಿಗಳಿಗೆ ಎಚ್. ಡಿ. ಕುಮಾರಸ್ವಾಮಿ ಮನವಿ
ರಾಮನಗರ, ಡಿಸೆಂಬರ್ 14: ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಈ ಬಾರಿ ಜನ್ಮ ದಿನವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಸೋಮವಾರ ಎಚ್. ಡಿ. ಕುಮಾರಸ್ವಾಮಿ ಈ ಕುರಿತು ಟ್ವೀಟ್ ಮಾಡಿದ್ದಾರೆ. ಅಭಿಮಾನಿಗಳಿಗೆ, ಪಕ್ಷದ ಕಾರ್ಯಕರ್ತರಿಗೆ ಮನವಿಯನ್ನು ಮಾಡಿದ್ದಾರೆ. ಡಿಸೆಂಬರ್ 16ರಂದು ಎಚ್. ಡಿ. ಕುಮಾರಸ್ವಾಮಿ ಹುಟ್ಟುಹಬ್ಬವಿದ್ದು, 61ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.
"ಡಿ.16 ನನ್ನ ಜನ್ಮದಿನ. ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ. ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು" ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಹಾಗೂ ಚನ್ನಪಟ್ಟಣ ಕ್ಷೇತ್ರದ ಶಾಸಕ ಎಚ್.ಡಿ.ಕುಮಾರಸ್ವಾಮಿ 61ನೇ ಹುಟ್ಟು ಹಬ್ಬವನ್ನು ಆಚರಿಸಲು ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಸಜ್ಜಾಗಿದ್ದರು. ಹುಟ್ಟು ಹಬ್ಬದ ದಿನ ಬೆಂಗಳೂರಿನಲ್ಲಿ ಇರುವುದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ರಾಮನಗರದಲ್ಲಿ ಸಂಭ್ರಮ
ರಾಮನಗರ ಜಿಲ್ಲೆಯಲ್ಲಿ ಎಚ್. ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಸಂಭ್ರದಿಂದ ಆಚರಣೆ ಮಾಡುತ್ತಿದ್ದರು. ಇಂದು ಎಚ್. ಡಿ. ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳು ನೀವು ಇರುವ ಜಾಗದಿಂದಲೇ ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು ಎಂದು ಮನವಿ ಮಾಡಿದ್ದಾರೆ.
Recommended Video

ಕೋವಿಡ್ ಪರಿಸ್ಥಿತಿ
ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಎಚ್. ಡಿ. ಕುಮಾರಸ್ವಾಮಿ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಅವರು ಕುಟುಂಬದವರ ಜೊತೆ ಅಂದು ಕಾಲಕಳೆಯಲಿದ್ದಾರೆ.
|
ಕುಮಾರಸ್ವಾಮಿ ಟ್ವೀಟ್
ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
|
ನಮ್ಮ ಹುಟ್ಟು ಸಾರ್ಥಕವಾಗುತ್ತದೆ
"ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ. ಆದರೆ, ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ" ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ಹೇಳಿದ್ದಾರೆ.












Click it and Unblock the Notifications