ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳು: ಮಾಜಿ ಸಿಎಂ ಎಚ್‌ಡಿಕೆ ಪ್ರತಿಕ್ರಿಯೆ

ರಾಮನಗರ, ಡಿಸೆಂಬರ್ 20: ಬಿಡದಿಯ ಟೊಯೊಟೊ ಕಿರ್ಲೋಸ್ಕರ್ ಕಾರ್ಖಾನೆ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆಯಾದರೂ, ಯಾವುದೇ ಪರಿಹಾರ ಕಾಣಿಸುತ್ತಿಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ""ಕಾರ್ಮಿಕರು ಹಾಗೂ ಸಂಸ್ಥೆಯ ಮುಖ್ಯಸ್ಥರ ನಡುವಿನ ವ್ಯವಸ್ಥಾಪಕರ ಭಿನ್ನಾಭಿಪ್ರಾಯಗಳು, ಪ್ರತಿಷ್ಠೆ, ಸರ್ಕಾರದ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿರಬಹುದು. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಈಗಿನ ಅಗತ್ಯವಾಗಿದೆ'' ಎಂದರು.

ವ್ಯವಸ್ಥಾಪಕರ ಮಾತು ಕೇಳಿಯೋ, ಕಾರ್ಮಿಕರ ಮೇಲಿನ ಕ್ಷುಲ್ಲಕ ಆರೋಪಗಳಿಗೋ ಸಂಸ್ಥೆ 3000 ಕಾರ್ಮಿಕರನ್ನು ಬೀದಿಗೆ ತಳ್ಳಿದೆ. ನಮ್ಮ ನೆಲ, ಜಲ, ಗಾಳಿ, ಸೌಕರ್ಯ ಬಳಸಿಕೊಂಡು ನಡೆಯುತ್ತಿರುವ ಸಂಸ್ಥೆಗಳೂ ನಮ್ಮವರ ವಿಷಯದಲ್ಲಿ ಇಷ್ಟು ಕ್ರೂರವಾಗಿರುವುದು ಸರಿಯಲ್ಲ. ಸಂಸ್ಥೆ ಮುಖ್ಯಸ್ಥರು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯವಾಗಿ ವರ್ತಿಸಬೇಕು ಎಂದು ತಿಳಿಸಿದ್ದಾರೆ.

ನಾನೇ ಹಲವು ಸಭೆಗಳನ್ನು ನಡೆಸಿದ್ದೇನೆ

ನಾನೇ ಹಲವು ಸಭೆಗಳನ್ನು ನಡೆಸಿದ್ದೇನೆ

ಕಾರ್ಮಿಕರ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಸ್ವತಃ ನಾನೇ ಹಲವು ಸಭೆಗಳನ್ನು ನಡೆಸಿದ್ದೇನೆ. ಕಾರ್ಮಿಕರು ಹಾಗೂ ಸಂಸ್ಥೆಯ ಮುಖ್ಯಸ್ಥರ ನಡುವೆ ಇರುವ ವ್ಯವಸ್ಥಾಪಕ ವರ್ಗ ಗೊಂದಲ ಸೃಷ್ಟಿ ಮಾಡುತ್ತಿರುವುದು ನನಗೆ ಮೇಲ್ನೋಟಕ್ಕೆ ಗೊತ್ತಾಗಿದೆ. ಈ ವ್ಯವಸ್ಥಾಪಕ ವರ್ಗ ಸಾಮಾನ್ಯವಾಗಿ ಈ ಪ್ರದೇಶ, ಪ್ರಾಂತ್ಯದವರಾಗಲಿ, ರಾಜ್ಯದವರಾಗಲಿ ಅಲ್ಲ ಎಂಬುದು ಗಮನಾರ್ಹವಾಗಿದೆ ಎಂದಿದ್ದಾರೆ.

ಆಂತರಿಕ ವಿಚಾರಗಳ ಬಗ್ಗೆ ಪರಾಮರ್ಶೆ ಮಾಡಬೇಕು

ಆಂತರಿಕ ವಿಚಾರಗಳ ಬಗ್ಗೆ ಪರಾಮರ್ಶೆ ಮಾಡಬೇಕು

ಕೋಲಾರದ "ವಿಸ್ಟ್ರಾನ್' ಘಟನೆಗೆ ಸಂಸ್ಥೆಯ ವ್ಯವಸ್ಥಾಪನೆಯಲ್ಲಿ ಆಗಿದ್ದ ಲೋಪವೇ ಕಾರಣ ಎಂದೂ, ಕಾರ್ಮಿಕರು, ನೌಕರರನ್ನು ಘನತೆಯಿಂದ ಕಾಣುವುದಾಗಿಯೂ ಆಪಲ್‌ ಸಂಸ್ಥೆ ಹೇಳಿದೆ. ವಿಸ್ಟ್ರಾನ್ ಕಂಪನಿಯೂ ತನ್ನ ಉಪಾಧ್ಯಕ್ಷನನ್ನು ಇದೇ ಉದ್ದೇಶಕ್ಕೆ ಕಿತ್ತು ಹಾಕಿದೆ. ಟೊಯೊಟೊ ಕೂಡ ತನ್ನ ಆಂತರಿಕ ವಿಚಾರಗಳ ಬಗ್ಗೆ ಒಮ್ಮೆ ಪರಾಮರ್ಶೆ ಮಾಡಬೇಕು ಎಂದು ಎಚ್.ಡಿ ಕುಮಾರಸ್ವಾಮಿ ಕಿವಿಮಾತು ಹೇಳಿದ್ದಾರೆ.

ಅಪನಂಬಿಕೆ ಹುಟ್ಟು ಹಾಕಲು ಕಾರಣ

ಅಪನಂಬಿಕೆ ಹುಟ್ಟು ಹಾಕಲು ಕಾರಣ

ಸಮಸ್ಯೆಯನ್ನು ರಾಜ್ಯ ಸರ್ಕಾರವೂ ಆದ್ಯತೆ ಮೇಲೆ ಬಗೆಹರಿಸಲು ಮುಂದಾಗಬೇಕು. ಅದರಿಂದ ರಾಜ್ಯಕ್ಕೂ ಲಾಭವಿದೆ ಎಂಬುದನ್ನು ಸರ್ಕಾರ ಗಮನಿಸಬೇಕು. ಕಾರ್ಮಿಕರ ಪ್ರತಿಭಟನೆ, ದಾಂಧಲೆ, ಮುಷ್ಕರಗಳಂತಹ ಘಟನೆಗಳು ಹೂಡಿಕೆದಾರರಲ್ಲಿ ಅಪನಂಬಿಕೆ ಹುಟ್ಟು ಹಾಕಲು ಕಾರಣವಾಗುತ್ತದೆ. ರಾಜ್ಯದಲ್ಲಿ ಸುಲಲಿತ ಉದ್ದಿಮೆ ನಡೆಸಲು ಅವಕಾಶಗಳಿಲ್ಲ ಎಂಬ ಭಾವನೆ ಮೂಡಿಸುತ್ತವೆ ಎಂದು ಎಚ್ಚರಿಸಿದ್ದಾರೆ.

ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು

ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು

ಈ ಎಲ್ಲ ಕಾರಣಗಳಿಂದಾಗಿ ಸರ್ಕಾರವೂ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಸಂಸ್ಥೆಯ ಪ್ರತಿಭಟನಾ ನಿರತ ಕಾರ್ಮಿಕರು, ಸಂಸ್ಥೆಯ ಮುಖ್ಯಸ್ಥರನ್ನು ನೇರಾ ನೇರವಾಗಿ ಸಂಧಾನಕ್ಕೆ ಕೂರಿಸಬೇಕು. ಈ ವಿಚಾರದಲ್ಲಿ ಸರ್ಕಾರ ಸಂಪರ್ಕ ಸೇತುವೆಯಾಗಿ ನಡೆದುಕೊಳ್ಳಬೇಕು. ರಾಜ್ಯದ ಔದ್ಯಮಿಕ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಕೂಡ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+