ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಟೊಯೊಟಾ ಕಾರ್ಮಿಕ ಹೋರಾಟ ಬೆಂಬಲಿಸಿ ಮಾಜಿ ಶಾಸಕ ಬಾಲಕೃಷ್ಣರಿಂದ ಪಾದಯಾತ್ರೆ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜನವರಿ 27: ಟೊಯೊಟಾ ಆಡಳಿತ ಮಂಡಳಿಯ ಕಾರ್ಮಿಕ ವಿರೋಧಿ ಧೋರಣೆ ಖಂಡಿಸಿ ಕಳೆದ 80 ದಿನಗಳಿಂದ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಗುರುವಾರ (ಜ.28)ರಂದು ಬಿಡದಿ ಪಟ್ಟಣದಿಂದ ಟೊಯೊಟಾ ಕಂಪನಿಯವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದ್ದರು.

74ನೇ ದಿನಕ್ಕೆ ಕಾಲಿಟ್ಟ ಟೊಯೊಟಾ ಕಾರ್ಮಿಕರ ಹೋರಾಟ: ಸಾಥ್ ಕೊಟ್ಟ ಕುಟುಂಬಸ್ಥರು74ನೇ ದಿನಕ್ಕೆ ಕಾಲಿಟ್ಟ ಟೊಯೊಟಾ ಕಾರ್ಮಿಕರ ಹೋರಾಟ: ಸಾಥ್ ಕೊಟ್ಟ ಕುಟುಂಬಸ್ಥರು

ರಾಮನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಸಿ.ಬಾಲಕೃಷ್ಣ, ""ಟೊಯೊಟಾ ಕಾರ್ಮಿಕರು ಸತತ 80 ದಿನಗಳಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ. ಅನೇಕ ಮಂದಿ ನಾಯಕರು ಮುಖಂಡರೆಲ್ಲರೂ ಅವರಿಗೆ ಬೆಂಬಲ ಸೂಚಿಸಿದ್ದಾರೆ'' ಎಂದರು.

ಅಲ್ಲದೆ ಹಲವು ಬಾರಿ ಆಡಳಿತ ಮಂಡಳಿ ಜತೆಗೆ ಮಾತುಕತೆ ಮಾಡಲು ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ನಮ್ಮ ಪಾದಯಾತ್ರೆ ಹೋರಾಟ ಅನಿವಾರ್ಯ. ಪಾದಯಾತ್ರೆಯಲ್ಲಿ ಎಲ್ಲಾ ಪಕ್ಷದ ನಾಯಕರು ಸೇರಿ ಪಕ್ಷಾತೀತವಾಗಿ ಗುರುವಾರ (ಜ.28)ರಂದು ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಶಾಸಕ ಬಾಲಕೃಷ್ಣ ಘೋಷಣೆ ಮಾಡಿದರು.

Ramanagara: Former MLA HC Balakrishna Will Hiking In Support Of Toyota Workers Strike

ಕಾರ್ಖಾನೆ ಆಡಳಿತ ಮಂಡಳಿಯ ನಿರ್ಲಕ್ಷ್ಯ ಧೋರಣೆ ಖಂಡಿಸಿ ನಾವು ಪ್ರತಿಭಟನೆ ಮಾಡಲು ತೀರ್ಮಾನ ಮಾಡಿದ್ದೇವೆ, ಸಂಸದ ಡಿ.ಕೆ ಸುರೇಶ್ ಸೇರಿದಂತೆ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಕನ್ನಡಪರ ಸಂಘಟನೆ ಕಾರ್ಯಕರ್ತರು, ರೈತ ಮುಖಂಡರು ಸೇರಿ ಪ್ರತಿಭಟನೆ ಮಾಡುತ್ತೇವೆ ಎಂದು ತಿಳಿಸಿದರು.

Ramanagara: Former MLA HC Balakrishna Will Hiking In Support Of Toyota Workers Strike

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾರ್ಮಿಕರ ಪರವಾಗಿ ಹೋರಾಟದ ನೇತೃತ್ವ ವಹಿಸಿಕೊಂಡರೆ, ನಾವು ಅವರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಲು ಸಿದ್ಧ. ಆದರೆ ಎಚ್‌ಡಿಕೆಯವರು ಕೇವಲ ಸೋಷಿಯಲ್ ಮೀಡಿಯಾಗಳಲ್ಲಿ ಟೊಯೊಟಾ ಕಾರ್ಮಿಕರ ಪರವಾಗಿ ಮಾತನಾಡುವುದನ್ನು ಬಿಡಬೇಕು. ಕಾರ್ಮಿಕರ ಮೇಲೆ ಅಭಿಮಾನ ಇದ್ದರೆ ನಾಳಿನ ಹೋರಾಟಕ್ಕೆ ಅವರು ಬೆಂಬಲ ಕೊಟ್ಟು ಹೋರಾಟದಲ್ಲಿ ಭಾಗಿಯಾಗಬೇಕು ಎಂದು ಮಾಜಿ ಶಾಸಕ ಬಾಲಕೃಷ್ಣ ಅವರು ಮಾಜಿಸಿಎಂ ಎಚ್‌ಡಿಕೆ ಅವರನ್ನು ಆಗ್ರಹಿಸಿದರು.

Recommended Video

ಅಂಗಡಿಗಳ ಮುಂದೆ ರಾರಾಜಿಸಲಿದೆ ಕನ್ನಡ ಫಲಕ-ಇಲ್ಲದಿದ್ರೆ Trade License Cancel ! | Oneindia Kannada

English summary
Huge hiking have been launched on the 28th of January in against of the Toyota administration's anti-worker attitude.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X