ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್ ಮುಗಿಸಲು ಸಿದ್ದರಾಮಯ್ಯರಿಂದ ಸಾಧ್ಯವಿಲ್ಲ: ದೇವೇಗೌಡರ ಗುಡುಗು

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಸೆಪ್ಟೆಂಬರ್ 27: "ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಮಾತ್ರವಲ್ಲ, ಯಾರಿಂದಲೂ ಸಾಧ್ಯವಿಲ್ಲ," ಎಂದು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.

2023ಕ್ಕೆ ಜಾತ್ಯತೀತ ಜನತಾದಳದ ಹಾಗೂ ಎಚ್.ಡಿ. ಕುಮಾರಸ್ವಾಮಿ ನಾಯಕತ್ವದ ಜೆಡಿಎಸ್ ಸರಕಾರ ರಚನೆ ಮಾಡುವ ಗುರಿಯೊಂದಿಗೆ ರಾಮನಗರ ಜಿಲ್ಲೆ ಬಿಡದಿ ಬಳಿಯ ಕೇತುಗಾನಹಳ್ಳಿ ಫಾರ್ಮ್‌ಹೌಸ್‌ನಲ್ಲಿ ಆರಂಭವಾದ 4 ದಿನಗಳ 'ಜನತಾ ಪರ್ವ 1.0' ಕಾರ್ಯಗಾರವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.

"ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ. ತಾವು ನಾಯಕರಾಗಿ ಬಂದಿದ್ದು ಎಲ್ಲಿಂದ, ಬೆಳೆದದ್ದು ಎಲ್ಲಿ? ಎಂಬುದನ್ನು ಅರಿತು ಮಾತನಾಡಬೇಕು. ಅವರ ಜತೆ, ಇವರ ಜತೆ ಹೋಗುವ ಪಕ್ಷ ಎಂದು ದೂರುವ ಮುನ್ನ ಸಮ್ಮಿಶ್ರ ಸರಕಾರ ರಚನೆ ಮಾಡುವುದಕ್ಕೆ ಯಾರ್ಯಾರು ನಮ್ಮ ಮನೆ ಬಾಗಿಲಿಗೆ ಬಂದರು ಎನ್ನುವುದು ನನಗೆ, ನಿಮಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ, ದೇಶಕ್ಕೆ ಗೊತ್ತಿದೆ," ಎಂದು ಮಾರ್ಮಿಕವಾಗಿ ಮಾತನಾಡಿದರು.

 ಮತವಾಗಿ ಪರಿವರ್ತನೆ ಆಗುತ್ತಿಲ್ಲ

ಮತವಾಗಿ ಪರಿವರ್ತನೆ ಆಗುತ್ತಿಲ್ಲ

"ನಮ್ಮ ಪಕ್ಷದಲ್ಲಿ ಕುಮಾರಸ್ವಾಮಿ‌ ಪ್ರಚಾರಕ್ಕೆ ಹೋದಾಗ ದೊಡ್ಡ ಮಟ್ಟದಲ್ಲಿ ಜನ ಸೇರುತ್ತಾರೆ, ಆದರೆ ಮತವಾಗಿ ಪರಿವರ್ತನೆ ಆಗುತ್ತಿಲ್ಲ. ಅದು ಕೂಡ ಒಂದು ಲೋಪ‌. ಬೇರೆ ಬೇರೆ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಅಧಿಕಾರದಲ್ಲಿವೆ ಎಂಬುದನ್ನು ಜನರಿಗೆ ಅರ್ಥ ಮಾಡಸಬೇಕು ಎಂದು ತಿಳಿಸಿದರು. ನನ್ನ ರಾಜಕೀಯ ಜೀವನದಲ್ಲಿ ಅಪಮಾನಗಳನ್ನು ಎದುರಿಸಿದ್ದೇನೆ, ಸಹಿಸಿದ್ದೇನೆ. ಪಕ್ಷದ ಅಪಾರ ಕಾರ್ಯಕರ್ತರ ಜತೆ ಎಲ್ಲ ನೋವುಗಳನ್ನು ನುಂಗಿದ್ದೇನೆ ಎಂದ ಗೌಡರು, ನಮ್ಮನ್ನು ನೋಡಿ ಅಪಹಾಸ್ಯ ಮಾಡುವವರಿಗೆ 2023ರಲ್ಲಿ ಉತ್ತರ ನೀಡೋಣ" ಎಂದರು.

 123 ಅಭ್ಯರ್ಥಿಗಳಿಗೆ ಗ್ರೀನ್ ಕಾರ್ಡ್ ವಿತರಣೆ

123 ಅಭ್ಯರ್ಥಿಗಳಿಗೆ ಗ್ರೀನ್ ಕಾರ್ಡ್ ವಿತರಣೆ

ಜೆಡಿಎಸ್ ಮಿಷನ್- 123 ಕಾರ್ಯಾಗಾರದಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, "123 ಜನ ಜೆಡಿಎಸ್ ಅಭ್ಯರ್ಥಿಗಳ ಹೆಸರು ಕಾರ್ಯಗಾರದಲ್ಲಿ ಘೋಷಣೆಯಾಗಿದ್ದು, ಘೋಷಣೆಯಾದ 123 ಜನರಿಗೆ ಗ್ರೀನ್ ಕಾರ್ಡ್ ವಿತರಣೆ ಮಾಡಲಾಗಿದೆ," ಎಂದರು.

"ಇತ್ತೀಚಿಗೆ ಆಧುನಿಕ ತಂತ್ರಜ್ಞಾನ ಬಳಸಿಕೊಂಡು‌ ಮುಂದಿನ ಜನವರಿವರೆಗೆ ಆ ಅಭ್ಯರ್ಥಿಗಳ ಕಾರ್ಯವನ್ನು ವೀಕ್ಷಣೆ ಮಾಡಲಾಗುತ್ತದೆ. ನಂತರ ಅವರ ಸಂಘಟನೆ ನೋಡಿ ಅವರಿಗೆ ಟಿಕೆಟ್ ನೀಡಲಾಗುವುದು. ಹಾಗೆಯೇ ಮೊದಲನೇ ಹಂತದ ಅಭ್ಯರ್ಥಿಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಅಂತವರಿಗೆ ಇವತ್ತು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ," ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

 2023ರಿಂದ ಹೊಸ ಯುಗ ಆರಂಭ

2023ರಿಂದ ಹೊಸ ಯುಗ ಆರಂಭ

"ಜೆಡಿಎಸ್ ಪಕ್ಷ ಇರುವುದು ಕನ್ನಡಿಗರಿಗಾಗಿ, ಕನ್ನಡಿಗರಿಗೋಸ್ಕರ. ಬಡವರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೊರಟಿದ್ದೇವೆ, 2023ರಿಂದ ಹೊಸ ಯುಗ ಆರಂಭವಾಗಲಿದೆ. ಬಡವರಿಗೆ ಹಲವಾರು ಕಾರ್ಯಕ್ರಮ ಕೊಟ್ಟ ಪಕ್ಷ ನಮ್ಮದಾಗಿದ್ದು, ಕಾರ್ಯಾಗಾರದ ನಂತರ ನಿರಂತರವಾಗಿ ಕಾರ್ಯಕ್ರಮ ನಡೆಯುತ್ತವೆ. ಮುಂಬರುವ ದಿನಗಳಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದೇವೆ," ಎಂದು ತಿಳಿಸಿದರು.

"ಇನ್ನು ನಮ್ಮ ಪಕ್ಷದಿಂದ ಶಕ್ತಿ ಪಡೆದುಕೊಂಡು ಬೇರೆ ಪಕ್ಷಕ್ಕೆ ಹೋಗಿ ಸಿಎಂ ಸೇರಿದಂತೆ ಪ್ರಮುಖ ಹುದ್ದೆಗಳನ್ನ ಪಡೆದುಕೊಂಡಿದ್ದಾರೆ. ಇದಲ್ಲದೆ ನಮ್ಮ ಪಕ್ಷದಿಂದಲೇ ಬೆಳೆದ ನಾಯಕರೊಬ್ಬರು ನಮ್ಮ ಪಕ್ಷದ ವಿರುದ್ಧ ಲಘುವಾಗಿ ಮಾತನಾಡುತ್ತಾರೆ. 20- 30 ಸೀಟು ಗೆಲ್ಲುವ ಮೂಲಕ ಬೇರೆಯವರ ಮನೆ ಬಾಗಿಲಿಗೆ ಮಣೆ ಹಾಕಿ ಸರಕಾರದ ರಚನೆ ಮಾಡುತ್ತಾರೆ ಎಂಬ ಕೆಟ್ಟ ಭಾವನೆಯಿಂದ ಹೇಳಿದ್ದಾರೆಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಮುಂದಿನ 17 ತಿಂಗಳು ನಿರಂತರವಾಗಿ ಪಕ್ಷ ಸಂಘಟನೆ ಕಾರ್ಯಕ್ರಮಗಳು ನಡೆಯುತ್ತವೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ," ಎಂದು ಇದೇ ವೇಳೆ ಹೆಚ್‌ಡಿಕೆ ಭವಿಷ್ಯ ನುಡಿದರು.

 ಹೈಟೆಕ್ ಕಾರ್ಯಗಾರ, ಹೊಸತನಕ್ಕೆ ಮುನ್ನುಡಿ

ಹೈಟೆಕ್ ಕಾರ್ಯಗಾರ, ಹೊಸತನಕ್ಕೆ ಮುನ್ನುಡಿ

ಇರುವುದು ಒಂದೇ ಪರಿಹಾರ, ಪ್ರಾದೇಶಿಕ ಪಕ್ಷಕ್ಕೆ ಅಧಿಕಾರ ಎನ್ನುವ ಘೋಷವಾಕ್ಯ ಹಾಗೂ 2023ಕ್ಕೆ ಜೆಡಿಎಸ್ ಎನ್ನುವ ಗುರಿಯೊಂದಿಗೆ ಆರಂಭವಾದ ಕಾರ್ಯಾಗಾರವೂ ಕರ್ನಾಟಕ ರಾಜಕೀಯದಲ್ಲಿ ಅತ್ಯಂತ ವಿಶೇಷವಾಗಿದೆ.

"ಪಕ್ಷದ ಗುರಿ ಮತ್ತು ದಾರಿಯ ಬಗ್ಗೆ ಸ್ಪಷ್ಟತೆ ಮೂಡಿಸುವುದರ ಜತೆಗೆ, ಮುಂದಿನ ಚುನಾವಣೆಯಲ್ಲಿ ಕಣಕ್ಕೆ ಇಳಿಯಲಿರುವ ಅಭ್ಯರ್ಥಿಗಳಿಗೆ ನಿರ್ಧಿಷ್ಟ ಗುರಿಗಳನ್ನು ನಿಗದಿ ಮಾಡಲಾಗುವುದು. ಅದಕ್ಕೆ ಅಗತ್ಯವಾದ ತರಬೇತಿಯನ್ನು ಕೊಡಲಾಗುವುದು," ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

 ಜೆಡಿಎಸ್ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ

ಜೆಡಿಎಸ್ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ

"ಮಿಷನ್- 123 ಎಂಬ ಗುರಿಯೊಂದಿಗೆ ನಾವು ತಯಾರಿ ಆರಂಭ ಮಾಡಿದ್ದೇವೆ. ಈ ಗುರಿ ತಲುಪಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ. ಸಮರ್ಥರಾದ ಅಭ್ಯರ್ಥಿಗಳನ್ನು ಮಾತ್ರ ಕಣಕ್ಕೆ ಇಳಿಸುತ್ತೇವೆ. ನಮ್ಮನ್ನು ಹಗುರವಾಗಿ ಕಾಣುವ ಕೆಲವರಿಗೆ ತಕ್ಕ ಉತ್ತರ ನೀಡುತ್ತೇವೆ. 30 ಸೀಟುಗಳ ಪಕ್ಷ ಎಂದು ಜೆಡಿಎಸ್ ಪಕ್ಷವನ್ನು ಲಘುವಾಗಿ ಪರಿಗಣಿಸುವವರಿಗೆ ಮುಂದೆ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ," ಎಂದು ಗುಡುಗಿದರು.

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ವೇದಿಕೆಯಲ್ಲಿದ್ದರು. ಇದೇ ವೇಳೆ ಮಾಜಿ ಶಾಸಕ ವೈಎಸ್‌ವಿ ದತ್ತ "ಪಕ್ಷ ಸಂಘಟನೆ ಹಾಗೂ ಪಕ್ಷದ ಪರಂಪರೆ' ಎಂಬ ವಿಷಯದ ಬಗ್ಗೆ ಮಾತನಾಡಿದರು. ಪಕ್ಷದ ಹಾಲಿ ಶಾಸಕರು, ಮಾಜಿ ಶಾಸಕರು, ಹಿಂದಿನ ಚುನಾವಣೆಯಲ್ಲಿ ಪರಾಜಿತರಾಗಿದ್ದ ಅಭ್ಯರ್ಥಿಗಳು, ಮಾಜಿ ಸಚಿವರು ಸೇರಿದಂತೆ 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಿದ್ದರು.

 ಕಾರ್ಯಾಗಾರದ ಮುಖ್ಯಾಂಶಗಳು

ಕಾರ್ಯಾಗಾರದ ಮುಖ್ಯಾಂಶಗಳು

* ಪಕ್ಷದ ದ್ವಜಾರೋಹಣ ನೆರವೇರಿಸಿದ ದೇವೇಗೌಡರು
* ಸಾಮಾನ್ಯ ಕಾರ್ಯಕರ್ತರ ಹಾಗೆ ನೋಂದಣಿ ಮಾಡಿಕೊಂಡ ಎಚ್.ಡಿ. ಕುಮಾರಸ್ವಾಮಿ
* ನಾಯಕನ ಹಾದಿಯಲ್ಲೇ ನೊಂದಣಿ ಮಾಡಿಕೊಂಡ ಶಾಸಕರು
* ಹಸಿರುಮಯ ವೇದಿಕೆಗೆ ಹೈಟೆಕ್ ಸ್ಪರ್ಶ
* ಜನತಾ ಪರಿವಾರದ ಇತಿಹಾಸ ಹೇಳುವ ಚಿತ್ರಗಳ ಅನಾವರಣ
* ಪಕ್ಷದ ಟವೆಲ್ ಧರಿಸಿದ ಮುಖಂಡರಿಂದ ಸಕ್ರಿಯ ಭಾಗಿ

English summary
JDS Mission 123 Workshop in Bidai: No one can destroy JDS party including Siddaramaiah says Former Prime Minister HD Deve Gowda. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X