Get Updates
Get notified of breaking news, exclusive insights, and must-see stories!

ಖಾಯಂ ಉಪನ್ಯಾಸಕರ ಭರ್ತಿಗೆ ಆಗ್ರಹಿಸಿ ವಿದ್ಯಾರ್ಥಿನಿಯರ ಪ್ರತಿಭಟನೆ

ರಾಮನಗರ, ಜನವರಿ 4: ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮೂಲ ಸೌಕರ್ಯಗಳನ್ನು ನೀಡಲು ಬದ್ಧ ಎನ್ನುವ ಸರ್ಕಾರ ಕಳೆದ ಹಲವಾರು ವರ್ಷಗಳಿಂದ ಖಾಯಂ ಉಪನ್ಯಾಸಕರನ್ನು ನೇಮಕ ಮಾಡದ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ವಿದ್ಯಾರ್ಥಿನಿಯರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಕಾಯಂ ಉಪನ್ಯಾಸಕರನ್ನು ನೇಮಿಸುವಂತೆ ಆಗ್ರಹಿಸಿ ರಾಮನಗರದ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಜಮಾಯಿಸಿದ ಕಮರ್ಷಿಯಲ್ ಪ್ರಾಕ್ಟೀಸ್‌ ವಿಭಾಗದ ವಿದ್ಯಾರ್ಥಿನಿಯರು ಕಾಯಂ ಉಪನ್ಯಾಸಕರನ್ನು ನೇಮಿಸುವಂತೆ ಕಾಲೇಜು ಆಡಳಿತ ಮಂಡಳಿ ಹಾಗೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಹುತೇಕ ಗ್ರಾಮೀಣ ಮಟ್ಟದ ಬಡ ಕುಟುಂಬಗಳಿಗೆ ಸೇರಿದ ಹೆಣ್ಣು ಮಕ್ಕಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಳೆದ ಎರಡು ವರ್ಷಗಳಿಂದ ಕರ್ಮಷಿಯಲ್ ಪ್ರಾಕ್ಟೀಸ್ ವಿಭಾಗಕ್ಕೆ ಕಾಯಂ ಉಪನ್ಯಾಸಕರನ್ನು ನೇಮಕ ಮಾಡಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಹಾಗಾಗಿ ತಕ್ಷಣವೇ ಉಪನ್ಯಾಸಕರನ್ನು ನೇಮಕ ಮಾಡಬೇಕು ಎಂದು ವಿದ್ಯಾರ್ಥಿನಿಯರು ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Ramanagara Government Polytechnic Students Protest

ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಕರ್ಮಷಿಯಲ್ ಪ್ರಾಕ್ಟೀಸ್ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿರುವ ಶೃತಿ ಅವರನ್ನು ಸರ್ಕಾರ ಹಾಸನದ ಪಾಲಿಟೆಕ್ನಿಕ್ ಕಾಲೇಜಿಗೆ ವರ್ಗಾವಣೆ ಮಾಡಿದೆ. ಇದರಿಂದಾಗಿ ಕರ್ಮಷಿಯಲ್ ಪ್ರಾಕ್ಟೀಸ್ ವಿಭಾಗಕ್ಕೆ ಯಾರು ಕಾಯಂ ಉಪನ್ಯಾಸಕರು ಇಲ್ಲದಂತೆ ಆಗಿದೆ. ಕಾಯಂ ಉಪನ್ಯಾಸಕರು ಇಲ್ಲದೇ ಯಾವ ರೀತಿ ವ್ಯಾಸಂಗ ಮಾಡುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಾಲ್ಕು ಮಂದಿ ಅತಿಥಿ ಉಪನ್ಯಾಸಕರು ಬೋಧನೆ ಮಾಡುತ್ತಿದ್ದಾರೆ. ಅದರೆ ಅತಿಥಿ ಉಪನ್ಯಾಸಕರು ಸಹ ಹಿಂದೆ ಇದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಕಾಲೇಜು ಆಡಳಿತ ಮಂಡಳಿ ಅವರನ್ನೇ ಕರೆದು ಅವರಿಂದ ಬೋಧನೆ ಮಾಡಿಸುತ್ತಿದ್ದಾರೆ. ‌ಈಗಾಗಲೇ ಪರೀಕ್ಷಾ ಸಮಯ ಹತ್ತಿರವಾಗುತ್ತಿದೆ. ಇಂತಹ ಸಮಯದಲ್ಲಿ ಖಾಯಂ ಉಪನ್ಯಾಸಕರು ಇಲ್ಲದೆ ಅತಿಥಿ ಉಪನ್ಯಾಸಕರ ಬೋಧನೆ ಸಮಪರ್ಕವೇ ಎಂದು ವಿದ್ಯಾರ್ಥಿನಿಯರು ಉನ್ನತ ವ್ಯಾಸಂಗ ಇಲಾಖೆಯನ್ನು ಪ್ರಶ್ನಿಸಿದರು.

ಜನವರಿ 14 ರಿಂದ ಕರ್ಮಷಿಯಲ್ ಪ್ರಾಕ್ಟೀಸ್ ವಿಭಾಗದ ಪರೀಕ್ಷೆಗಳು ಆರಂಭವಾಗಲಿದೆ. ಇಂತಹ ಸಮಯದಲ್ಲಿ ಸರ್ಕಾರ ಕರ್ಮಷಿಯಲ್ ಪ್ರಾಕ್ಟೀಸ್ ವಿಭಾಗದ ಮುಖ್ಯಸ್ಥರಾಗಿರುವ ಶೃತಿ ಅವರನ್ನು ವರ್ಗಾವಣೆ ಮಾಡಿದ್ದಾರೆ. ಇದರಿಂದಾಗಿ ವಿದ್ಯಾರ್ಥಿನಿಯರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಕರ್ಮಷಿಯಲ್ ಪ್ರಾಕ್ಟೀಸ್ ವಿಭಾಗದಲ್ಲಿ ಒಟ್ಟು 80ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ಖಾಯಂ ಉಪನ್ಯಾಸಕರು ಇಲ್ಲದೆ ವ್ಯಾಸಂಗ ಮಾಡಲು ತೊಂದರೆಯಾಗುತ್ತಿದೆ. ಹಾಗಾಗಿ ಸಮಸ್ಯೆ ಪರಿಹಾರ ಮಾಡಿಕೊಡುವಂತೆ ಪ್ರಾಂಶುಪಾಲರು ಹಾಗೂ ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತಂದಿದ್ದೇವೆ ಎಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಮನವಿ ಮಾಡಿಕೊಂಡರು, ಕಾಲೇಜು ಆಡಳಿತ ಮಂಡಳಿ ಹಾಗೂ ಉನ್ನತ ವ್ಯಾಸಂಗ ಇಲಾಖೆಯ ಜಂಟಿ ನಿರ್ದೇಶಕರು ಸಮಸ್ಯೆ ಬಗೆಹರಿಸದೆ ಸತಾಯಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಕಾಲೇಜು ಅವರಣದಲ್ಲಿ ಕೆಲ ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ ನಂತರ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿಗಳ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಗಳ ಭವನದ ಆವರಣದಲ್ಲೂ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ತಮ್ಮ ಮನವಿ ಪತ್ರ ಸಲ್ಲಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+