ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರ ಜಿಲ್ಲೆಗೆ ಬಂಪರ್‌ ಕೊಡುಗೆ ಕೊಡಲಿದೆ ಸರ್ಕಾರ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ನವೆಂಬರ್ 1: ಜಿಲ್ಲೆಯ ರಾಮನಗರ, ಚನ್ನಪಟ್ಟಣ ಕನಕಪುರ ನಗರಸಭೆಗಳು ಮತ್ತು ಮಾಗಡಿ, ಬಿಡದಿ ಪುರಸಭೆಗಳ ವ್ಯಾಪ್ತಿಯಲ್ಲಿ ಇನ್ನು ಎರಡು ವಾರಗಳಲ್ಲಿ 145 ಕೋಟಿ ರೂ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ.

ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 67ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, "ಜಿಲ್ಲೆಯಲ್ಲಿ ಪೌರಕಾರ್ಮಿಕರು ಸೇರಿದಂತೆ ದುರ್ಬಲರಿಗೆ ವಸತಿ ಸೌಕರ್ಯವನ್ನು ಹಾಗೂ ಇನ್ನಿತರ ನಾಗರಿಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ ಅಡಿಯಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಹಾರೋಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲೂ 10 ಕೋಟಿ ರೂ. ಮೊತ್ತದ ಕಾಮಗಾರಿಗಳು ನಡೆಯಲಿವೆ" ಎಂದರು.

ರಾಯಚೂರು: ಶತಮಾನ ಪೂರೈಸಿದ ಆಂಧ್ರ ಗಡಿಭಾಗದ ಕನ್ನಡ ಮಾಧ್ಯಮ ಶಾಲೆರಾಯಚೂರು: ಶತಮಾನ ಪೂರೈಸಿದ ಆಂಧ್ರ ಗಡಿಭಾಗದ ಕನ್ನಡ ಮಾಧ್ಯಮ ಶಾಲೆ

"ಜಿಲ್ಲೆಯಲ್ಲಿ ಪ್ರವಾಸೋದ್ಯಮ ಮತ್ತು ಆತಿಥ್ಯೋದ್ಯಮಗಳ ಬೆಳವಣಿಗೆಗೆ ವಿಪುಲ ಅವಕಾಶಗಳಿವೆ. ಇವುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಈಗಾಗಲೇ ಆಸಕ್ತ ಉದ್ಯಮಿಗಳ ಮತ್ತು ಹೂಡಿಕೆದಾರರ ಮಹತ್ವದ ಸಭೆಯನ್ನು ನಡೆಸಲಾಗಿದೆ. ಜಿಲ್ಲೆಯಲ್ಲಿ ಕೈಗಾರಿಕೆ, ಆರೋಗ್ಯ, ಶಿಕ್ಷಣ, ಮತ್ತು ಕೃಷಿ ಕ್ಷೇತ್ರಗಳ ಸುಸ್ಥಿರ ಅಭಿವೃದ್ಧಿಗೆ ಒತ್ತು ಕೊಡಲಾಗಿದೆ" ಎಂದು ಸಚಿವರು ತಿಳಿಸಿದರು.

Government Will Soon Launch Development Works Worth Rs.145 Crore In Ramanagara

"ಜಿಲ್ಲೆಯ ವ್ಯಾಪ್ತಿಯಲ್ಲಿ ಸರಕಾರಿ ಶಾಲೆಗಳ ಬಲವರ್ಧನೆಗೆ ಈಗಾಗಲೇ ಗುಣಮಟ್ಟದ ಮೂರು ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗಿದೆ. ರಾಮನಗರದಲ್ಲಿ ಆರೋಗ್ಯ ವಿಶ್ವವಿದ್ಯಾಲಯ ಸ್ಥಾಪಿಸುವ ಮಸೂದೆಯನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ, ಒಪ್ಪಿಗೆ ಪಡೆಯಲಾಗುವುದು. ಶೈಕ್ಷಣಿಕ ಕ್ರಾಂತಿಯನ್ನು ಸಾಧಿಸುವ ಗುರಿಯುಳ್ಳ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಜಿಲ್ಲೆಯಲ್ಲಿನ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ಬಂದಿದೆ. ಜಿಲ್ಲೆಯಲ್ಲಿ ಅಸ್ತಿತ್ವಕ್ಕೆ ಬರಲಿರುವ ಮುಕ್ತ ವಿವಿ ಪ್ರಾದೇಶಿಕ ಕೇಂದ್ರದ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ" ಎಂದರು.

"ಜಿಲ್ಲಾ ಸರಕಾರಿ ಆಸ್ಪತ್ರೆಯ ಕಾಮಗಾರಿಯು ಇನ್ನೊಂದು ತಿಂಗಳಲ್ಲಿ ಮುಗಿಯಲಿದೆ. 650 ಆಸ್ಪತ್ರೆಗಳ ಸಾಮರ್ಥ್ಯಕ್ಕೆ ಏರಿಸಿರುವ ಜಿಲ್ಲಾ ಆಸ್ಪತ್ರೆಯಲ್ಲಿ 100 ಹಾಸಿಗೆಗಳನ್ನು ಮಹಿಳೆಯರು ಮತ್ತು ಮಕ್ಕಳ ಚಿಕಿತ್ಸೆಗೆ ಮೀಸಲಿಡಲಾಗುವುದು. ಅಲ್ಲದೆ ರಾಮನಗರದ ಸರಕಾರಿ ಎಂಜಿನಿಯರಿಂಗ್ ಕಾಲೇಜನ್ನು 70 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಮಾದರಿಯಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ" ಎಂದು ಅವರು ಮಾಹಿತಿ ನೀಡಿದರು.

"ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರಗಳ ಕಿಸಾನ್ ಸಮ್ಮಾನ್ ಯೋಜನೆ ಅಡಿ ಜಿಲ್ಲೆಯ 1.20 ಲಕ್ಷ ರೈತರಿಗೆ ತಲಾ 10 ಸಾವಿರ ರೂಪಾಯಿಗಳಂತೆ 300 ಕೋಟಿ ರೂ.ಗಳಿಗೂ ಹೆಚ್ಚು ನೆರವನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ" ಎಂದು ಅವರು ಅಂಕಿಅಂಶ ಒದಗಿಸಿದರು.

Government Will Soon Launch Development Works Worth Rs.145 Crore In Ramanagara

"ಜಿಲ್ಲೆಯ ಹಾರೋಹಳ್ಳಿಯಲ್ಲಿ 5ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಾಡಲಾಗುವುದು. ಇದಕ್ಕಾಗಿ 912 ಎಕರೆ ಜಮೀನನ್ನು ಮೀಸಲಿಡಲಾಗಿದೆ" ಎಂದು ಸಚಿವರು ವಿವರಿಸಿದರು.

English summary
Development works worth Rs. 145 crore will be launched in Ramanagara, Channapatna Kanakapur Municipal Councils, Magadi and Bidadi Municipalities in the next two weeks, Said higher educaton Minister C. N. Ashwath Narayan in Ramanagara
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X