ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ
ರಾಮನಗರ ಏಪ್ರಿಲ್ 19: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ತಡರಾತ್ರಿ ದುಷ್ಕರ್ಮಿಗಳು ಗುಂಡು ಹಾರಿದ್ದಾರೆ. ಇದೀಗ ರಿಕ್ಕಿ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ರಾಮನಗರ ಜಿಲ್ಲೆಯ ಬಿಡದಿಯ ಅವರ ನಿವಾಸದ ಬಳಿಯೇ ನಡೆದಿದೆ.
ಬಿಡದಿಯಲ್ಲಿರುವ ಮುತ್ತಪ್ಪ ರೈ ಅವರ ನಿವಾಸದ ಬಳಿ ಶನಿವಾರ ಮಧ್ಯರಾತ್ರಿ 1:30ರ ಸುಮಾರಿಗೆ ಈ ಘಟನೆ ನಡೆದಿದೆ. ನಿವಾಸದ ಗೇಟ್ ಬಳಿ ದುಷ್ಕರ್ಮಿಗಳು ಗುಂಡಿ ದಾಳಿ ಮಾಡಿದ್ದಾರೆ. ಕಳೆದ ದಿನ ರಾತ್ರಿ ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ವಾಹನದ ಮೇಲೆ ದುಷ್ಕರ್ಮಿಗಳು ಮೂರು ಸುತ್ತಿನ ಗುಂಡು ಹಾರಿಸಿದ್ದಾರೆ.

ಈ ವೇಳೆ ರಿಕ್ಕಿ ರೈ ಗಾಯಗೊಂಡಿದ್ದು ತಕ್ಷಣ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನೆಯ ನಂತರ ಸ್ಥಳಕ್ಕೆ ರಾಮನಗರ ಎಸ್‌ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಂಡಿನ ದಾಳಿ ಮಾಡಿದವರ ಪತ್ತೆಗೆ ಬಲೆ ಬೀಸಿದ್ದಾರೆ.
ಪ್ರತೀ ಬಾರಿ ರಿಕ್ಕಿ ರೈ ಡ್ರೈವರ್ ಸೀಟ್‌ನಲ್ಲಿ ಕುಳಿತಿರುತ್ತಿದ್ದರು. ಆದರೆ ಈ ಬಾರಿ ಅವರು ಆ ಸೀಟ್ ಬದಲು ಪಕ್ಕದ ಸೀಟ್‌ನಲ್ಲಿ ಕುಳಿತುಕೊಂಡಿದ್ದರು. ಡ್ರೈವಿಂಗ್ ಸೀಟ್ ಅನ್ನು ಗುರಿಯಾಗಿಸಿಕೊಂಡ ದುಷ್ಕರ್ಮಿಗಳು ಮೂರು ಸುತ್ತಿನ ಗುಂಡು ಹಾರಿಸಿದ್ದಾರೆ.
ಡ್ರೈವರ್ ರಾಜು ಗುಂಡಿನ ದಾಳಿ ವೇಳೆ ಮುಂದೆ ಬಾಗಿದ್ದರಿಂದ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಪಕ್ಕದ ಸೀಟ್‌ನಲ್ಲಿ ಇದ್ದ ರಿಕ್ಕಿ ರೈ ಮೂಗು ಹಾಗೂ ಕೈಗೆ ಗುಂಡು ತಾಗಿದ್ದು ಗಂಭೀರವಾಗಿ ಅವರು ಗಾಯಗೊಂಡಿದ್ದಾರೆ. ಏಕಾಏಕಿ ಈ ಘಟನೆ ನಡೆದಿದ್ದರಿಂದ ಭಯದ ವಾತಾವರಣ ನಿರ್ಮಾಣವಾಗಿದೆ.
ರಿಯಲ್ ಎಸ್ಟೇಸ್ ವ್ಯವಹಾರದಲ್ಲಿ ಸಕ್ರಿಯವಾಗಿದ್ದ ರಿಕ್ಕಿ ರೈ ಎರಡು ದಿನಗಳ ಹಿಂದೆಷ್ಟೇ ರಷ್ಯಾದಿಂದ ವಾಪಾಸಾಗಿದ್ದ. ಇನ್ನೂ ಗಾಯಗೊಂಡ ಡ್ರೈವರ್‌ನಿಂದ ಮಾಹಿತಿ ಪಡೆದ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ರಿಕ್ಕಿ ರೈ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲ್ಯಾಂಡ್ ವಿಚಾರಕ್ಕೆ ಈ ಗುಂಡಿನ ದಾಳಿ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಚಾಲಕ ರಾಜು ದೂರು ದಾಖಲಿಸಿದ್ದಾರೆ. ರಿಕ್ಕಿ ರೈ ಅವರ ಮನೆಯ ಸುತ್ತ ಮುತ್ತ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿಲ್ಲ. ಇದನ್ನು ಗಮನದಲ್ಲಿ ಇಟ್ಟುಕೊಂಡು ದಾಳಿ ನಡೆದಿದೆ.
ದೂರು
ಮುತ್ತಪ್ಪ ರೈನ 2 ಪತ್ನಿ, ರಾಕೇಶ್ ಸೇರಿದಂತೆ ಮೂರು ಜನರ ಮೇಲೆ ದೂರು ದಾಖಲಿಸಿಲಾಗಿದೆ. ಹಳೆ ದ್ವೇಷ, ಹಣಕಾಸಿನ ವಿಚಾರದಲ್ಲಿ ಅಥವಾ ರಿಯಲ್ ಎಸ್ಟೇಟ್ ವಿಚಾರದಲ್ಲಿ ಈ ದಾಳಿ ನಡೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.












Click it and Unblock the Notifications