Channapatna By-Election: ಡಿಕೆಶಿ-ಹೆಚ್‌ಡಿಕೆ ಕುಟುಂಬದ ಪ್ರತಿಷ್ಠೆಯ ಕದನ; ಚನ್ನಪಟ್ಟಣ ಗೆಲ್ಲೋದ್ಯಾರು?
ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 13ರಂದು ಚುನಾವಣೆ ನಡೆಯಲಿದದ್ದು, ಕಾಂಗ್ರೆಸ್, ಎನ್‌ಡಿಎ ನಡುವಿನ ಪ್ರತಿಷ್ಠೆಯ ಕದನವಾಗಿ ಮಾರ್ಪಟ್ಟಿದೆ. ಅದರಲ್ಲೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವು ರಾಜ್ಯದ ಪ್ರಮುಖ ರಾಜಕೀಯ ನಾಯಕರ ಕುಟುಂಬಗಳ ನಡುವಿನ ಪ್ರತಿಷ್ಠೆಯಾಗಿ ಮಾರ್ಪಟ್ಟಿದ್ದು, ದೇಶದ ಗಮನವನ್ನೇ ಸೆಳೆಯುತ್ತಿದೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸಿ.ಪಿ ಯೋಗೇಶ್ವರ್ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾಸ್ವಾಮಿ ಕಣಕ್ಕಿಳಿದಿದ್ದಾರೆ. ಆದರೆ ಇದು ಡಿಕೆ ಶಿವಕುಮಾರ್ ಸಹೋದರರು ಮತ್ತು ಹೆಚ್‌ಡಿ ಕುಮಾಸ್ವಾಮಿ ಕುಟುಂಬದ ನಡುವಿನ ಪ್ರತಿಷ್ಠೆಯ ಕದನವಾಗಿ ಮಾರ್ಪಟ್ಟಿದೆ.
ಡಿಕೆ ಶಿವಕುಮಾರ್ ಮತ್ತು ಹೆಚ್‌ಡಿ ಕುಮಾರಸ್ವಾಮಿ ಒಕ್ಕಲಿಗ ಸಮುದಾಯದ ನಾಯಕರು. ಇಬ್ಬರಿಗೂ ರಾಜಕೀಯವಾಗಿ ಸಾಕಷ್ಟು ಜನಬೆಂಬಲ ಇದೆ. ಇಬ್ಬರ ನಡುವೆ ಒಕ್ಕಲಿಗ ಸಮುದಾಯದ ಪ್ರಬಲ ನಾಯಕತ್ವಕ್ಕೆ ಪೈಪೋಟಿ ಕೂಡ ಇದೆ. ಇದೇ ಕಾರಣಕ್ಕೆ ಚನ್ನಪಟ್ಟಣ ಉಪಚುನಾವಣೆ ಇಬ್ಬರಿಗೂ ಪ್ರತಿಷ್ಠೆಯ ಕದನವಾಗಿ ಮಾರ್ಪಟ್ಟಿದೆ.

ಇಬ್ಬರಿಗೂ ಗೆಲುವು ಅನಿವಾರ್ಯ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್‌ಗೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿತ್ತು. 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕೇವಲ 9 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಅವರಿಗೆ ಉಪಚುನಾವಣೆ ಮಹತ್ವದ್ದಾಗಿದೆ. ಮುಂದಿನ ಸಿಎಂ ಎಂದೇ ಬಿಂಬಿಸಲಾಗಿರುವ ಡಿಕೆ ಶಿವಕುಮಾರ್ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಈ ಉಪಚುನಾವಣೆ ಉತ್ತಮ ಅವಕಾಶವಾಗಿದೆ.
ಮತ್ತೊಂದು ಕಡೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ಗೆ ಹಳೆ ಮೈಸೂರು ಭಾಗದಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಇದು ಉತ್ತಮ ಅವಕಾಶವಾಗಿದೆ. 2019ರ ಲೋಕಸಭಾ ಚುನಾವಣೆ, 2023 ವಿಧಾನಸಭಾ ಚುನಾವಣೆಯಲ್ಲಿ ಈಗಾಗಲೇ ಸೋಲು ಕಂಡಿರುವ ನಿಖಿಲ್ ಕುಮಾರಸ್ವಾಮಿ ಮೂರನೇ ಬಾರಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇದೇ ಕಾರಣದಕ್ಕೆ ಹೆಚ್‌ಡಿ ಕುಮಾರಸ್ವಾಮಿ ಮತ್ತು ಕುಟುಂಬ ಈ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು ಶತಾಯ ಗತಾಯ ಕುಟುಂಬದ ಕುಡಿಯನ್ನು ಗೆಲ್ಲಿಸಲು ಪ್ರಯತ್ನ ಮಾಡುತ್ತಿದ್ದಾರೆ.
ಬಿಜೆಪಿಯಲ್ಲೇ ಇದ್ದ ಮಾಜಿ ಶಾಸಕ ಸಿ.ಪಿ ಯೋಗೇಶ್ವರ್ ತಮಗೆ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಸೇರ್ಪಡೆಯಾಗಿದ್ದು ಎನ್‌ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧೆ ಮಾಡಿದ್ದರೆ. ಸಿಪಿ ಯೋಗೇಶ್ವರ್ ಬೆಂಬಲಕ್ಕೆ ಡಿ.ಕೆ.ಶಿವಕುಮಾರ್ ಮತ್ತು ಡಿಕೆ ಸುರೇಶ್ ನಿಂತಿರುವುದು ಅವರ ಬಲವನ್ನು ಮತ್ತಷ್ಟು ಹೆಚ್ಚಿಸಿದೆ.
ಮೊಮ್ಮಗನ ಪರ ದೇವೇಗೌಡರ ಪ್ರಚಾರ
ಮೊಮ್ಮಗನ ಗೆಲ್ಲಿಸಲು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ತಾವೇ ಸ್ವತಃ ಅಖಾಡಕ್ಕಿಳಿದಿದ್ದಾರೆ. ಸೋಮವಾರದಿಂದ ಸತತ ಐದು ದಿನಗಳ ಕಾಲ ಪ್ರಚಾರ ನಡೆಸಿದ್ದಾರೆ. ಅನಾರೋಗ್ಯದ ನಡುವೆಯೂ ಮೊಮ್ಮಗನ ಗೆಲ್ಲಿಸುವ ಉತ್ಸಾಹ ಮಾತ್ರ ಅವರಲ್ಲಿ ಕಡಿಮೆಯಾಗಿಲ್ಲ.
ಚುನಾವಣಾ ಪ್ರಚಾರದ ವೇಳೆ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ತಮ್ಮ ಮಗ ಕುಮಾರಸ್ವಾಮಿಯನ್ನು ಹಿಮಾಲಯ ಪರ್ವತಕ್ಕೆ ಹೋಲಿಕೆ ಮಾಡಿದ್ದು ಡಿಕೆ ಶಿವಕುಮಾರ್ ಅವರನ್ನು ಗುಡ್ಡದಂತೆ ಎಂದು ಕರೆದಿದ್ದರು. ಗುಡ್ಡಗಳನ್ನು ಹಿಮಾಲಯ ಪರ್ವತಕ್ಕೆ ಹೋಲಿಕೆ ಮಾಡಬಾರದು ಎಂದು ಹೇಳಿದ್ದು, ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿತ್ತು. ಗ್ರಾಮೀಣ ಪ್ರದೇಶದಲ್ಲಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಾಗಿದ್ದು, ಹೆಚ್‌ಡಿ ದೇವೇಗೌಡ ಪ್ರಚಾರ ಬಿರುಸಿನ ಪ್ರಚಾರ ಮಾಡಿದ್ದಾರೆ. ನೀರಾವರಿಗೆ ನೀಡಿರುವ ಕೊಡುಗೆಗಳನ್ನು ನೆನಪಿಸಿರುವ ಅವರು ಭಾವನಾತ್ಮಕವಾಗಿ ಭಾಷಣ ಮಾಡಿದ್ದು ಜನರನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ.
ಅಳುವ ಗಂಡಸನ್ನು....
ಇತ್ತೀಚೆಗೆ ಸಿಪಿ ಯೋಗೇಶ್ವರ್ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯ ಅಳುವ ಗಂಡಸನ್ನು ನಂಬಬಾರದು ಎಂದು ಹೆಚ್‌ಡಿಕೆ ಬಗ್ಗೆ ವ್ಯಂಗ್ಯವಾಡಿದ್ದರು. ಸಿದ್ದರಾಮಯ್ಯ ಹೇಳಿಕೆಗೆ ಕೆಂಡವಾಗಿದ್ದು ಜೆಡಿಎಸ್ ನಾಯರು, ಮಾನವೀಯತೆ, ಹೃದಯ ಇರುವವರಿಗೆ ಕಣ್ಣೀರು ಬರುವುದು ಸಹಜ ಎಂದು ತಿರುಗೇಟು ಕೊಟ್ಟಿದ್ದರು.
ಡಿಕೆ ಸಹೋದರರು ಭೂಗಳ್ಳರು ಎನ್ನುವ ಜೆಡಿಎಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದ ಡಿಕೆ ಶಿವಕುಮಾರ್ ತಾವು ಪ್ರತಿನಿಧಿಸುವ ಕನಕಪುರ ಕ್ಷೇತ್ರದಲ್ಲಿ ಶಾಲೆಗಳಿಗೆ 25 ಎಕರೆ ದಾನ ಮಾಡಿದ್ದೇನೆ. ದೇವೇಗೌಡ ಕುಟುಂಬ ಒಂದು ಗುಂಟೆಯನ್ನಾದರೂ ದಾನ ಮಾಡಿದೆಯಾ ಹೇಳಲಿ ಎಂದು ಸವಾಲು ಹಾಕಿದ್ದರು.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ 2.31 ಲಕ್ಷ ಮತದಾರರಿದ್ದು, 1.05 ಲಕ್ಷ ಒಕ್ಕಲಿಗ ಮತದಾರರಿದ್ದು ಇವರ ಮತಗಳೇ ನಿರ್ಣಾಯಕವಾಗಿವೆ. ಎಸ್‌ಸಿ/ಎಸ್‌ಟಿ ಮತದಾರರು (39,447) ಮತ್ತು ಮುಸ್ಲಿಂ ಮತದಾರರು (27, 363) ಒಕ್ಕಲಿಗರ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಮತಗಳನ್ನು ಸೆಳೆಯಲು ಕಾಂಗ್ರೆಸ್, ಜೆಡಿಎಸ್ ಪೈಪೋಟಿ ನಡೆಸುತ್ತಿವೆ.
ಎರಡು ಪ್ರತಿಷ್ಠಿತ ಕುಟುಂಬಗಳ ನಡುವಿನ ರಾಜಕೀಯ ಕದನವಾಗಿರುವ ಕಾರಣ ರೋಚಕ ಹಣಾಹಣಿಯನ್ನು ನಿರೀಕ್ಷೆ ಮಾಡಲಾಗಿದೆ. ಯಾರೇ ಗೆದ್ದರೂ ಇಲ್ಲಿ ಪ್ರಬಲ ಹೋರಾಟ ಕೊಡುವುದು ಖಚಿತವಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications