ಹೆಚ್‌ಡಿಕೆ ಹುಟ್ಟುಹಬ್ಬ; ಚರ್ಚ್, ದೇವಾಲಯದಲ್ಲಿ ವಿಶೇಷ ಪೂಜೆ

ರಾಮನಗರ, ಡಿಸೆಂಬರ್ 16: ಬುಧವಾರ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು 61ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದರು. ಹುಟ್ಟುಹಬ್ಬದ ಅಂಗವಾಗಿ ದೇವಾಲಯ, ದರ್ಗಾ ಮತ್ತು ಚರ್ಚಗಳಲ್ಲಿ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಕುಮಾರಸ್ವಾಮಿ ಅಭಿಮಾನಿಗಳು ಮತ್ತು ಜೆಡಿಎಸ್ ಕಾರ್ಯಕರ್ತರು ಸರ್ವಧರ್ಮ ಸಹಿಷ್ಣುತೆ ಸಾರಿದರು. ನಗರದ ಅಧಿದೇವತೆ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪಂಚಮುಖಿ ಗಣಪತಿ ದೇವಾಲಯದಲ್ಲೂ ಪೂಜೆ ಸಲ್ಲಿಸಲಾಯಿತು.

HD Kumaraswamy Birth Day Special Prayers In Chruch Temple

ಚರ್ಚ್‌ನಲ್ಲಿ ಕ್ರೈಸ್ತ ಬಾಂಧವರು ಹಾಗೂ ಕುಮಾರಸ್ವಾಮಿ ಅಭಿಮಾನಿಗಳು ಕ್ಯಾಂಡಲ್ ಬೆಳಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ಕುಮಾರಸ್ವಾಮಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.

HD Kumaraswamy Birth Day Special Prayers In Chruch Temple

ಪೀರನ್ ವಾ ಸಾಲಿ ದರ್ಗಾದಲ್ಲಿ ಮುಸ್ಲಿಂ ಬಾಂದವರು ಮತ್ತು ಜೆಡಿಎಸ್ ಮುಖಂಡರು ಗುರುಗಳ ಸಮಾಧಿಗೆ ಹೂ ಸಮರ್ಪಿಸಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ನೆಚ್ಚಿನ ನಾಯಕ ಮೊತ್ತಮ್ಮೆ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಲಿ ಎಂದು ಪ್ರಾರ್ಥಿಸಿದರು.

ರಾಮನಗರದಲ್ಲಿ 'ಕಾಡು ಬೆಳಸಿ ನಾಡು ಉಳಿಸಿ' ಎಂಬ ಸಂದೇಶದೊಂದಿಗೆ ರೈತರಿಗೆ ಸಸಿಗಳನ್ನು ವಿತರಣೆ ಮಾಡುವ ಮೂಲಕ ಕುಮಾರಸ್ವಾಮಿ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯತು. ಎಪಿಎಂಸಿ ಆವರಣದಲ್ಲಿ ರೈತರಿಗೆ ತೆಂಗು, ಮಾವು ಹಾಗೂ ಅಡಕೆ ಸಸಿಗಳನ್ನು ವಿತರಿಸಲಾಯಿಸಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+