ಜನರಿಗೆ ಅನ್ಯಾಯ ಮಾಡಬೇಡಿ ಎಂದು ಟ್ವೀಟ್ ಮಾಡಿ ಕೇಳಿದ ಎಚ್ ಡಿಕೆ
Recommended Video
ರಾಮನಗರ, ಡಿಸೆಂಬರ್ 13: ಕಳೆದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಮಂಜೂರಾಗಿದ್ದ ಹಲವು ಯೋಜನೆಗಳಿಗೆ ಎಳ್ಳು ನೀರು ಬಿಟ್ಟಿರುವ ಸರ್ಕಾರದ ನಡೆಯನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಯಡಿಯೂರಪ್ಪನವರೇ ರಾಮನಗರ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ವಿವಿಧ ಅಭಿವೃದ್ಧಿ ಯೋಜನೆಗಳನ್ನು 2018ರ ಅವಧಿಯಲ್ಲಿ ಮಂಜೂರು ಮಾಡಿದ್ದೆ. ಆದರೆ ನನ್ನ ಮೇಲಿನ ವೈಯಕ್ತಿಕ ದ್ವೇಷಕ್ಕೆ ರಾಮನಗರವೂ ಸೇರಿದಂತೆ ಹಲವಾರು ಜಿಲ್ಲೆಗಳಿಗೆ ಮಂಜೂರಾಗಿರುವ ಯೋಜನೆಗಳನ್ನು ತಡೆ ಹಿಡಿಯುವ ಮೂಲಕ ಜನರಿಗೆ ಅನ್ಯಾಯ ಮಾಡಬೇಡಿ" ಎಂದು ತಮ್ಮ ಟ್ವೀಟ್ ಮಾಡಿದ್ದಾರೆ.

ಕನಕಪುರ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡಿದ ವಿಚಾರವಾಗಿ ಈಗಾಗಲೇ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದು ನೀವು ಸಿಎಂ ಗಾದಿ ಏರಿದಾಗ ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದೀರಿ. ಆದರೆ ನಿಮ್ಮ ನಡವಳಿಗೆ ಗಮನಿಸಿದರೆ ನೀವು ದ್ವೇಷ ರಾಜಕೀಯ ಮಾಡುತ್ತಿದ್ದೀರಿ ಎನಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.












Click it and Unblock the Notifications