• search
 • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜನರಿಗೆ ಅನ್ಯಾಯ ಮಾಡಬೇಡಿ ಎಂದು ಟ್ವೀಟ್ ಮಾಡಿ ಕೇಳಿದ ಎಚ್ ಡಿಕೆ

By ರಾಮನಗರ ಪ್ರತಿನಿಧಿ
|
   ದ್ವೇಷ ರಾಜಕಾರಣ ಮಾಡ್ತಿದ್ದಾರಂತೆ ಯಡಿಯೂರಪ್ಪ | Oneindia Kannada

   ರಾಮನಗರ, ಡಿಸೆಂಬರ್ 13: ಕಳೆದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಮಂಜೂರಾಗಿದ್ದ ಹಲವು ಯೋಜನೆಗಳಿಗೆ ಎಳ್ಳು ನೀರು ಬಿಟ್ಟಿರುವ ಸರ್ಕಾರದ ನಡೆಯನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

   ಕುಮಾರಸ್ವಾಮಿ ರಾಜ್ಯದ ಜನತೆಗೆ ಏನು ಅನ್ಯಾಯ ಮಾಡಿದ್ದಾರೆ: ನಿಖಿಲ್ ಕಣ್ಣೀರುಕುಮಾರಸ್ವಾಮಿ ರಾಜ್ಯದ ಜನತೆಗೆ ಏನು ಅನ್ಯಾಯ ಮಾಡಿದ್ದಾರೆ: ನಿಖಿಲ್ ಕಣ್ಣೀರು

   "ಯಡಿಯೂರಪ್ಪನವರೇ ರಾಮನಗರ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ವಿವಿಧ ಅಭಿವೃದ್ಧಿ ಯೋಜನೆಗಳನ್ನು 2018ರ ಅವಧಿಯಲ್ಲಿ ಮಂಜೂರು ಮಾಡಿದ್ದೆ. ಆದರೆ ನನ್ನ ಮೇಲಿನ ವೈಯಕ್ತಿಕ ದ್ವೇಷಕ್ಕೆ ರಾಮನಗರವೂ ಸೇರಿದಂತೆ ಹಲವಾರು ಜಿಲ್ಲೆಗಳಿಗೆ ಮಂಜೂರಾಗಿರುವ ಯೋಜನೆಗಳನ್ನು ತಡೆ ಹಿಡಿಯುವ ಮೂಲಕ ಜನರಿಗೆ ಅನ್ಯಾಯ ಮಾಡಬೇಡಿ" ಎಂದು ತಮ್ಮ ಟ್ವೀಟ್ ಮಾಡಿದ್ದಾರೆ.

   ಕನಕಪುರ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡಿದ ವಿಚಾರವಾಗಿ ಈಗಾಗಲೇ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದು ನೀವು ಸಿಎಂ ಗಾದಿ ಏರಿದಾಗ ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದೀರಿ. ಆದರೆ ನಿಮ್ಮ ನಡವಳಿಗೆ ಗಮನಿಸಿದರೆ ನೀವು ದ್ವೇಷ ರಾಜಕೀಯ ಮಾಡುತ್ತಿದ್ದೀರಿ ಎನಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

   English summary
   Former chief minister HD Kumaraswamy has tweeted and condemn the government's move of cancelling several projects sanctioned by the district during the last coalition government
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X