ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರದ ಹೆಸರು ಬದಲಾವಣೆ; ಕುಮಾರಣ್ಣನ ಸರಣಿ ಟ್ವೀಟ್

|
Google Oneindia Kannada News

ಬೆಂಗಳೂರು, ಜನವರಿ 05 : "ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕರ್ನಾಟಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಭಾನುವಾರ ಎಚ್. ಡಿ. ಕುಮಾರಸ್ವಾಮಿ #SaveRamanagara ಎಂಬ ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. 'ರಾಮನಗರ' ಹೆಸರನ್ನು 'ನವ ಬೆಂಗಳೂರು' ಎಂದು ಬದಲಾವಣೆ ಮಾಡುವ ಸರ್ಕಾರದ ಚಿಂತನೆಯನ್ನು ವಿರೋಧಿಸಿದ್ದಾರೆ.

ರಾಮನಗರ ಹೆಸರು ಬದಲಾವಣೆ ವಿವಾದ; ಯಡಿಯೂರಪ್ಪ ಸ್ಪಷ್ಟನೆರಾಮನಗರ ಹೆಸರು ಬದಲಾವಣೆ ವಿವಾದ; ಯಡಿಯೂರಪ್ಪ ಸ್ಪಷ್ಟನೆ

"ಬಿಎಸ್ವೈ ಅವರೇ, ರಾಮನಗರದ ಅಭಿವೃದ್ಧಿ ಮಾಡುವ ಇಚ್ಛೆ ನಿಮಗಿದ್ದರೆ, ಜಿಲ್ಲೆಗೆ ನಾನು ನನ್ನ ಬಜೆಟ್‌ನಲ್ಲಿ ಮೀಸಲಿಟ್ಟ ಹಣವನ್ನು ಪ್ರಾಮಾಣಿಕವಾಗಿ ಬಿಡುಗಡೆ ಮಾಡಿ ಸಾಕು. ಅದನ್ನೂ ಮೀರಿದ ಅಭಿವೃದ್ಧಿ ಮಾಡುವ ಮನಸ್ಸಿದ್ದರೆ ನಿಮಗೆ ನನ್ನ, ನನ್ನ ಜನರ ಸಹಕಾರ ಸದಾ ಇರಲಿದೆ. ಆದರೆ ಹೆಸರು ಬದಲಿಸಿ ಜಿಲ್ಲೆ ಸಂಸ್ಕೃತಿ, ಅಸ್ಮಿತೆಗೆ ಬೆಂಕಿ ಇಡಬೇಡಿ" ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ರಾಮನಗರ ಜಿಲ್ಲೆಗೆ ಮರು ನಾಮಕರಣ, ಹೆಸರು ಏನಾಗಲಿದೆ?ರಾಮನಗರ ಜಿಲ್ಲೆಗೆ ಮರು ನಾಮಕರಣ, ಹೆಸರು ಏನಾಗಲಿದೆ?

ರಾಮನಗರದ ಹೆಸರನ್ನು 'ನವ ಬೆಂಗಳೂರು' ಎಂದು ಬದಲಾವಣೆ ಮಾಡುವ ಚಿಂತನೆಯನ್ನು ಕರ್ನಾಟಕ ಸರ್ಕಾರ ನಡೆಸಿದೆ. ಇದಕ್ಕೆ ಚನ್ನಪಟ್ಟಣದ ಶಾಸಕರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಮನಗರದ ಹೆಸರು ಬದಲಾವಣೆ

ರಾಮನಗರದ ಹೆಸರು ಬದಲಾವಣೆ

"ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ‌. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ" ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಜಿಲ್ಲೆಯ ಐತಿಹ್ಯ ಅಳಿಯಲಿದೆ

ಜಿಲ್ಲೆಯ ಐತಿಹ್ಯ ಅಳಿಯಲಿದೆ

"ಈ ಜಿಲ್ಲೆ ಗಂಗರು ಆಳಿದ ನಾಡು. ಬಾಲಗಂಗಾಧರನಾಥರ, ಶಿವಕುಮಾರ ಶ್ರೀಗಳ ಜನ್ಮಭೂಮಿ. ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ಶಕ್ತಿಸ್ಥಳ. ಇದೆ ಹೆಸರನ್ನು ಬೆಂಗಳೂರು ಎಂದು ಬದಲಿಸಿದರೆ ಜಿಲ್ಲೆಯ ಐತಿಹ್ಯ ಅಳಿಯಲಿದೆ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ರೈತರಿಗಾಗಿ ಅಲ್ಲ

ರೈತರಿಗಾಗಿ ಅಲ್ಲ

ಎಚ್. ಡಿ. ಕುಮಾರಸ್ವಾಮಿ, "ಬೆಂಗಳೂರಿನಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಜಮೀನು ಹೊಂದಬೇಕು ಎಂಬುದು ಇಂದಿನ ಹಣವಂತರ ಬಯಕೆ. ಇದರಲ್ಲಿ ಉತ್ತರಭಾರತೀಯರೇ ಹೆಚ್ಚು. ಹಾಗಾಗಿಯೇ ಸಾಕಷ್ಟು ಭೂಮಿ ಫಾರಂ ಹೌಸ್ಗಳಿಗೆ ಬಲಿಯಾಗಿವೆ. ಕೃಷಿಯಿಂದ ಹಿಮ್ಮುಖವಾಗಿವೆ. ರಾಮನಗರದ ಹೆಸರು ಬದಲಾವಣೆ ಇಂಥವರಿಗಾಗಿಯೇ ಹೊರತು ರೈತರಿಗೆ ಅಲ್ಲ" ಎಂದು ಟ್ವೀಟ್ ಮಾಡಿದ್ದಾರೆ.

ಶಿವಮೊಗ್ಗಕ್ಕೆ ಬೆಂಗಳೂರು ಎಂದು ಹೆಸರಿಡಬಲ್ಲರೇ?

ಶಿವಮೊಗ್ಗಕ್ಕೆ ಬೆಂಗಳೂರು ಎಂದು ಹೆಸರಿಡಬಲ್ಲರೇ?

"ಅಷ್ಟಕ್ಕೂ ಹೆಸರಲ್ಲಿ ಏನಿದೆ. ಬೆಂಗಳೂರು ಎಂದ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವೇ? ಹಾಗಿದ್ದರೆ ರಾಜ್ಯದ ಬೇರೆ ಜಿಲ್ಲೆಗಳಿಗೆ ಇದೇ ಹೆಸರಿಡಬಹುದಲ್ಲವೇ? ಅದು ನಿಮಗೆ ಸಾಧ್ಯವೇ? ರಾಮನಗರದ ಹೆಸರು ಬದಲಾಯಿಸಲು ಬರುವ ಬಿಎಸ್ವೈ ಅವರು ಶಿವಮೊಗ್ಗಕ್ಕೆ ಬೆಂಗಳೂರು ಎಂದು ಹೆಸರಿಡಬಲ್ಲರೇ? ದಕ್ಷಿಣ ಕನ್ನಡಕ್ಕೆ?" ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಅವಮಾನ ಮಾಡಿದಂತೆ

ಅವಮಾನ ಮಾಡಿದಂತೆ

"ರಾಮನಗರ ತಾಲೂಕು ಮೊದಲು 'ಕ್ಲೋಸ್ ಪೇಟೆ' ಎಂದು ಇತ್ತು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರು ರಾಮನಗರ ತಾಲೂಕು ಮಾಡಿದರು. ಅದೇ ಹೆಸರನ್ನು ನಾನು ಇಡೀ ಜಿಲ್ಲೆಗೆ ಇಟ್ಟಿದ್ದೇನೆ. ಅದನ್ನು ಬದಲಾಯಿಸುವುದು ಅವರಿಗೆ ಮಾಡುವ ಅಪಮಾನ" ಎಂದು ಹೇಳಿದ್ದಾರೆ.

English summary
Karnataka government may change the name of Ramanagara district to Nava Bengaluru. Former chief minister H. D. Kumaraswamy opposed the government move.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X