ರಾಜ್ಯದ ಹಿರಿಯ ಅಧಿಕಾರಿ ಕೊಲೆಗೆ ಸರ್ಕಾರದ ವೈಫಲ್ಯವೇ ಕಾರಣ-ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ
ರಾಮನಗರ, ನವೆಂಬರ್ 06: ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಘಟನೆ ನಿನ್ನೆ( ನವೆಂಬರ್ 5) ಭಾನುವಾರ ಬೆಂಗಳೂರಿನಲ್ಲಿ ನಡೆದು ಹೋಗಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಪ್ರತಿಮಾ ಕೆಎಸ್ ಎನ್ನುವವರು ಭೀಕರವಾಗಿ ಕೊಲೆ ಮಾಡಲಾಗಿದೆ. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರದಲ್ಲಿ ಅಧಿಕಾರಿಗಳಿಗೆ, ಜನಸಾಮಾನ್ಯರಿಗೆ ರಕ್ಷಣೆ ಇಲ್ಲ. ರಾಜ್ಯದ ಹಿರಿಯ ಅಧಿಕಾರಿಯನ್ನು ಮನೆಗೆ ಹೋಗಿ ಹತ್ಯೆ ಮಾಡಿದ್ದಾರೆ. ಇಂತಹ ಉದ್ಧಟತನ ತೋರುವ ಕೆಲಸ ಆಗುತ್ತಿದೆ. ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ. ಇಂತಹ ವಾತಾವರಣ ಇದ್ದರೆ ಯಾವ ಅಧಿಕಾರಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಸಾಧ್ಯ ಎಂದರು.

ಈ ಪ್ರಕರಣದ ಬಗ್ಗೆ ಸರ್ಕಾರ ಕಠಿಣವಾದ ಕ್ರಮ ಕೈಗೊಳ್ಳಬೇಕು. ಕಿಡಿಗೇಡಿಗಳಿಗೆ ಯಾವುದೇ ಲಂಗುಲಗಾಮು ಇಲ್ಲ. ಇಲ್ಲಿ ಗೃಹ ಇಲಾಖೆ ವೈಫಲ್ಯ ಎದ್ದು ಕಾಣುತ್ತಿದೆ. ಯಾವ ಯಾವ ಭಾಗದಲ್ಲಿ ಏನೇನು ನಡೆಯುತ್ತದೆ ಎಂದು ಪೊಲೀಸ್ ಇಲಾಖೆಗೆ ಮಾಹಿತಿ ಇರುತ್ತದೆ. ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ಮಾಡುವ ವಾತಾವರಣ ಇಲ್ಲ. ವರ್ಗಾವಣೆ ಮಾಡಿ ಹಣವಸೂಲಿ ಮಾಡುತ್ತಾ ನಿಂತರೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರಾ. ಸರ್ಕಾರದ ನಡೆಯಿಂದಲೇ ಇಂತಹ ಘಟನೆ ಜರುಗುತ್ತಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಡಿ.ಕೆ ಸುರೇಶ್ ಜನ ಸಂಪರ್ಕ ಸಭೆ ವಿಚಾರವಾಗಿ ಮಾತನಾಡಿದ ಅವರು, ಈಗ ಮಾಡಿ ಏನು ಮಾಡುತ್ತಾರೆ. ಐದು ವರ್ಷ ಮಾಡದೆ ಈಗ ಜನ ಸಂಪರ್ಕ ಸಭೆ ಮಾಡುತ್ತಿರುವುದು ಚುನಾವಣೆಗೆ. ಈಗ ಬಂದು ಡ್ರಾಮ ಮಾಡಿದರೆ ಜನ ಕೇಳುತ್ತಾರಾ..? ಜನ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ. ಎರಡು ಮೂರು ತಿಂಗಳಲ್ಲಿ ಜನ ಹೇಳಿದ ಸಮಸ್ಯೆಗೆ ಪರಿಹಾರ ಕೊಟ್ರಾ..? ಅಧಿಕಾರಿಗಳು ಕೆಲಸ ಮಾಡಿಲ್ಲ ಅಂದ್ರೆ ರಾಮನಗರ ಬಿಟ್ಟು ಹೋಗಿ ಅಂದ್ರಂತೆ. ಅದನ್ನು ಬಿಟ್ಟು ಏನಾದರೂ ಕೆಲಸ ಆಗಿದೆಯೇ ಎಂದು ಪ್ರಶ್ನಿಸಿದರು.
ಕನಿಷ್ಠ 50 ಜನರನ್ನಾದರೂ ಪಕ್ಷ ಕರೆ ತರಬೇಕು ಎಂದು ಪಕ್ಷದ ಶಾಸಕರಿಗೆ ಸಿಎಂ ಹೇಳಿದ್ದಾರೆ. ಪ್ರತಿ ನಿತ್ಯ ನಮ್ಮ ಎಂಎಲ್‌ಎ ಗಳ ಮನೆ ಮುಂದೆ ಯಾಕೆ ಹೋಗುತ್ತೀರಿ. ಒಳ್ಳೆ ಕೆಲಸ ಮಾಡುತ್ತೀರಾ ಅಂದರೆ ಎಲ್ಲರನ್ನು ಕರೆದುಕೊಂಡು ಹೋಗಿ ಅಂತಾ ನಾನೇ ಕಳುಹಿಸುತ್ತೇನೆ ಎಂದು ಲೇವಡಿ ಮಾಡಿದ ಕುಮಾರಸ್ವಾಮಿ ಲೋಕಸಭೆ ಚುನಾವಣೆ ಆದ ಮೇಲೆ ಬಿಜೆಪಿ ಜೆಡಿಎಸ್ ಈ ರಾಜ್ಯದಲ್ಲಿ ಇರಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಲೋಕಸಭೆ ಚುನಾವಣೆ ಆದ ಮೇಲೆ ಈ ರಾಜ್ಯದಲ್ಲಿ ಮಾತ್ರ ಅಲ್ಲ. ಈ ದೇಶದಲ್ಲಿ ಕಾಂಗ್ರೆಸ್ ಇರುತ್ತದೆಯೇ ಎಂದು ಯೋಚನೆ ಮಾಡಲಿ ಎಂದು ಹೇಳಿದ್ದಾರೆ.

ಜೆಡಿಎಸ್ ರೈತ ಸಾಂತ್ವನ ಯಾತ್ರೆಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿರುವ ಬಗ್ಗೆ ಮಾತನಾಡಿದ ಅವರು, ನಿನ್ನೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಗಮನಿಸಿದ್ದೇನೆ. ನಾನೂ ಕೂಡಾ ಟ್ವೀಟ್ ಮಾಡಿ ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ. ಸರ್ಕಾರದಲ್ಲಿ ನಮ್ಮ ಜವಾಬ್ದಾರಿ ಏನಿದೆ ಅದನ್ನು ಮಾಡುತ್ತಿದ್ದೇವೆ. ರೈತರ ಹಿತಕ್ಕಾಗಿ ಯಾತ್ರೆ ಮಾಡಲು ಮುಂದಾಗಿದ್ದೇವೆ. ಕೇಂದ್ರ ಸರ್ಕಾರದಿಂದ ಹಣ ಪಡೆಯುವ ಕೆಲಸ ಆಗಬೇಕು ಎಂದರು.
ಸಿಎಂ ಹೇಳಿದ್ದಾರೆ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಜೊತೆ ಚೆನ್ನಾಗಿದ್ದಾರೆ ಈ ಬಗ್ಗೆ ಚರ್ಚೆ ಮಾಡಲಿ ಅಂತ. ಕೇಂದ್ರ ಸರ್ಕಾರದ ಜೊತೆ ರಾಜ್ಯದ ಪರವಾಗಿ ನಾವು ಧ್ವನಿಎತ್ತುವ ಕೆಲಸ ಮಾಡುತ್ತಿದ್ದೇವೆ.ಇವರು ಕೇಂದ್ರ ಕಡೆ ಕೈ ತೋರುವ ಬದಲು ಇವರ ಕೆಲಸ ಇವರು ಮಾಡಲಿ ಎಂದರು.
ಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಜೆಡಿಎಸ್-ಬಿಜೆಪಿಯವರನ್ನು ಕಾಂಗ್ರೆಸ್‌ಗೆ ಕರೆತರುವ ಬಗ್ಗೆ ಚರ್ಚೆ ಆಗಿದೆ. ಅವರು ನಾಡಿನ ಜನತೆ ಬಗ್ಗೆ ಚರ್ಚೆ ಮಾಡುವುದಕ್ಕೆ ಮೀಟಿಂಗ್ ಮಾಡಿಲ್ಲ. ಕೇವಲ ರಾಜಕೀಯಕ್ಕೆ ಮೀಟಿಂಗ್ ಮಾಡಿದ್ದಾರೆ. ಲೋಕಸಭಾ ಚುನಾವಣೆ ಗೆಲ್ಲಲು ಮೀಟಿಂಗ್ ಮಾಡಿದ್ದಾರೆ. ಅವರಿಗೆ ರೈತರ ಸಮಸ್ಯೆಗಳು ಬೇಕಿಲ್ಲ ಎಂದು ಕಿಡಿಕಾರಿದರು.
-
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್












Click it and Unblock the Notifications