ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಯ ಸಿದ್ಧತಾ ಪರೀಕ್ಷೆ: ಕುಮಾರಸ್ವಾಮಿ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಸೆಪ್ಟೆಂಬರ್ 28: "ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಪಕ್ಷ ಸಿದ್ಧವಾಗಿದೆ," ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಎರಡೂ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ ಕೂಡಲೇ ಬಿಡದಿಯ ತಮ್ಮ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, "ರಾಜ್ಯದಲ್ಲಿ ಎರಡು ಕ್ಷೇತ್ರಗಳ ಉಪ ಚುನಾವಣೆ ದಿನಾಂಕ ಪ್ರಕಟ ಆಗಿದೆ. ಇದನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ," ಎಂದರು.

Breaking: ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆBreaking: ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆ

"ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ಶಾಸಕರ ಅಕಾಲಿಕ ಮರಣ ಹೊಂದಿದ್ದರು. ಈ ಕಾರಣಕ್ಕಾಗಿ ಇದೀಗ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಜೆಡಿಎಸ್ ಉಪ ಚುನಾವಣೆಗೆ ಸಿದ್ಧವಾಗಿದೆ," ಎಂದು ಮಾಜಿ ಸಿಎಂ ಎಚ್‌ಡಿಕೆ ತಿಳಿಸಿದರು.

Former CM HD Kumaraswamy Reaction On Sindagi And Hanagal By Election

"ಸೋಮವಾರದಿಂದ ಜೆಡಿಎಸ್ ಪಕ್ಷದ ಕಾರ್ಯಕರ್ತರಿಗಾಗಿ ವಿನೂತನ ಕಾರ್ಯಗಾರ ಮಾಡುತ್ತಿದ್ದೇವೆ. ಈ ಸಮಯದಲ್ಲಿಯೇ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದಾರೆ. ಇದು ನಮ್ಮ ಪಕ್ಷಕ್ಕೆ ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ಧತಾ ಪರೀಕ್ಷೆಯಂತೆ ಬಂದಿದೆ. ಈಗಾಗಲೇ ನಯಾಜ್‌ರನ್ನು ಹಾನಗಲ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದೇವೆ. ಅವರು ಸಕ್ರಿಯವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ," ಎಂದು ಹೇಳಿದರು.

"ಇನ್ನು ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಐವರು ಜೆಡಿಎಸ್ ಪಕ್ಷದ ಟಿಕೆಟ್ ಕೇಳುತ್ತಿದ್ದಾರೆ. ಈಗಾಗಲೇ ಚರ್ಚೆಗಳು ಕೂಡ ನಡೆಯುತ್ತಿವೆ. ಎರಡೂ ಕ್ಷೇತ್ರದಲ್ಲೂ ಅಭ್ಯರ್ಥಿಗಳನ್ನು ಹಾಕುತ್ತೇವೆ ಹಾಗೂ ಚುನಾವಣೆಗೆ ಸಾಮೂಹಿಕ ನಾಯಕತ್ವದಲ್ಲಿ ಹೋಗುತ್ತೇವೆ. ಇಂದಿನ ಸಭೆಯಲ್ಲಿ ಈ ಬಗ್ಗೆಯೂ ಚರ್ಚೆ ಮಾಡುತ್ತೇವೆ," ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾಹಿತಿ ನೀಡಿದರು.

"ಹಾನಗಲ್ ಮತ್ತು ಸಿಂದಗಿ ಎರಡು ಕ್ಷೇತ್ರಗಳಿಗೂ ಜೆಡಿಎಸ್ ಪಕ್ಷದಿಂದ ಉಸ್ತುವಾರಿಗಳನ್ನು ನೇಮಕ ಮಾಡುತ್ತೇವೆ. ಮಂಗಳವಾರ ಕಾರ್ಯಾಗಾರ ಮುಗಿದ ಬಳಿಕ ಉಸ್ತುವಾರಿಗಳ ನೇಮಕದ ಬಗ್ಗೆ ಸಭೆ ಮಾಡಿ ತೀರ್ಮಾನಿಸುತ್ತೇವೆ," ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

Former CM HD Kumaraswamy Reaction On Sindagi And Hanagal By Election

ಇದೇ ವೇಳೆ, "ಹಾನಗಲ್ ಮತ್ತು ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆದ್ದು ಬರಲಿದ್ದಾರೆ. ಎರಡೂ ಕಡೆ ನಮ್ಮ ಪಕ್ಷಕ್ಕೆ ಉತ್ತಮ ನೆಲೆ ಇದೆ. ಗೆಲುವಿಗಾಗಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು," ಎಂದು ಜೆಡಿಎಸ್ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಭರವಸೆ ವ್ಯಕ್ತಪಡಿಸಿದರು.

ಹಾನಗಲ್, ಸಿಂದಗಿ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆ
ರಾಜ್ಯದ ಹಾವೇರಿ ಜಿಲ್ಲೆಯ ಹಾನಗಲ್ ಹಾಗೂ ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಅಕ್ಟೋಬರ್ 1ರಿಂದ ಅಧಿಸೂಚನೆ ಹೊರಡಿಸಲಾಗುತ್ತದೆ.
ಅಕ್ಟೋಬರ್ 8ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ.
ಅಕ್ಟೋಬರ್ 11ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.
ಅಕ್ಟೋಬರ್ 13 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ.
ಅಕ್ಟೋಬರ್ 30ರಂದು 2 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಮತ್ತು ಅಂದೇ ಫಲಿತಾಂಶ ಹೊರಬೀಳಲಿದೆ.

ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಸಿ.ಎಂ. ಉದಾಸಿ ನಿಧನದಿಂದ ತೆರವಾಗಿತ್ತು. ಇನ್ನು ಎಂ.ಸಿ. ಮನಗೂಳಿ ನಿಧನದಿಂದಾಗಿ ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರ ತೆರವಾಗಿತ್ತು. ಇದೀಗ ರಾಜ್ಯದ ಎರಡೂ ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದ್ದು, ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

English summary
JDS party is ready for the by-elections in the Hanagal and Sindagi assembly constituencies Says Former Chief Minister HD Kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X