ಮೇ 13ಕ್ಕೆ ಎಚ್‌.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಭವಿಷ್ಯ

ರಾಮನಗರ, ಏಪ್ರಿಲ್‌, 30: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಂಚರತ್ನ ರಥಯಾತ್ರೆಯ ಮೂಲಕ ರಾಜ್ಯದ ಉದ್ದಗಲಕ್ಕೂ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಹಾಗಾಗಿ ಅವರು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡಲು ಆಗುತ್ತಿಲ್ಲ. ಅದರಿಂದ ನೀವುಗಳೇ ಆಭ್ಯರ್ಥಿ ಎಂದು ತಿಳಿದು ಮೇ 10 ರಂದು ಮತ ನೀಡಿ, ಮೇ 13ರಂದು ನಿಮ್ಮ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವಂತೆ ತಾಯಿ ಭುವನೇಶ್ವರಿಯಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಚನ್ನಪಟ್ಟಣದಲ್ಲಿ ತಿಳಿಸಿದರು.

ಚುನಾವಣಾ ದಿನಾಂಕ ಸಮೀಪಿಸುತ್ತಿರುವ ಹಿನ್ನೆಲೆ ರಾಷ್ಟ್ರ ಹಾಗೂ ರಾಜ್ಯ ನಾಯಕರು ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಪಕ್ಷದ ಆಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುವ ಮೂಲಕ ಅಭ್ಯರ್ಥಿಯನ್ನು ಗೆಲುವಿನ ದಡ ಸೇರಿಸಲು ಶ್ರಮಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಪರ್ದೆಯಿಂದಾಗಿ ಹೈ ವೋಲ್ಟೇಜ್ ಕ್ಷೇತ್ರ ಎಂದು ಬಿಂಬತವಾಗಿರು ಬೊಂಬೆನಾಡು ಚನ್ನಪಟ್ಟಣ ಕ್ಷೇತ್ರದಲ್ಲಿ ಇದೀಗ ಚುನಾವಣಾ ಕಣ ಮತ್ತಷ್ಟು ರಂಗೇರಿದೆ.

HD Kumaraswamy will be State Chief Minister on May 13: HD DeveGowda Prediction

ಸಿ.ಪಿ.ಯೋಗೇಶ್ವರ್ ಪರ ಮೋದಿ ಮತಬೇಟೆ

ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶದಲ್ಲಿ ಪಾಲ್ಗೊಂಡು ಮತಯಾಚನೆ ಮಾಡಿದರು. ಬಿಜೆಪಿ ಆಭ್ಯರ್ಥಿ ಸಿ.ಪಿ.ಯೋಗೇಶ್ವರ್, ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆತಂದು ಪ್ರಚಾರ ಮಾಡುವ ಮೂಲಕ ಮತದಾರನ್ನು ತಮ್ಮತ ಸೆಳೆಯುವ ಪ್ರಯತ್ನ ನಡೆಸಿರು. ಬಿಜೆಪಿಯ ತಂತ್ರಕ್ಕೆ ಠಕ್ಕರ್ ಕೊಡಲು ಜೆಡಿಎಸ್ ಮೋದಿ ಸಮಾವೇಶದಂದೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಚುನಾವಣಾ ಪ್ರಚಾರಕ್ಕೆ ಧುಮುಕುವಂತೆ ಮಾಡಿದರು.

ಮೇ 13ಕ್ಕೆ HDK ಸಿಎಂ: ಎಚ್.ಡಿ.ಡಿ ಭವಿಷ್ಯ

ತನ್ನ 92ನೇ ಇಳಿ ವಯಸ್ಸಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಮ್ಮ ಪುತ್ರ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಪರವಾಗಿ ಚನ್ನಪಟ್ಟಣದ ಇಗ್ಗಲೂರು ಗ್ರಾಮದಲ್ಲಿ ಚುನಾವಣೆ ಪ್ರಚಾರ ಮಾಡಿದರು. ಈ ರಾಜ್ಯದಲ್ಲಿ ಬಡವರ ಪರ ಇರುವ ರಾಜಕಾರಣಿ ಒಬ್ಬರೇ, ಅದು ಕುಮಾರಸ್ವಾಮಿ. ಹಾಗಾಗಿ ಈ ಬಾರಿ ಅವರಿಗೆ ನೀವು ಆರ್ಶೀವಾದ ಮಾಡಬೇಕು. ಅವರು ಪಂಚರತ್ನ ರಥಯಾತ್ರೆ ಮೂಲಕ ಇಡೀ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದಾರೆ ಎಂದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡಲು ಬರಲು ಸಾಧ್ಯವಾಗಿಲ್ಲ, ಅವರ ಪರವಾಗಿ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕಿದೆ. ಚನ್ನಪಟ್ಟಣ ನಮಗೆ ಕರ್ಮಭೂಮಿ ಆಗಿದೆ‌. ಮೇ 10 ರಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ ನೀಡಿ ಗೆಲ್ಲಿಸಿ, ಮೇ 13ಕ್ಕೆ ಅವರು ಸಿಎಂ ಅಗುತ್ತಾರೆ‌ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭವಿಷ್ಯ ನುಡಿದರು.

ಇಗ್ಗಲೂರು ಗ್ರಾಮದಲ್ಲಿ ಪ್ರಚಾರ ನಡೆಸಿ ನಂತರ ಬೇರೆ ಕ್ಷೇತ್ರಗಳಿಗೆ ಹೋಗುತ್ತೇನೆ. ದೇಶದ ಪ್ರಧಾನಿಗಳು ತಮ್ಮ ಆಭ್ಯರ್ಥಿಯ ಪರವಾಗಿ ಪ್ರಚಾರ ನಡೆಸಲು ಬರುತ್ತಿದ್ದಾರೆ ಎಂದು ಗೊತ್ತಿದೆ. ಪ್ರಧಾನಿ ಮೋದಿ ಅವರು ಬರುವುದರೊಳಗೆ ನನ್ನ ಕಾರ್ಯಕ್ರಮ ಮುಗಿಯಲಿದೆ. ಪ್ರಧಾನಿಗಳು ತಮ್ಮ ಆಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಬರುವುದನ್ನು ಬೇಡ ಎನ್ನಲು ಆಗುತ್ತಾ? ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಪ್ರತಿಕ್ರಿಯೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+