ಎಚ್ಡಿಡಿ ಹುಟ್ಟುಹಬ್ಬ: ಬಡವರಿಗೆ ದಿನಸಿ ಕಿಟ್ ವಿತರಿಸಿದ ಅಭಿಮಾನಿಗಳು
ರಾಮನಗರ, ಮೇ 18: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ ದೇವೇಗೌಡ ಅವರ 88 ನೇ ಹುಟ್ಟುಹಬ್ಬವನ್ನು ರಾಮನಗರದಲ್ಲಿ ಎಚ್.ಡಿ ಕುಮಾರಸ್ವಾಮಿ ಅಭಿಮಾನಿಗಳು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಿಹಿ ವಿತರಿಸಿದರು. ದಿನಪತ್ರಿಕೆ ಹಂಚುವ ಹುಡುಗರಿಗೆ ದಿನಸಿ ಕಿಟ್ ವಿತರಿಸುವ ಮೂಲಕ ಸರಳವಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಕಾನೂನು ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ""ದೇಶದ ಕೆಂಪು ಕೋಟೆಯ ಮೇಲೆ ಕನ್ನಡದ ಕಂಪನ್ನು ಬೀರಿದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಭಾರತ ದೇಶ ಕಂಡ ಅತ್ಯುತ್ತಮ ರಾಜಕಾರಣಿಗಳಲ್ಲಿ ಒಬ್ಬರು. ತಮ್ಮ ಇಳಿ ವಯಸ್ಸಿನಲ್ಲಿಯೂ ಅವರು ದೇಶದ ಅಭಿವೃದ್ಧಿಗಾಗಿ, ಸಮಾಜದಲ್ಲಿನ ದುರ್ಬಲ ವರ್ಗಗಳ ಒಳಿತಿಗಾಗಿ, ರೈತರ ಸಮಸ್ಯೆಗಳನ್ನು ಕುರಿತು ಹೋರಾಟ ನಡೆಸುತ್ತಿರುವುದು ಎಲ್ಲರಿಗೂ ಮಾದರಿಯಾಗಿದೆ'' ಎಂದರು.

ದೇವೇಗೌಡರು ತಮ್ಮ ಹುಟ್ಟುಹಬ್ಬವನ್ನು ಬಡವರ ಸೇವೆ ಮಾಡುವ ಮೂಲಕ ಆಚರಿಸುವಂತೆ ಕರೆ ನೀಡಿದ್ದಾರೆ. ಅವರ ಆಶಯದಂತೆ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ದಿನಪತ್ರಿಕೆ ವಿತರಿಸುವ ಹುಡುಗರಿಗೆ ದಿನಸಿ ಕಿಟ್ ವಿತರಿಸಿದ್ದೇವೆ. ಶಾರದಾಂಬೆಯಲ್ಲಿ ದೇವೇಗೌಡರಿಗೆ ಆರೋಗ್ಯ, ಆಯಸ್ಸು ನೀಡುವಂತೆ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಕಾನೂನು ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ಜೆಡಿಎಸ್ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಸ್ ಜಯಕುಮಾರ್, ಗ್ರಾಮ ಪಂಚಾಯತಿ ಸದಸ್ಯ ರಾಂಪುರ ಬಾಬು, ಕುಮಾರಣ್ಣ ಅಭಿಮಾನಿಗಳ ಬಳಗದ ರಮೇಶ್, ಶಿವಾಜಿರಾವ್, ಪಿ.ಸುರೇಶ್ ಉಪಸ್ಥಿತರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications