ಉಪ ಚುನಾವಣೆ ಸನಿಹ: ರಾಮನಗರಕ್ಕೆ ಕುಮಾರಸ್ವಾಮಿ ಭೇಟಿ
ಬೆಂಗಳೂರು, ಜು.16: ವಿಧಾನಸಭೆ ಚುನಾವಣೆಯ ಬಳಿಕ, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಕೆ ಎಚ್ಡಿ ಕುಮಾರಸ್ವಾಮಿ ರಾಮನಗರಕ್ಕೆ ಭೇಟಿ ನೀಡುತ್ತಿದ್ದಾರೆ. ರಾಮನಗರ ಉಪಚುನಾವಣೆ ಸನಿಹವಾಗುತ್ತಿದ್ದಂತೆಯೇ ರಾಮನಗರದತ್ತ ಪ್ರಯಾಣ ಬೆಳೆಸಿದ್ದಾರೆ.
ಪ್ರತಿ ಜಿಲ್ಲೆಗಳಲ್ಲೂ ಜನತಾದರ್ಶನ ನಡೆಸುವುದಾಗಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಚುನಾವಣೆಗೂ ಮೊದಲು ಹಲವು ಸಭೆಗಳಲ್ಲಿ ಘೋಷಿಸಿದ್ದರು, ಅದರಂತೆ ತಾವು ಪ್ರತಿನಿಧಿಸಿಕೊಂಡು ಬಂದ ರಾಮನಗರ ಮತ್ತು ಪ್ರತಿನಿಧಿಸುತ್ತಿರುವ ಚನ್ನಪಟ್ಟಣ ಕ್ಷೇತ್ರಗಲ್ಲಿರುವ ಪ್ರದೇಶಗಳಿಗೆ ರಾಮನಗರ ಮೂಲಕವೇ ಜಿಲ್ಲಾ ಜನತಾ ದರ್ಶನ ಆರಂಭಿಸುತ್ತಿದ್ದಾರೆ.
ಕುಮಾರಸ್ವಾಮಿಯವರು ರಾಮನಗರ ಜಿಲ್ಲೆಯ ಚನ್ನಪಟ್ಟಣ ಮತ್ತು ರಾಮನಗರ ಎರಡೂ ಕ್ಷೇತ್ರಗಳಲ್ಲೂ ಜಯಗಳಿಸಿದ್ದರು, ಸದ್ಯ ಚನ್ನಪಟ್ಟಣ ಉಳಿಸಿಕೊಂಡಿದ್ದಾರೆ. ರಾಮನಗರ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ರಾಮನಗರ ಜಿಲ್ಲೆಯಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿರುವ ಎಚ್ಡಿ ಕುಮಾರಸ್ವಾಮಿ ಸೋಮವಾರ(ಜು.16) ರಂದು ರಾಮನಗರಕ್ಕೆ ಭೇಟಿ ನೀಡಲಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲಿದ್ದು ನಂತರ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಕುಮಾರಸ್ವಾಮಿಯವರ ಜತೆಗೆ ಸಚಿವ ಡಿಕೆ ಶಿವಕುಮಾರ್ ಕೂಡ ಸಾಥ್ ನೀಡಲಿದ್ದಾರೆ, ಇಬ್ಬರೂ ಮುಖಂಡರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆಗಳನ್ನು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications