• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉಪ ಚುನಾವಣೆ ಸನಿಹ: ರಾಮನಗರಕ್ಕೆ ಕುಮಾರಸ್ವಾಮಿ ಭೇಟಿ

By Nayana
|

ಬೆಂಗಳೂರು, ಜು.16: ವಿಧಾನಸಭೆ ಚುನಾವಣೆಯ ಬಳಿಕ, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಕೆ ಎಚ್‌ಡಿ ಕುಮಾರಸ್ವಾಮಿ ರಾಮನಗರಕ್ಕೆ ಭೇಟಿ ನೀಡುತ್ತಿದ್ದಾರೆ. ರಾಮನಗರ ಉಪಚುನಾವಣೆ ಸನಿಹವಾಗುತ್ತಿದ್ದಂತೆಯೇ ರಾಮನಗರದತ್ತ ಪ್ರಯಾಣ ಬೆಳೆಸಿದ್ದಾರೆ.

ಪ್ರತಿ ಜಿಲ್ಲೆಗಳಲ್ಲೂ ಜನತಾದರ್ಶನ ನಡೆಸುವುದಾಗಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಚುನಾವಣೆಗೂ ಮೊದಲು ಹಲವು ಸಭೆಗಳಲ್ಲಿ ಘೋಷಿಸಿದ್ದರು, ಅದರಂತೆ ತಾವು ಪ್ರತಿನಿಧಿಸಿಕೊಂಡು ಬಂದ ರಾಮನಗರ ಮತ್ತು ಪ್ರತಿನಿಧಿಸುತ್ತಿರುವ ಚನ್ನಪಟ್ಟಣ ಕ್ಷೇತ್ರಗಲ್ಲಿರುವ ಪ್ರದೇಶಗಳಿಗೆ ರಾಮನಗರ ಮೂಲಕವೇ ಜಿಲ್ಲಾ ಜನತಾ ದರ್ಶನ ಆರಂಭಿಸುತ್ತಿದ್ದಾರೆ.

ಸಂಪುಟ ವಿಸ್ತರಣೆ: ಜು.18ಕ್ಕೆ ಕಾಂಗ್ರೆಸ್‌ ಹೈಕಮಾಂಡ್ ಜತೆ ಚರ್ಚೆ

ಕುಮಾರಸ್ವಾಮಿಯವರು ರಾಮನಗರ ಜಿಲ್ಲೆಯ ಚನ್ನಪಟ್ಟಣ ಮತ್ತು ರಾಮನಗರ ಎರಡೂ ಕ್ಷೇತ್ರಗಳಲ್ಲೂ ಜಯಗಳಿಸಿದ್ದರು, ಸದ್ಯ ಚನ್ನಪಟ್ಟಣ ಉಳಿಸಿಕೊಂಡಿದ್ದಾರೆ. ರಾಮನಗರ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ರಾಮನಗರ ಜಿಲ್ಲೆಯಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿರುವ ಎಚ್‌ಡಿ ಕುಮಾರಸ್ವಾಮಿ ಸೋಮವಾರ(ಜು.16) ರಂದು ರಾಮನಗರಕ್ಕೆ ಭೇಟಿ ನೀಡಲಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲಿದ್ದು ನಂತರ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಕುಮಾರಸ್ವಾಮಿಯವರ ಜತೆಗೆ ಸಚಿವ ಡಿಕೆ ಶಿವಕುಮಾರ್‌ ಕೂಡ ಸಾಥ್‌ ನೀಡಲಿದ್ದಾರೆ, ಇಬ್ಬರೂ ಮುಖಂಡರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆಗಳನ್ನು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

English summary
Chief minister H.D. Kumaraswamy is visiting his earlier home constituency Ramnagara on July 16 .and this is the first visit to their after becoming chief minister. He had resigned from this constituency and by election will be held soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X