ಚನ್ನಪಟ್ಟಣದಿಂದ ಎಚ್ಡಿಕೆ ಗೆದ್ದೇ ಗೆಲ್ಲುತ್ತಾರೆ : ಅನಿತಾ ವಿಶ್ವಾಸ

Posted By: ರಾಮನಗರ ಪ್ರತಿನಿಧಿ
Subscribe to Oneindia Kannada

ರಾಮನಗರ, ಏಪ್ರಿಲ್ 12 : ಚನ್ನಪಟ್ಟಣದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯಾರೇ ಸ್ಪರ್ಧಿಸಿದರೂ ಗೆಲ್ಲುವ ವಿಶ್ವಾಸವಿದೆ ಎಂದು ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ಹೇಳಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಚನ್ನಪಟ್ಟಣದಲ್ಲಿರುವ ಜೆಡಿಎಸ್ ಕಚೇರಿಗೆ ಗುರುವಾರ ಆಗಮಿಸಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಚನ್ನಪಟ್ಟಣದಿಂದ ಸ್ಪರ್ಧೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದರು.

ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳಲ್ಲಿ ಪಕ್ಷದ ಟ್ರೆಂಡ್ ಚೆನ್ನಾಗಿದ್ದು, ರಾಜ್ಯದಲ್ಲೂ ಕೂಡ ಜೆಡಿಎಸ್ ಪರವಾದ ಅಲೆಯಿದೆ. ಮುಂದಿನ ವಾರದಿಂದ ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಬಹಿರಂಗ ಪ್ರಚಾರದಲ್ಲಿ ಭಾಗವಹಿಸುತ್ತೇನೆ ಎಂದು ಅನಿತಾ ನುಡಿದರು.

ನೀವು ಸರ್ಕಾರದ ಗುಲಾಮರಾಗಿ ಕೆಲಸ ಮಾಡಬೇಡಿ: ಎಚ್ಡಿಕೆ

ನಿಖಿಲ್ ಕೂಡ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತಾನೆ. ಕುಮಾರಸ್ವಾಮಿಯವರಿಗೆ ಕಳೆದ ಎಂ.ಪಿ ಚುನಾವಣೆಯಲ್ಲಿ ಚನ್ನಪಟ್ಟಣದ ಜನತೆ ಮತ ಹಾಕಿದ್ದರು. ಆದರೆ ಈಗ ಮತ್ತೊಂದು ಅವಕಾಶ ಒದಗಿ ಬಂದಿದ್ದು, ಕ್ಷೇತ್ರದ ಜನರು ಬಹಳ ಸಂತೋಷವಾಗಿದ್ದಾರೆ. ಕುಮಾರಸ್ವಾಮಿಯವರು ಈ ಮಟ್ಟಕ್ಕೆ ಬೆಳೆಯಬೇಕಾದರೆ ಚನ್ನಪಟ್ಟಣ ಜನರ ಕೊಡುಗೆ ಸಾಕಷ್ಟಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಡಿಬೇಟ್ : ಒಬ್ಬರು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದು ಸರಿಯೇ?

hdk win in channpattanna: hope Anitha kumaraswamy

ಚನ್ನಪಟ್ಟಣ ಮಾಜಿ ಜೆಡಿಎಸ್ ಶಾಸಕ ಎಂ.ಸಿ.ಅಶ್ವಥ್ ಮಾತನಾಡಿ, ಚನ್ನಪಟ್ಟಣದಲ್ಲಿ ಕುಮಾರಸ್ವಾಮಿಯವರ ಗೆಲುವು ನಿಶ್ವಿತ. ಅವರ ಗೆಲುವನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಹಾಗೇ ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ 70 ಸಾವಿರಕ್ಕೂ ಹೆಚ್ಚು ಮತಗಳು ಬಂದಿದ್ದವು, ನಾನು ಗೆದ್ದಾಗಲೂ 60 ಸಾವಿರಕ್ಕೂ ಹೆಚ್ಚು ಮತಗಳು ಬಂದಿದ್ದವು ಎಂದು ಹಿಂದಿನ ಚುನಾವಣೆಯ ಮೆಲುಕು ಹಾಕಿದರು.

ಈ ಬಾರಿ 2 ಲಕ್ಷದ 18 ಸಾವಿರಕ್ಕೂ ಹೆಚ್ಚು ಮತಗಳು ಚನ್ನಪಟ್ಟಣ ಕ್ಷೇತ್ರದಲ್ಲಿದೆ. ಈ ಬಾರಿ ಕೂಡ ಜೆಡಿಎಸ್ ಗೆ ಅತಿಹೆಚ್ಚು ಮತಗಳು ಬರಲಿವೆ. ಈ ಬಾರಿ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರನ್ನ ಕ್ಷೇತ್ರದ ಜನತೆ ಗೆಲ್ಲಿಸಿದರೆ ರಾಜ್ಯದ ಜನರೇ ಚನ್ನಪಟ್ಟಣದ ಕಡೆ ತಿರುಗಿ ನೋಡಲಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನ ಗೆಲ್ಲಿಸಿದ ಕೀರ್ತಿ ಚನ್ನಪಟ್ಟಣದ ಜನರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ಮೇ 12ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 15ರಂದು ಫಲಿತಾಂಶ ಹೊರಬೀಳಲಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರ ವಿರುದ್ಧ ಸಿಪಿ ಯೋಗೇಶ್ವರ ಅವರು ಬಿಜೆಪಿಯಿಂದ ಸ್ಪರ್ಧೆಗಿಳಿಯಲಿದ್ದಾರೆ. ಇವರಿಬ್ಬರ ಕಾದಾಟದಿಂದ ಕ್ಷೇತ್ರದತ್ತ ಎಲ್ಲರೂ ನೋಡುವಂತಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Anitha Kumaraswamy is confident that H D Kumaraswamy will emerge victorious from Channapatna in Ramanagara district in Karnataka Assembly Elections 2018 to be held on 12th May. Election results will be announced on 15th May. C P Yogeshwar is contesting in this constituency from BJP.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ