ರಾಮನಗರ ಜಿಲ್ಲೆಯಾದ್ಯಂತ ವರುಣನ ಅಬ್ಬರ
ರಾಮನಗರ, ಏಪ್ರಿಲ್ 29: ಕೊರೊನಾ ವೈರಸ್ ಭೀತಿಯಲ್ಲಿ ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಈ ನಡುವೆ ರಾಮನಗರ ಮತ್ತು ಚನ್ನಪಟ್ಟಣದಲ್ಲಿ ವರುಣ ಅಬ್ಬರಿಸಿದೆ.
ಬೆಳಿಗ್ಗೆ 4 ಗಂಟೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ರಾಮನಗರ ಜಿಲ್ಲೆಯಾದ್ಯಂತ ಮಳೆಯಾಗಿರುವ ಕಾರಣ ರಸ್ತೆಯಲ್ಲಿ ನೀರು ನಿಂತಿದೆ. ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಬೆಳ್ಳಂಬೆಳಗ್ಗೆ ಜೋರು ಮಳೆಯಾಗಿದೆ. ಮಾಗಡಿ, ಕನಕಪುರ ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಸದ್ಯ ಲಾಕ್ ಡೌನ್ ಇರುವುದರಿಂದ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಿಲ್ಲ. ತುಂತುರು ಮಳೆ ಮುಂದುವರೆದಿದ್ದು, ಜನರು ವಿನಾಕಾರಣ ರಸ್ತೆಗೆ ಇಳಿಯವುದನ್ನು ತಗ್ಗಿಸಿದೆ.












Click it and Unblock the Notifications