ಜೆಡಿಎಸ್ ವರಿಷ್ಠರ ತೀರ್ಮಾನಕ್ಕೆ ಬದ್ಧ : ಅನಿತಾ ಕುಮಾರಸ್ವಾಮಿ

By: ರಾಮನಗರ ಪ್ರತಿನಿಧಿ
Subscribe to Oneindia Kannada

ರಾಮನಗರ, ನವೆಂಬರ್15: ನನಗೆ ರಾಜಕೀಯದಷ್ಟೇ ನನ್ನ ಸಂಸಾರ ಮುಖ್ಯ. ನಮ್ಮ ಯಜಮಾನರು ಖುಷಿಯಿಂದ ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ನಾನು ಬದ್ಧ ಎಂದು ರಾಮನಗರದಲ್ಲಿ ಇಂದು ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಇಂದು ರಾಮನಗರದಲ್ಲಿ ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮಗಳಿಗೆ ಈ ಹೇಳಿಕೆ ನೀಡಿದ್ದಾರೆ.

I adhere to the decisions of the JDS leadership : Anita Kumaraswamy

ಚನ್ನಪಟ್ಟಣ ಕ್ಷೇತ್ರದಿಂದ 2018ರ ವಿಧಾನಸಭೆ ಚುನಾವಣೆಗೆ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅನಿತಾ ಕುಮಾರಸ್ವಾಮಿ, "ನನ್ನ ಸ್ಪರ್ಧೆಯ ಬಗ್ಗೆ ಪಕ್ಷದ ವರಿಷ್ಠರಾದ ಹೆಚ್.ಡಿ.ದೇವೇಗೌಡರು ಹಾಗೂ ನನ್ನ ಪತಿ ಹೆಚ್.ಡಿ.ಕುಮಾರಸ್ವಾಮಿಯವರು ತೀರ್ಮಾನ ಮಾಡುತ್ತಾರೆ," ಎಂದು ಹೇಳಿದರು.

I adhere to the decisions of the JDS leadership : Anita Kumaraswamy

"ಚನ್ನಪಟ್ಟಣ ಕ್ಷೇತ್ರದ ಮತದಾರರು, ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರು ನನ್ನ ಮೇಲೆ ಇಟ್ಟಿರುವ ಅಭಿಮಾನಕ್ಕೆ ನಾನು ಚಿರಋಣಿ. ಆದರೆ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ," ಎಂದು ಹೇಳುವ ಮೂಲಕ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರಕ್ಕೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Today, JDS leader Anita Kumaraswamy has stated in Ramanagar that, " I adhere to the decisions of the JDS leadership.”

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ