ಯಡಿಯೂರಪ್ಪ ಛಲದಂಕ ಮಲ್ಲ: ಡಿಕೆಶಿ ಮಾತು ವೈರಲ್

ರಾಮನಗರ, ಡಿಸೆಂಬರ್ 10: ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಗೆಲುವು ಸಾಧಿಸುತ್ತಿದ್ದಂತೆಯೇ ಈ ಹಿಂದೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್, ವಿಧಾನಸಭೆಯಲ್ಲಿ ಯಡಿಯೂರಪ್ಪನವರ ಛಲದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಮಾತುಗಳು ಎಲ್ಲೆಡೆ ವೈರಲ್ ಆಗಿವೆ.

ಹಿಂದೆ ಡಿ.ಕೆ.ಶಿವಕುಮಾರ್ ಅವರು ಸದನದಲ್ಲಿ ಮಾತನಾಡುತ್ತಿದ್ದ ವೇಳೆ, "ಯಡಿಯೂರಪ್ಪ ಅವರ ಛಲವನ್ನು ನಾನು ಇಷ್ಟ ಪಡುತ್ತೇನೆ" ಎಂದು ಅಭಿನಂದಿಸಿದ್ದರು. ಈಗ ಆ ಮಾತು ಸಖತ್ ವೈರಲ್ ಆಗಿದೆ.

"ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ಧರ್ಮರಾಯನ ಧರ್ಮತ್ವ ಇರಬೇಕು, ದಾನಶೂರ ಕರ್ಣನ ದಾನತ್ವ ಇರಬೇಕು, ಅರ್ಜುನನ ಗುರಿ ಇರಬೇಕು, ಭೀಮನ ಬಲ ಇರಬೇಕು, ವಿದೂರನ ನೀತಿ ಇರಬೇಕು, ಕೃಷ್ಣನ ತಂತ್ರದ ಜೊತೆಗೆ ಯಡಿಯೂರಪ್ಪರ ಛಲವೂ ಇರಬೇಕೆಂದು" ಹೇಳಿದ್ದರು.

I Like Yediyurappa Will Power: Viral Of DK Shivakumar Speech

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಧರ್ಮರಾಯ, ಅರ್ಜುನ, ಕೃಷ್ಣನಿಗೆ ಹೋಲಿಕೆ ಮಾಡಿದ್ದ ಡಿ.ಕೆ.ಶಿವಕುಮಾರ್ ಅವರು ಛಲದಂಕ ಮಲ್ಲ ಎಂದು ಬಣ್ಣಿಸಿದ್ದರು. ಉಪ ಚುನಾವಣೆ ನಡೆದ 15 ಕ್ಷೇತ್ರಗಳಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು 12 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

ಅಲ್ಪಮತದ ಸರ್ಕಾರ ಎಂದು ಟೀಕೆ ಎದುರಿಸುತ್ತಿದ್ದ ಯಡಿಯೂರಪ್ಪ ಈಗ ಬಹುಮತದ ಸರ್ಕಾರದ ಮುಖ್ಯಮಂತ್ರಿಯಾಗಿದ್ದಾರೆ. ಡಿ.ಕೆ.ಶಿವಕುಮಾರ್ ಅವರೂ ಕೂಡಾ ಬಿಜೆಪಿ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಸದ್ಯ ಯಡಿಯೂರಪ್ಪ ಅವರಿಗೆ ಹೊಗಳಿದ್ದ ಶಿವಕುಮಾರ್ ಅವರ ಹಳೆಯ ವಿಡಿಯೋ ಈಗ ಮತ್ತೆ ವೈರಲ್ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+