• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೋದಿಗೆ ತಾಕತ್ತಿದ್ರೆ ಚೀನಾ ವಸ್ತುಗಳನ್ನು ಬ್ಯಾನ್ ಮಾಡಲಿ: ಡಿ.ಕೆ ಸುರೇಶ್ ಸವಾಲ್

By ರಾಮನಗರ ಪ್ರತಿನಿಧಿ
|

ರಾಮನಗರ, ಜೂನ್ 19: ತಾಕತ್ತಿದ್ದರೆ ಚೀನಾ ವಸ್ತುಗಳನ್ನು ಬ್ಯಾನ್ ಮಾಡಿ ತೋರಿಸಲಿ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಂಸದ ಡಿ.ಕೆ ಸುರೇಶ್ ಬಹಿರಂಗವಾಗಿ ಸವಾಲು ಹಾಕಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್, ಕೇಂದ್ರದಲ್ಲಿ ಅವರದ್ದೇ ಸರಕಾರ ಇದೆ. ಈ ಕೂಡಲೇ ಚೀನಾ ವಸ್ತುಗಳನ್ನು ಬ್ಯಾನ್ ಮಾಡಲಿ ಎಂದು ಸವಾಲು ಹಾಕಿದರು.

ರಾಮನಗರ: ಚೀನಿ ವಸ್ತುಗಳನ್ನು ಮುರಿದು ಹಾಕಿ, ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಪ್ರಧಾನಿ ನರೇಂದ್ರ ಮೋದಿಗೆ ಈ ವಿಚಾರದಲ್ಲಿ ರಾಹುಲ್ ಗಾಂಧಿ ಅವರೇ ಬೆಂಬಲ ನೀಡಿದ್ದಾರೆ ಎಂದ ಅವರು, ನೋಟ್ ಬ್ಯಾನ್ ವಿಚಾರ, ಲಾಕ್ ಡೌನ್ ವಿಚಾರದಲ್ಲಿ ದಿಟ್ಟತನ ತೋರಿದ ಪ್ರಧಾನಿ ನರೇಂದ್ರ ಮೋದಿ ಚೀನಾ ವಸ್ತುಗಳನ್ನು ಏಕೆ ಬ್ಯಾನ್ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಅಂದು ವಿರೋಧ ಪಕ್ಷಗಳ ವಿರೋಧದ ನಡುವೆಯೂ ನೋಟ್ ಬ್ಯಾನ್, ಲಾಕ್ ಡೌನ್ ಮಾಡಿದರು. 70 ವರ್ಷದ ಸ್ನೇಹಿತನಾದ ರಷ್ಯಾ ದೇಶವನ್ನು ಇಷ್ಟು ದಿನ ಕಡೆಗಣಿಸಿ, ಇದೀಗ ರಷ್ಯಾ ಜತೆಗೆ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ಲೇವಡಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಇತರ ದೇಶಗಳನ್ನು ಸುತ್ತಿ ನೆರೆ ರಾಷ್ಟ್ರಗಳ ಜೊತೆಗಿನ ಬಾಂಧವ್ಯವನ್ನು ಕೆಡಿಸಿಕೊಂಡಿದ್ದಾರೆ ಎಂದು ರಾಮನಗರದಲ್ಲಿ ಸಂಸದ ಡಿ.ಕೆ ಸುರೇಶ್ ಹೇಳಿದರು.

English summary
MP DK Suresh has openly challenged the central government leaded by Prime Minister Narendra Modi to ban the Chinese goods.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X