4 ಕೋಟಿ ವೆಚ್ಚದ ಕೈಗಾರಿಕಾ ತರಬೇತಿ ಸಂಸ್ಥೆಗೆ ಶಂಕುಸ್ಥಾಪನೆ
ರಾಮನಗರ, ನವೆಂಬರ್ 26: ಜಿಲ್ಲೆಯ ಮಾಗಡಿ ತಾಲ್ಲೂಕಿನ ಮಾಡಬಾಳ್ ಹೋಬಳಿ ಮೇಲಹಳ್ಳಿ ಗ್ರಾಮದಲ್ಲಿ 4.15 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗೆ ಉಪಮುಖ್ಯಮಂತ್ರಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.
ಮಾಗಡಿ ತಾಲ್ಲೂಕಿನಲ್ಲಿ 3.99 ಕೋಟಿ ರೂಪಾಯಿ ವೆಚ್ಚದಲ್ಲಿ ಹಮ್ಮಿಕೊಂಡಿರುವ ಚಕ್ರಬಾವಿ ಹಾಗೂ ಇತರೆ 12 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿ ಯೋಜನೆಯನ್ನು ಪರಿಶೀಲಿಸಿದರು.

ಕಾಮಗಾರಿ ಪೂರ್ಣಗೊಂಡರೆ ಹನ್ನೆರಡು ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲಿದ್ದು, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಸಚಿವರೊಂದಿಗೆ ಮಾಗಡಿ ಶಾಸಕ ಎ.ಮಂಜುನಾಥ್, ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಚಂದ್ರಹಾಸ್ ಉಪಸ್ಥಿತರಿದ್ದರು.
ಉಪ ಮುಖ್ಯಮಂತ್ರಿಗಳಿಂದ ಹಕ್ಕುಪತ್ರ ವಿತರಣೆ: ಇದೇ ಸಂದರ್ಭ ಮಾಗಡಿಯ ಜೇನುಕಲ್ಲು ಪಾಳ್ಯದಲ್ಲಿನ ಸರ್ಕಾರಿ ಜಮೀನಿನಲ್ಲಿ ವಾಸವಾಗಿರುವ 16 ಮಂದಿಗೆ ಅಶ್ವತ್ಥ ನಾರಾಯಣ್ ಅವರು 94 ಸಿ ಹಕ್ಕುಪತ್ರ ವಿತರಿಸಿದರು. ಹಕ್ಕು ಪತ್ರ ಪಡೆದುಕೊಂಡವರು ಮನೆ ನಿರ್ಮಾಣ ಮಾಡಿಕೊಂಡು ಉತ್ತಮ ರೀತಿ ಜೀವನ ನಡೆಸಿ ಸಮಾಜದ ಮುಖ್ಯವಾಹಿನಿಗೆ ಬಂದು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದುವಂತೆ ಶುಭ ಹಾರೈಸಿದರು.
ಮಾವು ಸಂಸ್ಕರಣಾ ಘಟಕಕ್ಕೆ ಸಿದ್ಧತೆ: ಜಿಲ್ಲೆಯಲ್ಲಿ ಮಾವು ಸಂಸ್ಕರಣಾ ಘಟಕ ಪ್ರಾರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ರೇಷ್ಮೆ ಇಲಾಖೆಯಿಂದ 15 ಎಕರೆ ಸ್ಥಳವನ್ನು ಘಟಕ ನಿರ್ಮಾಣಕ್ಕಾಗಿ ತೋಟಗಾರಿಕೆ ಇಲಾಖೆಗೆ ನೀಡಲಾಗಿದೆ. ಮಾವಿನ ಜೊತೆಗೆ ತರಕಾರಿ ಬೆಳೆಗಳಿಗೂ ಆದ್ಯತೆ ನೀಡಿ ಸಂಸ್ಕರಣಾ ಘಟಕ ಸಿದ್ಧಪಡಿಸಲಾಗುವುದು.
ರೈತರು ಹಣ್ಣು ಮತ್ತು ತರಕಾರಿಗಳನ್ನು ಬೆಳೆದು ಆರ್ಥಿಕವಾಗಿ ಸದೃಢರಾಗಬೇಕು. ತರಕಾರಿ ಬೆಳೆಯನ್ನು ಯಾವ ರೀತಿ ಬೆಳೆದು ಹೆಚ್ಚು ಆದಾಯಗಳಿಸಬಹುದು ಎಂದು ಜನರಲ್ಲಿ ಜನಜಾಗೃತಿ ಮೂಡಿಸಲಾಗುವುದು. ವರ್ಷಪೂರ್ತಿ ರೈತರಿಗೆ ಅನುಕೂಲವಾಗುವ ರೀತಿ ಮಾವು ಸಂಸ್ಕರಣಾ ಕೇಂದ್ರವನ್ನು ಸಿದ್ಧಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications