ರಾಮನಗರ; ಡಿಸಿಎಂಗೆ ಭದ್ರತೆ ನೀಡಿದ್ದ ಇನ್ಸ್ ಪೆಕ್ಟರ್ ಗೆ ಕೊರೊನಾ ಸೋಂಕು
ರಾಮನಗರ, ಜುಲೈ 1: ರಾಮನಗರದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಇನ್ಸ್ ಪೆಕ್ಟರ್ ಗೆ ಕೊರೊನಾ ಸೋಂಕು ಇರುವುದಾಗಿ ತಿಳಿದುಬಂದಿದೆ. ಸೋಂಕಿತ ಇನ್ಸ್ ಪೆಕ್ಟರ್ ಗೆ ರಾಮನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ಸ್ ಪೆಕ್ಟರ್ ನ ಪ್ರಾಥಮಿಕ ಸಂಪರ್ಕದಲ್ಲಿದ್ದ 12 ಸಿಬ್ಬಂದಿಗೆ ಕ್ವಾರಂಟೈನ್ ಗೆ ಸೂಚಿಸಲಾಗಿದೆ. ಇದೇ ಜೂನ್ 28ರಂದು ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿಎಂ ಡಾ ಅಶ್ವತ್ಥ ನಾರಾಯಣ್ ಅವರು ಕೋವಿಡ್ 19 ನಡೆಸಿದ ಸಂದರ್ಭ, ಈ ಇನ್ಸ್ ಪೆಕ್ಟರ್ ಅವರಿಗೆ ಭದ್ರತೆ ನೀಡಿದ್ದರು ಎಂಬುದು ತಿಳಿದುಬಂದಿದೆ.

ಡಿಸಿಎಂ ಭಾಗಿಯಾಗಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಜಿಲ್ಲಾ ಮಟ್ಟದ ಅನೇಕ ಅಧಿಕಾರಿಗಳು ಭಾಗಿಯಾಗಿದ್ದರು. ಇದೀಗ ಈ ಇನ್ಸ್ ಪೆಕ್ಟರ್ ಗೆ ಸೋಂಕು ದೃಢಪಟ್ಟಿದ್ದು, ಸಭೆಯಲ್ಲಿ ಭಾಗಿಯಾಗಿದ್ದವರಲ್ಲಿ ಆತಂಕ ಉಂಟಾಗಿದೆ. ಸೋಂಕಿತ ವ್ಯಕ್ತಿಯ ಮತ್ತಷ್ಟು ಸಂಪರ್ಕಿತರನ್ನು ಜಿಲ್ಲಾಡಳಿತ ಪತ್ತೆ ಹಚ್ಚುತ್ತಿದೆ.











Click it and Unblock the Notifications