ರಾಮನಗರ : ಕನಕಪುರದಲ್ಲಿ ಜೆಡಿಎಸ್ ಮುಖಂಡನ ಭೀಕರ ಹತ್ಯೆ

ರಾಮನಗರ, ನವೆಂಬರ್ 12 : ಕನಕಪುರದಲ್ಲಿ ಜೆಡಿಎಸ್ ಮುಖಂಡನ ಹತ್ಯೆ ನಡೆದಿದೆ. ಕನಕಪುರ ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.

ಜೆಡಿಎಸ್ ಎಸ್‌ಸಿ ಮತ್ತು ಎಸ್‌ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಟಿ.ರಾಜಗೋಪಾಲ್ ಕೊಲೆಯಾದವರು. ಕನಕಪುರದ ಜನನಿ ಆಸ್ಪತ್ರೆ ಬಳಿ ಸೋಮವಾರ ರಾತ್ರಿ ಕೊಲೆ ನಡೆದಿದೆ.

R.T.Rajgopal

ರಾಜಗೋಪಾಲ್ ಕೊಲೆಯಿಂದ ಕನಕಪುರಲ್ಲಿ ಉದ್ವಿಘ್ನ ವಾತಾವರಣ ನಿರ್ಮಾಣವಾಗುವ ನಿರೀಕ್ಷೆ ಇದೆ. ಕನಕಪುರ ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ.

ರಾಜಗೋಪಾಲ್ ಅವರು ರಾತ್ರಿ ಟೀ ಕುಡಿಯುತ್ತಿದ್ದ ಸಂದರ್ಭದಲ್ಲಿ ಮೂವರು ದುಷ್ಕರ್ಮಿಗಳು ಅವರನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಚಾಕುವಿನಿಂದ ಇರಿದು ರಾಜಗೋಪಾಲ್ ಹತ್ಯೆ ಮಾಡಲಾಗಿದೆ.

ಮೊನ್ನೆ ಮುಕ್ತಾಯಗೊಂಡ ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ದ್ವೇಷದ ಹಿನ್ನಲೆಯಲ್ಲಿ ಕೊಲೆ ನಡೆದಿದೆಯೇ? ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+