ವಿಶ್ವನಾಥ್ ಅವರನ್ನು ಎಂಎಲ್ಸಿ ಮಾಡಿ: ಜೆಡಿಎಸ್ ಕಾರ್ಯಕರ್ತರ ಒತ್ತಾಯ
ರಾಮನಗರ, ಜೂನ್ 15: ರಾಜ್ಯ ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕನಕಪುರದ ಜೆಡಿಎಸ್ ಪಕ್ಷದ ಕಾರ್ಯಕರ್ತರು ಸುದ್ದಿಗೋಷ್ಟಿ ನಡೆಸಿ ತಮ್ಮ ಮುಖಂಡ ಡಿ.ಎಂ ವಿಶ್ವನಾಥ್ ಅವರಿಗೆ ಅವಕಾಶ ನೀಡಬೇಕೆಂದು ಪಕ್ಷದ ವರಿಷ್ಠರನ್ನು ಒತ್ತಾಯಿಸಿದರು.
Recommended Video
Sushanth Singh Rajput's dad collapsed after hearing his son's news | Oneindia Kannada
ಕನಕಪುರ ಪಟ್ಟಣದ ರೋಟರಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜೆಡಿಎಸ್ ಮುಖಂಡರು, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರಿಗೆ ಮಾಧ್ಯಮಗಳ ಮೂಲಕ ಡಿ.ಎಂ ವಿಶ್ವನಾಥ್ ಅವರನ್ನು ರಾಜ್ಯ ವಿಧಾನ ಪರಿಷತ್ ಗೆ ಆಯ್ಕೆ ಮಾಡಬೇಕೆಂದು ಮನವಿ ಸಲ್ಲಿಸಿದರು.

ಕಳೆದ 25 ವರ್ಷಗಳಿಂದ ತಾಲ್ಲೂಕಿನಲ್ಲಿ ಪಕ್ಷವನ್ನು ಸಂಘಟಿಸಿ, ರಾಜ್ಯ ಕಾಂಗ್ರೆಸ್ ಪ್ರಭಾವಿ ಮುಖಂಡ ಡಿ.ಕೆ ಶಿವಕುಮಾರ್ ಎದುರು ಎರಡು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕೂದಲೆಳೆಯ ಅಂತರದಲ್ಲಿ ಸೋತರು. ಕ್ಷೇತ್ರದ ಪಕ್ಷ ಸಂಘಟನೆ ತೊಡಗಿಕೊಂಡಿರುವ ಡಿ.ಎಂ ವಿಶ್ವನಾಥ್ ಅವರನ್ನು ಪರಿಷತ್ ಗೆ ಆಯ್ಕೆ ಮಾಡಬೇಕೆಂದು ಕಾರ್ಯಕರ್ತರು ಒತ್ತಾಯಿಸಿದರು.












Click it and Unblock the Notifications