ಶಿರಾ ಮತ್ತು RR ನಗರದಲ್ಲಿ ಮತದಾರ ಜೆಡಿಎಸ್ ಕೈಹಿಡಿಯಲಿದ್ದಾನೆ: ನಿಖಿಲ್ ಕುಮಾರಸ್ವಾಮಿ
ರಾಮನಗರ, ನವೆಂಬರ್ 6: ನನಗೆ ಸಂಪೂರ್ಣ ನಂಬಿಕೆಯಿದೆ, ಶಿರಾ ಮತ್ತು ರಾಜರಾಜೇಶ್ವರಿ ನಗರ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮತದಾರು ಜೆಡಿಎಸ್ ಕೈ ಹಿಡಿಯಲಿದ್ದಾರೆ ಎಂದು ಚಿತ್ರನಟ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ರಾಮನಗರ ಅಥವಾ ಚನ್ನಪಟ್ಟಣ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ, ನಮ್ಮ ಇಡೀ ಕುಟುಂಬ, ನಮ್ಮ ತಾತನವರಿಂದ ಹಿಡಿದು ನಮ್ಮ ತಂದೆ ಹಾಗೂ ನಮ್ಮ ತಾಯಿರನ್ನೂ ಕೂಡ ಕೈಹಿಡಿದು ಆಶೀರ್ವಾದ ಮಾಡಿ ಗೆಲ್ಲಿಸಿರುವ ಕ್ಷೇತ್ರದ ಜನತೆ, ಜಿಲ್ಲೆಯ ಮಗನಾಗಿ ಭೇಟಿ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ವೈಫಲ್ಯಗಳನ್ನು ಮಾಡಿದೆ. ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರ ಸಂಕಷ್ಟಕ್ಕೆ ನಿಲ್ಲಬೇಕಾದವರು, ಉಪ ಚುನಾವಣೆಯನ್ನೇ ಪ್ರತಿಷ್ಠೆಯಾಗಿ ತೆಗೆದುಕೊಂಡು ಇಡೀ ಸಚಿವ ಸಂಪುಟ ಉಪ ಚುನಾವಣೆಯಲ್ಲಿ ಮುಳುಗಿತ್ತು ಎಂದು ನಿಖಿಲ್ ಕುಮಾರಸ್ವಾಮಿ ಟೀಕಿಸಿದರು.

ಉತ್ತರ ಕರ್ನಾಟಕದ ಜನರಿಗೆ ಸ್ಪಂದಿಸದ ಸರ್ಕಾರದ ನಡೆಯನ್ನು ಗಮನಿಸಿದರೆ ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆಯ ರೇಸ್ ನಲ್ಲಿ ಜೆಡಿಎಸ್ ಪಕ್ಷ ಇಲ್ಲ ಅಂತಾ ಕೆಲವರು ಹೇಳುತ್ತಿದ್ದಾರೆ. ಆದರೆ ನ.10 ರಂದು ಬರುವ ಫಲಿತಾಂಶ ಜೆಡಿಎಸ್ ಪರವಾಗಿ ಬರುವ ನಿರೀಕ್ಷೆ ಇದೆ ಎಂದರು.
ಇನ್ನು ನಾನು ರೈತನ ಮಗ ಎಂದರೆ ಸಾಲದು, ನಮ್ಮ ಮುಂದಿನವರಿಗೂ ನಮ್ಮ ಮಕ್ಕಳಿಗೂ ಕೃಷಿಯ ಬಗ್ಗೆ ತಿಳಿಸಲು ಮೊದಲು ನಾನು ರೈತನಾಗಬೇಕು. ಆದ್ದರಿಂದ ಬಿಡದಿಯ ತೋಟದಲ್ಲಿ ಕೃಷಿ ಕಾರ್ಯಗಳಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.












Click it and Unblock the Notifications