ತವರು ನೆಲದಲ್ಲೇ ಸಚಿವ ಸಿ. ಪಿ. ಯೋಗೇಶ್ವರ್‌ಗೆ ಹಿನ್ನಡೆ!

ರಾಮನಗರ, ಫೆಬ್ರವರಿ 11: ಸಚಿವ ಸಿ. ಪಿ. ಯೋಗೇಶ್ವರ್ ಹುಟ್ಟೂರಿನ ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿಯ ಒಟ್ಟು 14 ಸದಸ್ಯರ ಪೈಕಿ 12 ಜೆಡಿಎಸ್ ಬೆಂಬಲಿತ ಸದಸ್ಯರು ಚುನಾವಣೆಯಲ್ಲಿ ಆಯ್ಕೆಯಾಗಿದ್ದರು.

ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಸಿ. ಪಿ. ಯೋಗೇಶ್ವರ್ ಹುಟ್ಟೂರು ಚಕ್ಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಿತು. ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಪಂಚಾಯಿತಿ ಜೆಡಿಎಸ್ ವಶವಾಗಿದೆ.

ಚಕ್ಕರೆ ಗ್ರಾಮ ಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಪುಟ್ಟಮ್ಮ ಅಧ್ಯಕ್ಷರಾಗಿ ಮತ್ತು ಸುಜಯ್ ಕುಮಾರ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Ramanagara JDS Supported Candidates Elected For Gram Panchayat In CP Yogeshwar Home Town

ಚಕ್ಕೆರೆ ಗ್ರಾಮ ಪಂಚಾಯತಿ ಒಟ್ಟು 14 ಸದಸ್ಯರನ್ನು ಹೊಂದಿದೆ. ಚುನಾವಣೆಯಲ್ಲಿ 12 ಮಂದಿ ಜೆಡಿಎಸ್ ಬೆಂಬಲಿತ ಸದಸ್ಯರ ಆಯ್ಕೆಯಾಗಿದ್ದರು. ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರು ಚುನಾಯಿತರಾಗಿದ್ದರು.

ಸಚಿವ ಸಿ. ಪಿ. ಯೋಗೇಶ್ವರ್ ಸ್ವಗ್ರಾಮ ಚಕ್ಕರೆಯಲ್ಲಿ 7 ಸದಸ್ಯರ ಪೈಕಿ 5 ಮಂದಿ ಜೆಡಿಎಸ್ ಬೆಂಬಲಿತರು ಆಯ್ಕೆಯಾಗಿದ್ದು ವಿಶೇಷವಾಗಿದೆ. ಈಗ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನವೂ ಜೆಡಿಎಸ್ ಬೆಂಬಲಿತರ ಪಾಲಾಗಿದೆ.

ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷೆ ಪುಟ್ಟಮ್ಮ ಮತ್ತು ಉಪಾಧ್ಯಕ್ಷ ಸುಜಯ್ ಕುಮಾರ್ ಅವರಿಗೆ ಜೆಡಿಎಸ್ ಮುಖಂಡರು ಮತ್ತು ಅಭಿಮಾನಿಗಳು ಹಾರ ಹಾಕಿ, ಸಿಹಿ ತಿನ್ನಿಸಿ ಪಟಾಕಿ ಸಿಡಿಸಿ ಶುಭಕೋರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+