ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರ: ಫೆ.20ರಂದು 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ' ಕಾರ್ಯಕ್ರಮಕ್ಕೆ ಚಾಲನೆ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಫೆಬ್ರವರಿ 18: ರಾಮನಗರ ಜಿಲ್ಲೆಯ 4 ತಾಲ್ಲೂಕುಗಳಲ್ಲಿ "ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ' ಕಾರ್ಯಕ್ರಮವನ್ನು ಫೆ.20 ರಂದು ಬೆಳಿಗ್ಗೆ 10 ಗಂಟೆಗೆ ಚಾಲನೆ ನೀಡಲಿದ್ದಾರೆ. ಅಧಿಕಾರಿಗಳ ತಂಡ ಅಂದು ಭೇಟಿ ನೀಡುವ ಗ್ರಾಮದಲ್ಲೇ ವಾಸ್ತವ್ಯ ಹೂಡಿ ಸಾರ್ವಜನಿಕರಿಂದ ಕಂದಾಯ ಇಲಾಖೆಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಸ್ವೀಕರಿಸಿ ಪರಿಹಾರ ನೀಡಲಿದೆ.

ಜಿಲ್ಲೆಯ ಮಾಗಡಿ ತಾಲ್ಲೂಕಿನ ಮಾಡಬಾಳ್ ಹೋಬಳಿಯ ಅವ್ವೇರಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಇಕ್ರಂ, ಮಾಗಡಿ ತಾಲ್ಲೂಕು ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೊಡಲಿದ್ದಾರೆ.

ಅಟಲ್ ಜೀವಜಲ ಯೋಜನೆಗೆ ರಾಮನಗರದ 49 ‌ಗ್ರಾಮಗಳು ಆಯ್ಕೆಅಟಲ್ ಜೀವಜಲ ಯೋಜನೆಗೆ ರಾಮನಗರದ 49 ‌ಗ್ರಾಮಗಳು ಆಯ್ಕೆ

ರಾಮನಗರ ತಾಲ್ಲೂಕಿನ ಕೈಲಾಂಚ ಹೋಬಳಿಯ ಲಕ್ಕೋಜನಹಳ್ಳಿ ಗ್ರಾಮದಲ್ಲಿ ರಾಮನಗರ ತಾಲ್ಲೂಕು ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೊಡಲಿದ್ದಾರೆ.

Ramanagara: Jilladikaarigala Nade Halligala Kade Program To Start From Feb 20

ಚನ್ನಪಟ್ಟಣ ತಾಲ್ಲೂಕಿನ ಕಸಬಾ ಹೋಬಳಿಯ ಎಚ್.ಮೊಗೇನಹಳ್ಳಿ ಗ್ರಾಮದಲ್ಲಿ ಅಪರ ಜಿಲ್ಲಾಧಿಕಾರಿ ಜವರೇಗೌಡ, ಚನ್ನಪಟ್ಟಣ ತಾಲ್ಲೂಕು ತಹಶೀಲ್ದಾರ್ ನಾಗೇಶ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೊಡಲಿದ್ದಾರೆ.

ಕನಕಪುರ ತಾಲ್ಲೂಕಿನ ಮರಳವಾಡಿ ಹೋಬಳಿಯ ಬನವಾಸಿ ಗ್ರಾಮದಲ್ಲಿ ರಾಮನಗರ ಉಪವಿಭಾಗ ಅಧಿಕಾರಿ ದಾಕ್ಷಾಹಿಣಿ, ಕನಕಪುರ ತಹಶೀಲ್ದಾರ್ ವರ್ಷಾ ಒಡೆಯರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೊಡಲಿದ್ದಾರೆ.

ಕಂದಾಯ ಇಲಾಖೆ ವ್ಯಾಪ್ತಿಗೆ ಒಳಪಡುವ ಪಹಣಿ ತಿದ್ದುಪಡಿ, ಸಾಮಾಜಿಕ ಭದ್ರತೆ ಯೋಜನೆ ಪಿಂಚಣಿಗಳ ಮಂಜೂರಾತಿ ಪತ್ರ ವಿತರಣೆ, ಆಹಾರ ಪಡಿತರ ಚೀಟಿ ವಿತರಣೆ, ಚುನಾವಣಾ ಗುರುತಿನ ಚೀಟಿ ವಿತರಣೆ, ಆಶ್ರಯ ಮತ್ತು ಸ್ಮಶಾನಕ್ಕೆ ಜಮೀನು ಕಾಯ್ದಿರಿಸುವಿಕೆಗಾಗಿ ಪ್ರಸ್ತಾವನೆ ಪರಿಶೀಲನೆ ಮತ್ತು ಅಂಗೀಕಾರ ಹಾಗೂ ಪೌತಿ ಖಾತೆ ಪ್ರಕ್ರಿಯೆಗಳನ್ನು ವಿಲೇವಾರಿಗೂಳಿಸಲಾಗುವುದು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿ ಹಾಗೂ ಸಮಸ್ಯೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಸಲ್ಲಿಸಿ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

English summary
District Collector Nade Halligala Kade Program Will Start On Feb.20 in Ramanagara taluks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X