• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾಜಿ ಸಿಎಂ ಎಚ್‌ಡಿಕೆ ಭೇಟಿ ಮಾಡಿ ಕುತೂಹಲ ಮೂಡಿಸಿದ ಆರ್. ಅಶೋಕ್

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಸೆಪ್ಟೆಂಬರ್ 11: ಕಲಬುರಗಿ ಮಹಾನಗರ ಪಾಲಿಕೆ ಫಲಿತಾಂಶ ಅತಂತ್ರವಾದ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಕಿಂಗ್ ಮೇಕರ್ ಆಗಿರುವ ಜೆಡಿಎಸ್ ಬೆಂಬಲ ಕೊಡುವಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದಾರೆ.

ಬಿಡದಿಯ ಕೇತುಗಾನಹಳ್ಳಿ ತೋಟದ ಮನೆಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾದ ಕಂದಾಯ ಸಚಿವ ಆರ್. ಅಶೋಕ್, "ಕಲಬುರಗಿ ಪಾಲಿಕೆ ಚುನಾವಣೆಗೆ ನಮ್ಮ ಪಕ್ಷಕ್ಕೆ ಬೆಂಬಲ ಕೊಡುವಂತೆ ಮಾತನಾಡಿದ್ದೇನೆ. ಇದಕ್ಕೆ ಕುಮಾರಸ್ವಾಮಿ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ,'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

"ಕಲಬುರಗಿ ಪಾಲಿಕೆ ಬೆಂಬಲದ ಬಗ್ಗೆ ಕುಮಾರಸ್ವಾಮಿ ಸೋಮವಾರ ಸದನದಲ್ಲಿ ಚರ್ಚಿಸೊಣ ಎಂದಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಜೊತೆಗೆ ಚರ್ಚಿಸಿ ಒಂದೊಳ್ಳೆ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ. ದೊಡ್ಡಬಳ್ಳಾಪುರದ ಚುನಾವಣೆ ವಿಷಯದ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.''

ಹಾಗೆಯೇ ಕಲಬುರಗಿ ಪಾಲಿಕೆ ಚುಕ್ಕಾಣಿಗೆ ಜೆಡಿಎಸ್- ಕಾಂಗ್ರೆಸ್‌ಗೆ ಬೆಂಬಲ ಕೊಟ್ಟಿದೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಆರ್. ಅಶೋಕ್, "ಹಾಗೇನು ಇಲ್ಲ, ಕಾಂಗ್ರೆಸ್‌ನಲ್ಲೇ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಲ್ಲೇ ಒಮ್ಮತವಿಲ್ಲ. ಮೇಯರ್ ಪಟ್ಟದ ಡಿಮ್ಯಾಂಡ್ ಕೂಡ ಚರ್ಚೆಯಾಗಿಲ್ಲ,'' ಎಂದು ಸ್ಪಷ್ಟಪಡಿಸಿದರು.

ಸಚಿವ ಅಶೋಕ್ ಭೇಟಿಯ ಬಗ್ಗೆ ಟ್ವಿಟ್ ಮಾಡಿದ ಮಾಜಿ ಸಿಎಂ ಎಚ್‌ಡಿಕೆ, ಇನ್ನು ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್ ಬೆಂಬಲ ಕೋರಿ ಬಿಡದಿ ಬಳಿಯ ಕೇತುಗಾನಹಳ್ಳಿಯ ತೋಟದ ಮನೆಯಲ್ಲಿ ಸಚಿವ ಆರ್. ಅಶೋಕ್ ಭೇಟಿಯಾಗಿ ಚರ್ಚಿಸಿರುವುದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮಾಜಿ ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

Kalaburagi Corporation Election Result: Former CM HD Kumaraswamy Meets R Ashok

"ಹಿರಿಯ ಸಚಿವ ಆರ್. ಅಶೋಕ್ ಇಂದು ನನ್ನ ತೋಟದ ಮನೆಯಲ್ಲಿ ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ನನ್ನೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಕಲಾಪದ ಬಗ್ಗೆಯೂ ಅವರು ನನ್ನೊಂದಿಗೆ ಸಮಾಲೋಚಿಸಿದರು,'' ಎಂದು ಮಾಜಿ ಸಿಎಂ ಟ್ವೀಟ್ ಮಾಡಿದ್ದಾರೆ.

ಇನ್ನೂ ಸಚಿವ ಆರ್. ಅಶೋಕ್ ಕಲಬುರಗಿ ಪಾಲಿಕೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ಕೋರಿರುವ ಬಗ್ಗೆ ಟ್ವಿಟರ್‌ನಲ್ಲಿ, "ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಅಲ್ಲಿ ನಮ್ಮ ಶಾಸಕರ ಜತೆ ಎಲ್ಲ ಬೆಳವಣೆಗಗಳ ಬಗ್ಗೆ ಚರ್ಚಿಸಿದ ನಂತರ ಪಕ್ಷದ ಅಭಿಪ್ರಾಯವನ್ನು ತಿಳಿಸಲಾಗುವುದು ಎಂದು ಅವರಿಗೆ ಹೇಳಿದ್ದೇನೆ,'' ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

"ಸಚಿವ ಆರ್. ಅಶೋಕ್ ಅವರೊಂದಿಗೆ ಪ್ರಸ್ತುತ, ರಾಜ್ಯದ ರೈತಾಪಿ ಜನ ಎದುರಿಸುತ್ತಿರವ ಸಮಸ್ಯೆಗಳೂ ಸೇರಿದಂತೆ ರಾಜ್ಯ ಎದುರಿಸುತ್ತಿರುವ ವಿವಿಧ ಸವಾಲುಗಳ ಬಗ್ಗೆ ಸಚಿವರ ಗಮನಕ್ಕ ತಂದಿದ್ದೇನೆ. ಈ ಸಂದರ್ಭದಲ್ಲಿ ನಮ್ಮ ಪಕ್ಷದ ಶಾಸಕರಾದ ಸಾ.ರಾ. ಮಹೇಶ್ ನನ್ನ ಜತೆ ಇದ್ದರು,'' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವಿಟ್ ಮೂಲಕ ತಿಳಿಸಿದ್ದಾರೆ.

English summary
Kalaburagi Corporation Election Result: Revenue Minister R Ashok Meets to former CM H.D. Kumaraswamy in Ramanagara taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X