ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏಸು ಪ್ರತಿಮೆ ವಿರೋಧಿ ಹೋರಾಟಕ್ಕೆ ಕಲ್ಲಡ್ಕ ಪ್ರಭಾಕರ್‌ ಭಟ್ ಎಂಟ್ರಿ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜನವರಿ 06: ಕನಕಪುರ ತಾಲ್ಲೂಕಿನ ಹಾರೋಬೆಲೆಯ ಕಪಾಲ ಬೆಟ್ಟದಲ್ಲಿ ಜಗತ್ತಿನ ಎತ್ತರದ ಏಸು ಪ್ರತಿಮೆ ನಿರ್ಮಾಣ ವಿಚಾರವಾಗಿ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜನವರಿ 13 ರಂದು ಕನಕಪುರ ಚಲೋ ನಡೆಯಲಿದೆ. ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಪ್ರಮುಖ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.

ಹಿಂದೂ ಜಾಗರಣಾ ವೇದಿಕೆಯ ವತಿಯಿಂದ ನಡೆಯಲಿರುವ ಹೋರಾಟಕ್ಕೆ 10 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ ಇದೇ ಎಂದು ಮುಖಂಡರು ಇಂದು ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ತಿಳಿಸಿದರು.

ಕಪಾಲ ಬೆಟ್ಟದ ಜಮೀನನ್ನು ಭೂ ರಹಿತ ರೈತರಿಗೆ ಹಂಚಿ ಎಂದ ಬಿಜೆಪಿ ನಿಯೋಗ
ಕಪಾಲ ಬೆಟ್ಟದಲ್ಲಿ 144 ಅಡಿ ಎತ್ತರದ ಏಸುವಿನ ಪ್ರತಿಮೆ ನಿರ್ಮಾಣ ವಿಚಾರದಲ್ಲಿ ಈಗಾಗಲೇ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣವಾಗುವುದನ್ನು ವಿರೋಧ ಮಾಡಿದ್ದಾರೆ ಎಂದರು.

Kalladka Prabhakar Bhatt Entry To Fight The Anti Jesus Statue

ಈ ಹೋರಾಟಕ್ಕೆ ರಾಮನಗರ ಜಿಲ್ಲೆ ಸೇರಿದಂತೆ ಮಂಡ್ಯ, ಬೆಂಗಳೂರು, ಮೈಸೂರು ಭಾಗಗಳ ಜನರು ನಮ್ಮ ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ. ಪ್ರಮುಖವಾಗಿ ಕಲ್ಲಡ್ಕ ಪ್ರಭಾಕರ್‌ ಭಟ್ವರು ನಮ್ಮ ಹೋರಾಟದಲ್ಲಿ ಭಾಗವಹಿಸಿ ಮುಖ್ಯ ಭಾಷಣ ಮಾಡಲಿದ್ದಾರೆಂದು ತಿಳಿಸಿದರು.

ಕ್ರೈಸ್ತ ಪ್ರತಿಮೆಯನ್ನು ನಾನು ಪ್ರಬಲವಾಗಿ ವಿರೋಧಿಸುತ್ತೇನೆ: ಕಾಳಿಕಾ ಸ್ವಾಮಿ
ಹಳೆ ಮೈಸೂರು ಪ್ರಾಂತ್ಯದಲ್ಲಿ ಪ್ರಬಲರಾದ ಒಕ್ಕಲಿಗ ಸಮುದಾಯವನ್ನೇ ಟಾರ್ಗೆಟ್ ಮಾಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವ ದೃಷ್ಟಿಯಿಂದ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.

Kalladka Prabhakar Bhatt Entry To Fight The Anti Jesus Statue

ಸರ್ಕಾರಿ ಜಾಗವನ್ನು ಅಕ್ರಮವಾಗಿ ಒಂದು ಟ್ರಸ್ಟ್‌ಗೆ ನೀಡಿರುವ ಬಗ್ಗೆ ನಾವು ಹೋರಾಟ ಮಾಡುವ ಜೊತೆಗೆ ಕಪಾಲ ಬೆಟ್ಟದಲ್ಲಿ ಯಾವುದೇ ಕಾರಣಕ್ಕೂ ಪ್ರತಿಮೆ ಸ್ಥಾಪನೆಗೆ ಅವಕಾಶ ಕೊಡುವುದಿಲ್ಲ ಎಂದು ಹಿಂದೂ ಜಾಗರಣೆ ಸದಸ್ಯರು ತಿಳಿಸಿದರು.

English summary
The Kanakapura Chalo will be held on January 13, Plentiful oppose to the construction of the Jesus Christ statue. That day RSS leader Kalladka Prabhakar Bhat will be the keynote speaker.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X