ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರ: ಚೀನಿ ವಸ್ತುಗಳನ್ನು ಮುರಿದು ಹಾಕಿ, ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಜೂನ್ 17: ಇಪ್ಪತ್ತು ಭಾರತೀಯ ಯೋಧರನ್ನು ಹತ್ಯೆಗೈದ ಚೀನಾದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕನ್ನಡಪರ ಹೋರಾಟಗಾರು, ಚೀನಾ ನಿರ್ಮಿತ ವಸ್ತುಗಳನ್ನು ಮರಿದು ಹಾಕಿ ಪ್ರತಿಭಟನೆ ನಡೆಸಿದರು.

ದೇಶ ರಕ್ಷಣೆಯಲ್ಲಿ ಹುತಾತ್ಮರಾದ ಇಪ್ಪತ್ತು ಭಾರತೀಯ ಯೋಧರಿಗೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಚನ್ನಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯ ಕಾವೇರಿ ಸರ್ಕಲ್ ನಲ್ಲಿ ಯೋಧರ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.

ರಾಮನಗರ: ಒಂದೇ ದಿನ 12 ಮಂದಿಗೆ ಕೊರೊನಾ ವೈರಸ್ ಸೋಂಕುರಾಮನಗರ: ಒಂದೇ ದಿನ 12 ಮಂದಿಗೆ ಕೊರೊನಾ ವೈರಸ್ ಸೋಂಕು

ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಚೀನಾದ ವಸ್ತುಗಳನ್ನು ಮುರಿದು ಹಾಕಿ, ಚೀನಿ ಪಟಾಕಿಗೆ ನೀರು ಸುರಿದು ತಮ್ಮ‌ ಆಕ್ರೋಶ ವ್ಯಕ್ತಪಡಿಸಿದರು. ಚೀನಾ ವಸ್ತುಗಳನ್ನು ತಿರಸ್ಕರಿಸಿ, ಸ್ವದೇಶಿ ವಸ್ತುಗಳು ಪುರಸ್ಕರಿಸಿ ಎಂಬ ಪ್ರತಿಜ್ಞೆ ಸ್ವೀಕರಿಸಿದರು.

Ramanagara: Kannada Activists Protest Held Against China

ಜಗತ್ತಿಗೆ ಮಹಾಮಾರಿ ಕೊರೊನಾ ವೈರಸ್ ಕೊಡುಗೆ ನೀಡಿ, ಲಕ್ಷಾಂತರ ಜನರ ಸಾವಿಗೆ ಕಾರಣವಾದ ಚೀನಾ, ಗಡಿಯಲ್ಲಿ ಕ್ಯಾತೆ ತೆಗೆದು ಪದೇಪದೇ ಗಡಿ ಒಳಗೆ ನುಗ್ಗುವ ಮೂಲಕ ಭಾರತದ ಹಿತಾಸಕ್ತಿಗೆ ಧಕ್ಕೆ ಮಾಡುವ ಮೂಲಕ ತನ್ನ ನರಿ ಬುದ್ದಿಯನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಹೋರಾಟಗಾರರು ಕಿಡಿಕಾರಿದರು.
English summary
Kannada Activists have expressed outrage against China, which killed twenty Indian soldiers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X