ಮಾಗಡಿ: ಕನ್ನಡ ನುಡಿ ಜಾತ್ರೆಗೆ ಸಜ್ಜಾದ ಗುಡ್ಡದ ರಂಗನಾಥ ಸ್ವಾಮಿ ಬೆಟ್ಟ
ಕನ್ನಡ ಸಾಹಿತ್ಯ ಪರಿಷತ್‌ನ ಮಾಗಡಿ ತಾಲ್ಲೂಕು ಘಟಕದಿಂದ ಇಲ್ಲಿನ ಮಾದಿಗೊಂಡನಹಳ್ಳಿ ಗುಡ್ಡದ ರಂಗನಾಥ ಸ್ವಾಮಿ ಬೆಟ್ಟದಲ್ಲಿ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಮಾರ್ಚ್ 6ರಂದು ಈ ಸಮ್ಮೇಳನ ನಡೆಯಲಿದ್ದು, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಪದ್ಮನಾಭ್ ಅವರು ಗುಡ್ಡದ ರಂಗನಾಥಸ್ವಾಮಿ ಬೆಟ್ಟದಲ್ಲಿ ಸಮ್ಮೇಳನಕ್ಕೆ ನಡೆಯುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.
ಮಾಗಡಿ ತಾಲ್ಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಈ ಕನ್ನಡ ನುಡಿ ಜಾತ್ರೆಗೆ ಎಲ್ಲ ಸಿದ್ಧತೆ ನಡೆದಿದೆ. ಮಾರ್ಚ್ 6ರಂದು ಬೆಳಿಗ್ಗೆ ತಹಶೀಲ್ದಾರ್ ಶರತ್ ಕುಮಾರ್ ಅವರು ಧ್ವಜಾರೋಹಣದ ಮೂಲಕ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ಕೊಡಲಿದ್ದಾರೆ. ಬಳಿಕ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಅಂಬೇಡ್ಕರ್ ವಸತಿ ಶಾಲೆಯಿಂದ ಬೆಟ್ಟದವರೆಗೂ ಭುವನೇಶ್ವರಿ ದೇವಿ ಮೆರವಣಿಗೆ ನಡೆಯಲಿದೆ. ವಿದ್ಯಾರ್ಥಿಗಳು ಹಾಗೂ ಕನ್ನಡ ಜಾನಪದ ಕಲಾತಂಡಗಳು ಈ ಅದ್ಧೂರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ ಎಂದು ಮಾಹಿತಿ ನೀಡಿದ್ದಾರೆ.

ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಉದ್ಘಾಟಿಸಲಿದ್ದಾರೆ. ಸಿದ್ಧಗಂಗಾ ಮಠಾಧೀಶರಾದ ಸಿದ್ಧಲಿಂಗ ಶ್ರೀಗಳ ಸಾನಿಧ್ಯದಲ್ಲಿ ಕಾರ್ಯಕ್ರಮ ಶುರುವಾಗಲಿದೆ. ಶಾಸಕರಾದ ಎಚ್.ಸಿ.ಬಾಲಕೃಷ್ಣ, ಮಹೇಶ್ ಜೋಶಿ, ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಥಟ್ ಅಂತ ಹೇಳಿ ಕಾರ್ಯಕ್ರಮದ ಖ್ಯಾತ ನಿರೂಪಕ ನಾ.ಸೋಮೇಶ್ವರ ರಾವ್ ವಿಶೇಷ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಮಾಗಡಿ ತಾಲ್ಲೂಕಿನ ಕವಿಗಳು ಬರೆದಿರುವ ಪುಸ್ತಕಗಳನ್ನು ಬಿಡುಗಡೆ ಮಾಡಲಾಗುವುದು. ಸ್ಮರಣೆ ಸಂಚಿಕೆ ಬಿಡುಗಡೆ ಹಾಗೂ ಪುಸ್ತಕ ಮಳಿಗೆ ಉದ್ಘಾಟನೆಯೂ ಇರಲಿದೆ ಎಂದು ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸೋಲೂರು ಕುದೂರು ಹೋಬಳಿಯ ವಿದ್ಯಾರ್ಥಿಗಳು ವೀರಗಾಸೆ ಕಂಸಾಳೆ ಸೋಮನ ಕುಣಿತ ಸೇರಿದಂತೆ ಜಾನಪದ ಕಲಾ ಪ್ರದರ್ಶನ ಮಾಡಲಿದ್ದಾರೆ. ಮಾಗಡಿಯಿಂದ ಬೆಳಗ್ಗೆ 8 ಗಂಟೆಗೆ ಗುಡ್ಡದ ರಂಗನಾಥ ಸ್ವಾಮಿ ದೇವಾಲಯಕ್ಕೆ ಬಸ್ ವ್ಯವಸ್ಥೆ ಕೂಡ ಇರಲಿದೆ. ಸೋಲೂರು ಕುದೂರು ಹೋಬಳಿ ಕೇಂದ್ರದಿಂದ ಗುಡ್ಡದ ರಂಗನಾಥ ಸ್ವಾಮಿ ಬೆಟ್ಟಕ್ಕೆ ಬೆಳಿಗ್ಗೆ 10.30ಕ್ಕೆ ಬಸ್ ಹೊರಡಲಿದೆ. ಸಮಾರೋಪ ಸಮಾರಂಭಕ್ಕೂ ಸಂಜೆ 4 ಗಂಟೆಯಿಂದ ಬಸ್ ವ್ಯಸಸ್ಥೆ ಇರಲಿದೆ.
ಸಂಜೆ ನಡೆಯುವ ಸಮಾರೋಪದಲ್ಲಿ ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿ ಸಾನಿಧ್ಯ ವಹಿಸುತ್ತಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ ಸಮಾರೋಪ ಭಾಷಣ ಮಾಡಲಿದ್ದು, ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಸಂಸದರಾದ ಡಾ.ಸಿ.ಎನ್. ಮಂಜುನಾಥ್, ಶಾಸಕ ಅಶ್ವತ್ಥ್ ನಾರಾಯಣ್, ಪರಿಸರಪ್ರೇಮಿ ಸಾಲುಮರದ ತಿಮ್ಮಕ್ಕರ ಪುತ್ರ ಸೇರಿದಂತೆ ಹಲವರಿಗೆ ಸನ್ಮಾನ ಕೂಡ ಇರಲಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications