HD Kumaraswamy Files Nomination: ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ
ಚನ್ನಪಟ್ಟಣ, ಏಪ್ರಿಲ್ 17: ಮಾಜಿ ಸಿಎಂ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು.
ಸೋಮವಾರ ಅವರು ಬೆಳಗ್ಗೆ ತಮ್ಮ ಪುತ್ರ ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಜೊತೆ ಬೆಂಗಳೂರಿನ ಪದ್ಮನಾಭನಗರದ ಎಚ್‌ಡಿ ದೇವೇಗೌಡ ಅವರ ಮನೆಗೆ ತೆರೆಳಿ ಅಶೀರ್ವಾದ ಪಡೆದುಕೊಂಡರು. ಈ ವೇಳೆ ನಿಖಿಲ್ ಕುಮಾರಸ್ವಾಮಿ ಅವರು ತಾತಾ ಮುಂದೆ ಕಣ್ಣೀರಿಟ್ಟರು.

ನಂತರ ನಾಮಪತ್ರ ಸಲ್ಲಿಸಲು ಕ್ಷೇತ್ರಕ್ಕೆ ಬಂದರು. ಆದಾಗಲೇ ಕ್ಷೇತ್ರದಲ್ಲಿ ಸಾವಿರಾರು ಕಾರ್ಯಕರ್ತರು ನೆರೆದಿದ್ದರು. ಈ ವೇಳೆ ಬೃಹತ್ ರೋಡ್ ಶೋ ನಡೆಯಿತು. ಈ ವೇಳೆ ಕುಮಾರಸ್ವಾಮಿ ಅವರು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಇಂದು ನಾಮಪತ್ರ ಸಲ್ಲಿಸುವುದಕ್ಕೆ ಮುನ್ನ ನಡೆದ ರೋಡ್ ಶೋದಲ್ಲಿ ಪಾಲ್ಗೊಂಡು ಮಾತನಾಡಿದೆ. ಕಣ್ಣು ಹಾಯಿಸಿದಷ್ಟು ದೂರಕ್ಕೂ ಜನಸಾಗರವೇ ನೆರೆದಿತ್ತು. ಕ್ಷೇತ್ರದ ಜನತೆಯ ಪ್ರೀತಿಗೆ ನಾನು ಧನ್ಯ ಎಂದು ಹೇಳಿದರು.
ರಾಜ್ಯದಲ್ಲಿ ಜಾತ್ಯತೀತ ಜನತಾದಳ ಪಕ್ಷದ ಪರವಾಗಿ ದೊಡ್ಡ ಅಲೆ ಎದ್ದಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ನಾಡಿನ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷವೊಂದೇ ಪರಿಹಾರ ಎನ್ನುವುದನ್ನು ಜನತೆ ಮನಗಂಡಿದ್ದಾರೆ. ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ಇದೇ ದಿನ ಕ್ಷೇತ್ರದ ಜನತಾದಳ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜನತೆ ತೋರಿದ ಪ್ರೀತಿ, ವಿಶ್ವಾಸಕ್ಕೆ ನಾನು ಚಿರಋಣಿ ಎಂದು ಟ್ವೀಟ್ ಮಾಡಿದ್ದಾರೆ.

ರಾಮನಗರ ಪಟ್ಟಣದಲ್ಲಿ ಬೃಹತ್ ರೋಡ್ ಶೋ ನಡೆಸಲಾಯಿತು. ಸುಡು ಬಿಸಿಲನ್ನು ಲೆಕ್ಕಿಸದೆ ದೊಡ್ಡ ಪ್ರಮಾಣದಲ್ಲಿ ಸೇರಿದ್ದ ಜನತೆಗೆ ನನ್ನ ಅನಂತ ಧನ್ಯವಾದಗಳು ಎಂದು ಅವರು ತಿಳಿಸಿದರು.












Click it and Unblock the Notifications