Karnataka By Elections Results 2024: ಚನ್ನಪಟ್ಣದಲ್ಲಿ ಸಿ.ಪಿ.ಯೋಗೇಶ್ವರ್‌ಗೆ ಭರ್ಜರಿ ಮುನ್ನಡೆ, ನಿಖಿಲ್‌ಗೆ ಆಘಾತ.!

Karnataka By Election 2024: ಕರ್ನಾಟಕದ ಮೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆದಿದ್ದು, ಇಂದು (ನವೆಂಬರ್ 23) ಮತ ಎಣಿಕೆ ನಡೆಯುತ್ತಿದೆ. ಇನ್ನು ರಾಜ್ಯದ ಮೂರು ಕ್ಷೇತ್ರಗಳಲ್ಲೂ ಇದೀಗ ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ಚನ್ನಪಟ್ಟಣದಲ್ಲಿ 11ನೇ ಸುತ್ತಿನಲ್ಲೂ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 23,210 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರು ಹಿನ್ನಡೆಯಲ್ಲಿದ್ದಾರೆ.

Karnataka By Elections 2024 C P Yogeshwara Leading in Channapatna

ಹಾಗೆಯೇ ಚನ್ನಪಟ್ಟಣದಲ್ಲಿ 9ನೇ ಸುತ್ತಿನಲ್ಲೂ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 18,098 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರು ಹಿನ್ನಡೆಯಲ್ಲಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಲ್ಲಿ 8ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, 45,982 ಮತಗಳನ್ನು ಪಡೆಯುವ ಮೂಲಕ ಸಿ.ಪಿ.ಯೋಗೇಶ್ವರ್ ಮುನ್ನಡೆ ಸಾಧಿಸಿದ್ದರೆ, ಎನ್‌ಡಿಎ ಅಭ್ಯರ್ಥಿ 34,808 ಮತಗಳನ್ನು ಪಡೆಯುವ ಮೂಲಕ ಹಿನ್ನೆಡೆ ಕಾಯ್ದುಕೊಂಡಿದ್ದಾರೆ. ಸಿ.ಪಿ.ಯೋಗೇಶ್ವರ್ 11,174 ಮತಗಳ ಅಂತದಲ್ಲಿ ಮುನ್ನಡೆಯಲ್ಲಿದ್ದಾರೆ.

ಕರ್ನಾಟಕದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತಾದರೂ, ಚನ್ನಪಟ್ಟಣದ ಮೇಲೆ ಇಡೀ ರಾಜ್ಯದ ಕಣ್ಣು ಬಿದ್ದಿತ್ತು. ಪ್ರತಿಷ್ಠೆಯ ಅಖಾಡವಾಗಿದ್ದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್‌ ಪ್ರಚಂಡ ಗೆಲುವು ಸಾಧಿಸಿದ್ದರೆ, ಎನ್​ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಸೋಲು ಕಂಡಿದ್ದಾರೆ.

ಸತತ ಎರಡು ಸೋಲಿನ ಬಳಿಕ ಮೂರನೇ ಚುನಾವಣೆಯಾದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎನ್ನುವ ವಿಶ್ವಾಸದಲ್ಲಿ ನಿಖಿಲ್ ಇದ್ದರು. ಅಷ್ಟೇ ಅಲ್ಲದದೆ, ಕುಮಾರಸ್ವಾಮಿ, ದೇವೇಗೌಡ ಆದಿಯಾಗಿ ನಾಯಕರು, ಕಾರ್ಯಕರ್ತರಿಂದ ಹಿಡಿದ ಚುನಾವಣಾ ಸಮೀಕ್ಷೆಗಳು ಸಹ ಚನ್ನಪಟ್ಟಣದಲ್ಲಿ ನಿಖಿಲ್​ಗೆ ಗುಲುವು ಕಟ್ಟಿಟ್ಟ ಬುತ್ತಿ ಎಂದು ಭವಿಷ್ಯ ನುಡಿದಿದ್ದವು.

ಆದರೆ, ಅಂತಿಮವಾಗಿ ಫಲಿತಾಂಶದ ಲೆಕ್ಕಾಚಾರಗಳು ಉಲ್ಟಾ ಆಗಿವೆ. ಪ್ರಮುಖವಾಗಿ ನಿಖಿಲ್​ಗೆ ಚನ್ನಪಟ್ಟಣ ನಗರದ ಬೂತ್​ಗಳೇ ಭೂತವಾಗಿ ಕಾಡಿವೆ ಎನ್ನಲಾಗುತ್ತಿದೆ.

ಕಾಂಗ್ರೆಸ್‌ ಅಭ್ಯರ್ಥಿಗೆ ಮುನ್ನಡೆ: ಇನ್ನು ಸಂಡೂರು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ 78,277 ಮತಗಳನ್ನು ಪಡೆಯುವ ಮೂಲಕ 8,239 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ. ‌ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು 70,038 ಮತಗಳನ್ನು ಪಡೆಯುವ ಮೂಲಕ ಹಿನ್ನಡೆಯಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+