Channapatna Assembly bypoll results: ಸಿಪಿವೈಗೆ ಭಾರೀ ಗೆಲುವು, ರಾರಾಜಿಸುತ್ತಿದೆ 'ಮನೆ ಮಕ್ಕಳು' ಫೋಟೋ
Channaptna By Election Results 2024: ಕರ್ನಾಟಕದ ಮೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆದಿದ್ದು, ಇಂದು (ನವೆಂಬರ್ 23) ಮತದಾನ ನಡೆಯುತ್ತಿದೆ. ಇನ್ನು ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ 17ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಎಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಭರ್ಜರಿ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮತ್ತೊಂದೆಡೆ ಕ್ಷೇತ್ರದಲ್ಲಿ ಕೈ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.
ಸಿ.ಪಿ.ಯೋಗೇಶ್ವರ್ ಭಾರೀ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಂತೆ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರ ಇರುವ ಫೋಟೋವನ್ನು ಹಿಡಿದು ಸಂಭ್ರಮಿಸಿದ್ದಾರೆ. ಇನ್ನು ಈ ಫೋಟೋದಲ್ಲಿ ಮನೆ ಮಕ್ಕಳು ಎಂದು ಬರೆದಿರುವುದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಚನ್ನಪಟ್ಟಣದಲ್ಲಿ 17ನೇ ಸುತ್ತಿನ ಮತ ಎಣಿಕೆ ಮುಕ್ತಾಯ ಆಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 99,320 ಮತಗಳನ್ನು ಪಡೆಯುವ ಮೂಲಕ ಎನ್‌ಡಿಎ ಅಭ್ಯರ್ಥಿ ನಿಖಿಲ್ ವಿರುದ್ಧ 25,903 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು
73,417 ಮತಗಳನ್ನು ಪಡೆಯುವ ಮೂಲಕ ಹಿನ್ನಡೆಯಲ್ಲಿದ್ದಾರೆ.
ಕ್ಷೇತ್ರದಲ್ಲಿ ಯೋಗೇಶ್ವರ್ ಅವರದ್ದೇ ಆದ ವೈಯಕ್ತಿಕ ರಾಜಕೀಯ ವರ್ಚಸ್ಸಿದೆ. ಯೋಗೇಶ್ವರ್ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿರುವುದರಿಂದ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಪ್ಲಸ್ ಆಗಿರಬಹುದು. ಜೊತೆಗೆ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಸಹೋದರರು ಯೋಗೇಶ್ವರ್ ಜೊತೆ ನಿಂತಿರುವುದು ಸಹ ನೆರವಾಗಿದೆ. ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಒಗ್ಗಟ್ಟು ಪ್ರದರ್ಶನ ಸೇರಿ ಹಲವು ವಿಚಾರಗಳು ಸಿ.ಪಿ.ಯೋಗೇಶ್ವವರ್ರ ಅವರಿಗೆ ವರವಾಗಿದೆ ಅಂತಲೂ ಹೇಳಬಹುದಾಗಿದೆ.
ಅಷ್ಟೇ ಅಲ್ಲದೆ, ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದರೂ, ಚನ್ನಪಟ್ಟಣದಲ್ಲಿ ಈ ಬಾರಿ ಜಿದ್ದಾಜಿದ್ದಿ ಜೋರಾಗಿಯೇ ನಡೆದಿತ್ತು. 2018ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ, 2023ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಲ್ಲಿ ಸೋಲು. ಹೀಗೆ ಎರಡು ಸೋಲು ಕಂಡಿದ್ದ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ ಈ ಬಾರಿಯೂ ಕೂಡ ಚನ್ನಪಟ್ಟಣದಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿದಿದ್ದರು. ಆದರೆ ಈಗಲೂ ಸಹ ಅದೇ ಮುಂದುವರೆಯುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ.
ಮತ್ತೊಂದೆಡೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಸಿ.ಪಿ.ಯೋಗೇಶ್ವರ್ ಅವರಿಗೆ ಈ ಚುನಾವಣೆ ಅಗ್ನಿ ಪರೀಕ್ಷೆಯಾಗಿತ್ತು. ಇನ್ನು ನಿಖಿಲ್ ಹಿನ್ನಡೆಯಾಗಲು ಪ್ರಮುಖ ಕಾರಣ ಅಂದರೆ ಅದು ಕುಟುಂಬ ರಾಜಕಾರಣ ಆಗಿದೆ ಎಂದು ಹೇಳಲಾಗುತ್ತಿದೆ.












Click it and Unblock the Notifications