Waqf Controversy: ಕಾಂಗ್ರೆಸ್ ದುರಾಡಳಿತದ ವಿರುದ್ಧ ಉಪಚುನಾವಣೆ: ಚನ್ನಪಟ್ಟಣದಲ್ಲಿ ನಿಖಿಲ್ ಗೆಲ್ಲಿಸಿ

ಬೆಂಗಳೂರು, ನವೆಂಬರ್ 03: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಆಗಿದೆ. ಹಾಲಿ ಆಡಳಿತ ಪಕ್ಷ ಕಾಂಗ್ರೆಸ್ ಸರ್ಕಾರದ ದುರಾಳಿತ ಹೆಚ್ಚಾಗಿದೆ. ವಕ್ಫ್ ಬೋರ್ಡ್ ಮುಸ್ಲಿಮರ ಬೋರ್ಡ್ ಆಗಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಉಪ ಚುನಾವಣೆ ಇದಾಗಿದೆ ಎಂದು ಪ್ರತಿಪಕ್ಷ ‌ನಾಯಕ ಆರ್.ಅಶೋಕ್ ಹೇಳಿದರು.

ಭಾನುವಾರ ಚನ್ನಪಟ್ಟಣದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ವ್ಯಕ್ತಿ ಹೆಸರಲ್ಲಿ ಚುನಾವಣೆ ನಡೆಯುತ್ತಿಲ್ಲ. ಇದು ಎನ್‌ಡಿಎ ಹಾಗೂ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಚುನಾವಣೆ ಇದಾಗಿದೆ ಎಂದು ಅವರು ಹೆಸರಿಸಿರು.

Karnataka By-Elections Opposition Challenges Congress Corruption and Fight Against Waqf Row

ಬಿಜೆಪಿ ಮತ್ತು ಜೆಡಿಎಸ್ (ಎನ್‌ಡಿಎ) ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜನರ ಅನುಕಂಪವಿದೆ. ಅವರು ಈ ಹಿಂದೆ ಸೋತಿದ್ದರು. ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳನ್ನು ಜನರು ಗುರುತಿಸಲಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಲೂಟಿ ಮಾಡುತ್ತಲೇ ಇದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದಲಿತರ ಹಣ ಕೊಳ್ಳೆ ಹೊಡೆಯಲಾಗಿದೆ ಎಂದು ಅವರು ದೂರಿದರು.

ಗ್ಯಾರಂಟಿಗಳಿಂದಾಗಿ ಮಣ್ಣು ಎತ್ತಿ ಹಾಕಲು ‌ಕೂಡ ಹಣವಿಲ್ಲ ಎಂದು ಭಾರತೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 16 ತಿಂಗಳಿಂದ ರೈತರಿಗೆ ಹಾಲಿನ ಪ್ರೋತ್ಸಾಹಧನ ನೀಡಿಲ್ಲ. ವಕ್ಫ್ ಬೋರ್ಡ್ ಮುಸ್ಲಿಮರ ಬೋರ್ಡ್ ಆಗಿ ಬದಲಾಗಿದ್ದು, ದೇವಸ್ಥಾನ, ಸ್ಮಶಾನ, ಶಾಲೆ, ರೈತರ ಭೂಮಿ ಎಂದು‌ ನೋಡದೆ ಎಲ್ಲ ಜಮೀನುಗಳನ್ನು ಕಬಳಿಸಲಾಗುತ್ತಿದೆ ಎಂದು ಅವರು ಹೇಳಿದರು.

ವಕ್ಟ್ ಭೂ ಕಬಳಿಕೆ ವಿರುದ್ಧ ಬಿಜೆಪಿ ಬೃಹತ್ ಹೋರಾಟ

ಇನ್ನೂ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಜಮೀನು ಬರೆಸಿಕೊಳ್ಳುತ್ತಿದ್ದಾರೆ. ಎಲ್ಲ ವರ್ಗದ ಜನರ ಜಮೀನು ಕಬಳಿಕೆ ಆಗುತ್ತಿದ್ದು, ಇದರ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಸಿದರು.

ನಾನು ಕೋಲಾರ, ಶ್ರೀರಂಗಪಟ್ಟಣಕ್ಕೂ ಹೋಗಿ ಪ್ರತಿಭಟನೆ ಮಾಡುತ್ತೇನೆ. ಶಾಲೆ, ದೇವಸ್ಥಾನಗಳ ಜಮೀನಿನ ಪಹಣಿಯಲ್ಲಿ ಸರ್ಕಾರದ ಜಾಗವೆಂದು ನಮೂದಿಸುವವರೆಗೆ ಹಾಗೂ ರೈತರ ಜಾಗವನ್ನು ರೈತರಿಗೆ ನೀಡುವವರೆಗೆ ಪ್ರತಿಭಟಿಸುತ್ತೇವೆ.

ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್‌ ಭೂಮಿ ಕಬಳಿಕೆ

ಮುಸ್ಲಿಮರು ನಮಗೆ ಮತ ಹಾಕಬೇಕೆಂದು ರಾಜ್ಯ ಕಾಂಗ್ರೆಸ್ ಸರ್ಕಾರ ಈ ರೀತಿ ಮಾಡುತ್ತಿದೆ. ಮುಸ್ಲಿಮರ ಓಲೈಕೆ ಮಾಡಲು ಕಾಂಗ್ರೆಸ್ ಜಮೀನು ಕಬಳಿಕೆಯ ತಂತ್ರ ಅನುಸರಿಸಿದೆ. ದೇಶ ಉಳಿಸಿ, ರೈತರನ್ನು ಉಳಿಸಿ ಎಂದು ಬಿಜೆಪಿ ಹೋರಾಟ ಮಾಡುತ್ತಿದೆ. ಚನ್ನಪಟ್ಟಣದ ಜನರು ಎನ್‌ಡಿಎ ಬೆಂಬಲಿಸಿ, ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+