ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿ.ಪಿ. ಯೋಗೇಶ್ವರ್‌ಗೆ ಮತ್ತೆ ಒಲಿಯಲಿದೆಯೇ ಮಂತ್ರಿ ಯೋಗ!

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಫೆಬ್ರವರಿ 2: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ದೆಹಲಿ ಪ್ರವಾಸ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಶಾಸಕರು ಈಗಾಗಲೇ ಲಾಬಿ ಶುರುವಿಟ್ಟುಕೊಂಡಿದ್ದಾರೆ. ಈ ಬೆನ್ನಲ್ಲೇ ಈ ಬಾರಿ ಸಚಿವ ಸಂಪುಟದಲ್ಲಿ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್‌ಗೆ ಮತ್ತೆ ಮಂತ್ರಿ ಯೋಗ ಸಿಗಲಿದೆ ಎನ್ನಲಾಗುತ್ತಿದೆ.

ರಾಮನಗರ ಜಿಲ್ಲೆಯ ಸಿ.ಪಿ. ಯೋಗೇಶ್ವರ್ ಅಭಿಮಾನಿಗಳಲ್ಲಿ ಸಿಪಿವೈಗೆ ಈ ಬಾರಿ ಮಂತ್ರಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ಮೂಡಿದೆ. ಇದಕ್ಕೆ ಪುಷ್ಟಿ ನೀಡುವಂತೆ ಸ್ವತಃ ಸಿ.ಪಿ. ಯೋಗೇಶ್ವರ್ ಅವರೇ ತಮ್ಮ ಆಪ್ತ ವಲಯದ ಪ್ರಮುಖರೊಂದಿಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಂತ್ರಿ ಸ್ಥಾನ ಖಚಿತ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಸಂಪುಟದ ಸಚಿವರಿಗೆ ಉಸ್ತುವಾರಿ ಜಿಲ್ಲೆಗಳನ್ನು ಹಂಚಿಕೆ ಮಾಡಿದ್ದಾರೆ. ಮಂಡ್ಯ ಮೂಲದ ರೇಷ್ಮೆ ಮತ್ತು ಯುವ ಸಬಲೀಕರಣ ಖಾತೆ ಸಚಿವ ನಾರಾಯಣಗೌಡ ಅವರನ್ನು ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಕೈ ಬಿಟ್ಟಿರುವ ಹಿನ್ನಲೆಯಲ್ಲಿ ಸಿ.ಪಿ. ಯೋಗೇಶ್ವರ್‌ರವರನ್ನು ಮಂತ್ರಿ ಮಾಡಿ, ಮಂಡ್ಯ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡಲಿದ್ದಾರೆ ಎಂದು ಸಿಪಿವೈ ಆಪ್ತರು ಹೇಳುತ್ತಿದ್ದಾರೆ.

karnataka cabinet expansion: mlc cp yogeshwar could get a ministerial position

ಕಾಂಗ್ರೆಸ್ ಸೇರಿದರೆ ಸೂಸೈಡ್ ಮಾಡಿಕೊಂಡಂತೆ
ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರದಲ್ಲಿ ಮಾಧ್ಯಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್, ‌ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಹರಡಿದ ನಂತರ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಮುಖಂಡರ ಮೇಲೆ ಹರಿಹಾಯುವ ಮೂಲಕ ನಾನು ಕಾಂಗ್ರೆಸ್ ಸೇರುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದರು.

ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷಕ್ಕೆ ಸೇರಿದರೆ ಸೂಸೈಡ್ ಮಾಡಿಕೊಂಡಂತೆ. ನಾನು ಬಹಳ ಹಿಂದೆಯೇ ಪಕ್ಷಾಂತರ ಮಾಡಿ ಪಕ್ಷಾಂತರಿ ಆಗಿದ್ದೇನೆ. ನಾನು ಭಾರತೀಯ ಜನತಾ ಪಾರ್ಟಿಯಲ್ಲೇ ಇರುತ್ತೇನೆ. ಪಕ್ಷ ಬಿಡುವ ಯಾವುದೇ ಚಿಂತನೆ ಇಲ್ಲ‌ ಎನ್ನುವ ಮೂಲಕ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ವದಂತಿಗಳನ್ನು ತಳ್ಳಿ ಹಾಕಿದರು.

karnataka cabinet expansion: mlc cp yogeshwar could get a ministerial position


ಸಚಿವ ಸ್ಥಾನದ ಸುಳಿವು ನೀಡಿದ್ದ ಸಿಪಿವೈ
ಹಳೇ ಮೈಸೂರು ಪ್ರಾಂತ್ಯದಲ್ಲಿ ಪಕ್ಷ ಸಂಘಟನೆಗಾಗಿ ಬಿಜೆಪಿ ನನಗೆ ಒಂದು ಜವಾಬ್ದಾರಿ ನೀಡಬೇಕಾಗಿತ್ತು ಎಂದು ಪಕ್ಷದ ಮೇಲಿನ ಅಸಮಾಧಾನ ವ್ಯಕ್ತಪಡಿಸಿದ್ದ ಸಿ.ಪಿ. ಯೋಗೇಶ್ವರ್, ಜನವರಿ‌ 15ರ ನಂತರ ಏನೆಲ್ಲಾ ಆಗುತ್ತದೆ ನೋಡೋಣ ಎನ್ನುವ ಮೂಲಕ ಸಂಕ್ರಾಂತಿ ನಂತರ ಅಧಿಕಾರ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದರು.

ಅಲ್ಲದೇ ಪ್ರಸ್ತುತ ಸಚಿವ ಸಂಪುಟದ ವಿಸ್ತರಣೆ ಮಾತು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಸಿಪಿವೈ ಸಂಕ್ರಾಂತಿ ನಂತರ ಒಳ್ಳೆಯ ಕಾಲ ಬರುತ್ತದೆ ಎಂದು ಹೇಳಿದ ಕಾಲ ಸನಿಹಿತವಾಗುತ್ತಿದೆ. ಸಿಪಿವೈ ಅಭಿಮಾನಿ ಬಳಗ ಸಿ.ಪಿ. ಯೋಗೇಶ್ವರ್‌ರವರಿಗೆ ಸಚಿವ ಸ್ಥಾನ ಗ್ಯಾರಂಟಿ ಎನ್ನುತ್ತಿದ್ದಾರೆ.

Recommended Video

ಬೀದಿ‌ ನಾಯಿ ಸಾವಿಗೆ ನ್ಯಾಯ ಕೊಡಿಸಲು ಹೋರಾಟಕ್ಕಿಳಿದ ನಟಿ & ಸಂಸದೆ Ramya | Oneindia Kannada

English summary
Karnataka Cabinet Expansion; CP Yogeshwar is confident that will get a ministerial seat this time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X