ಕನಕಪುರ; ಹುಟ್ಟೂರಿನಲ್ಲಿ ಮತದಾನ ಮಾಡಿ ಆಟೋ ಡ್ರೈವರ್ ಆದ ಡಿಕೆಶಿ

ಕರ್ನಾಟಕದ ಎಲ್ಲ 224 ಕ್ಷೇತ್ರಗಳಲ್ಲಿ 2023ರ ವಿಧಾನಸಭೆ ಚುನಾವಣೆಗೆ ಇಂದು (ಬುಧವಾರ, ಮೇ 10) ಮತದಾನ ನಡೆಯುತ್ತಿದ್ದು, ರಾಜ್ಯದ ಮತದಾರರು ಅತ್ಯಂತ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಶೇ.37.25ರಷ್ಟು ಮತದಾನವಾಗಿದೆ.

ಇದೇ ವೇಳೆ ರಾಮನಗರ ಜಿಲ್ಲೆ ಕನಕಪುರ ವಿಧಾನಸಭಾ ಕ್ಷೇತ್ರದ ತಮ್ಮ ಹುಟ್ಟೂರು ಕೋಡಿಹಳ್ಳಿ ಗ್ರಾಮದಲ್ಲಿ ಮತದಾನ ಮಾಡಿದ ನಂತರ ಕೆಪಿಸಿಸಿ ಅಧ್ಯಕ್ಷ ಹಾಗೂ ಕನಕಪುರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಶಿವಕುಮಾರ್ ಆಟೋ ಚಲಾಯಿಸಿ ಗಮನ ಸೆಳೆದಿದ್ದಾರೆ.

DK Shivakumar

31 ಜಿಲ್ಲೆಗಳ 224 ಕ್ಷೇತ್ರಗಳಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಇನ್ನು ಸ್ವಗ್ರಾಮದಲ್ಲಿ ಮತದಾನ ಮಾಡಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಟೋ ಓಡಿಸಿ ಖುಷಿಪಟ್ಟರು.

ವಿಧಾನಸಭೆ ಚುನಾವಣೆ ಹಿನ್ನೆಲೆ ಡಿ.ಕೆ. ಶಿವಕುಮಾರ್ ಮತದಾನ ಮಾಡಲು ಸ್ವಗ್ರಾಮವಾದ ದೊಡ್ಡಾಲಹಳ್ಳಿಗೆ ಬಂದಿದ್ದರು. ಮತದಾನ ಮಾಡಿದ ಬಳಿಕ ಸ್ವತಃ ಅವರೇ ಕೆಲ ದೂರದವರೆಗೆ ಆಟೋವನ್ನು ಓಡಿಸಿದರು.

ಸ್ವಗ್ರಾಮದಲ್ಲಿ ಆಟೋ ಓಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖುಷಿಪಟ್ಟರೆ, ಇದೇ ವೇಳೆ ಕೋಡಿಹಳ್ಳಿ ಗ್ರಾಮಸ್ಥರು ಡಿ.ಕೆ. ಶಿವಕುಮಾರ್ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದರು.

Karnataka Election 2023: KPCC President DK Shivakumar Drove Auto After Voting In Kodihalli

ಕನಕಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ.ಕೆ. ಶಿವಕುಮಾರ್, "ಆರ್‌. ಅಶೋಕ್‌ ಹಾಗೂ ಮುಖ್ಯಮಂತ್ರಿಗಳು ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಬಂದು ಪ್ರಚಾರ ಮಾಡಿದ್ದಾರೆ. ಇದು ಗುಪ್ತ ಮತದಾನ, ಯಾರು ಗೆಲ್ಲುತ್ತಾರೆ ಎಂದು ಮೇ 13ರಂದು ನೋಡೋಣ," ಎಂದು ತಿಳಿಸಿದರು.

ಎಲ್ಲಾ ಬೂತ್ ಬಳಿ ಖಾಲಿ ಅಡುಗೆ ಅನಿಲ ಸಿಲಿಂಡರ್ ಇಟ್ಟು ಪೂಜೆ ಮಾಡಿ ಮತದಾನ ಮಾಡುವಂತೆ ನಮ್ಮ ಕಾರ್ಯಕರ್ತರಿಗೆ ಸಲಹೆ ನೀಡಿದ್ದೇನೆ. ಪ್ರಧಾನಿ ಅವರ ಮಾರ್ಗದರ್ಶನದಂತೆ ಈ ಸೂಚನೆ ನೀಡಿದ್ದೇನೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ನೆರವು ನೀಡಲು ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆ ಘೋಷಿಸಿದೆ ಎಂದರು.

ಇಂದು ರಾಜ್ಯದಲ್ಲಿ ಬದಲಾವಣೆ ಮಾಡಿಕೊಳ್ಳುವ ದಿನ. ನಮ್ಮ ಭವಿಷ್ಯ ನಾವೇ ಬರೆದುಕೊಳ್ಳುವ ದಿನ. ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಿಗೆ ಮುದ್ರೆ ಒತ್ತುವ ದಿನ ಎಂದು ಹೇಳಿದರು.

ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಟ್ಟಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಇಂದು ಬೆಳಿಗ್ಗೆಯಿಂದಲೇ ಬಿರುಸಿನಿಂದ ನಡೆಯುತ್ತಿದೆ. ಮಧ್ಯಾಹ್ನ ವೇಳೆಗೆ ಶೇಕಡಾವಾರು ಮತದಾನದಲ್ಲಿ ಇಳಿಕೆ ಕಂಡುಬಂದಿತ್ತು. ಸಂಜೆ ವೇಳೆ ಮತದಾನ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಇದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ಆರಂಭವಾಗಿದ್ದು, ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. 224 ಕ್ಷೇತ್ರ, 2,615 ಅಭ್ಯರ್ಥಿಗಳ ಹಣೆಬರಹವನ್ನು ರಾಜ್ಯದ 5,31,33,054 ಮತದಾರರು ನಿರ್ಧರಿಸಲಿದ್ದಾರೆ. ಮೇ 13ರಂದು ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟಗೊಳ್ಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+