ಜೆಡಿಎಸ್ ಭದ್ರಕೋಟೆ ರಾಮನಗರದಲ್ಲಿ ಹೆಚ್.ಡಿ ಕುಮಾರಸ್ವಾಮಿಗೆ ಜಯ
ರಾಮನಗರ ಮತ್ತು ಚೆನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಿದ್ದ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ರಾಮನಗರದಲ್ಲಿ ಭರ್ಜರಿ ಗೆಲುವು ಕಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ಧ 19,745 ಮತಗಳ ಅಂತರದಿಂದ ಹೆಚ್.ಡಿ.ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿ ಪಡೆದ ಮತ: 92626
ಇಕ್ಬಾಲ್ ಹುಸೇನ್ ಪಡೆದ ಮತ: 69990
ಆರಂಭದಿಂದಲೂ ಮುನ್ನಡೆಯಲ್ಲಿದ್ದ ಕುಮಾರಸ್ವಾಮಿ ಮಧ್ಯದಲ್ಲಿ ಕೆಲವು ಮತಗಳ ಹಿನ್ನಡೆ ಅನುಭವಿಸಿದ್ದರು. ಆದ್ರೆ, ಅಂತಿಮವಾಗಿ ಭಾರಿ ಅಂತರದಿಂದ ಜಯ ಸಾಧಿಸಿದ್ದಾರೆ. ರಾಮನಗರದಲ್ಲಿ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ನ ಇಕ್ಬಾಲ್ ಹುಸೇನ್ ಮತ್ತು ಬಿಜೆಪಿಯಿಂದ ಎಚ್.ಲೀಲಾವತಿ ಅವರು ಎದುರಾಳಿಯಾಗಿದ್ದರು.

ಮತ್ತೊಂದೆಡೆ ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಎಂ ರೇವಣ್ಣ ಮತ್ತು ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಅವರನ್ನ ಹಿಂದಿಕ್ಕುವ ಮೂಲಕ ಹೆಚ್.ಡಿ ಕುಮಾರಸ್ವಾಮಿ ಮುನ್ನಡೆ ಕಾಯ್ದುಕೊಂಡಿದ್ದಾರೆ.












Click it and Unblock the Notifications