DK Suresh Property: ಕನಕಪುರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಡಿಕೆ ಸುರೇಶ್ ಆಸ್ತಿ ವಿವರ; 88 ಕೋಟಿ ರೂ. ಸಾಲ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಅಚ್ಚರಿಯ ಬೆಳವಣಿಯಲ್ಲಿ ರಾಮನಗರ ಜಿಲ್ಲೆಯ ಕನಕಪುರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಹೋದರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಸಂಸದ ಡಿ.ಕೆ. ಸುರೇಶ್ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ, ಏಪ್ರಿಲ್ 20ರಂದು ನಾಮಪತ್ರ ಸಲ್ಲಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ನಾಮಪತ್ರದಲ್ಲಿ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಅಥವಾ ಕೆಲವು ಪ್ರಕರಣಗಳಲ್ಲಿ ಸಿಬಿಐ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿರುವ ಕಾರಣ, ಕಾಂಗ್ರೆಸ್‌ನ ಸಂಭಾವ್ಯ ಬದಲಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.

Karnataka Elections 2023: Kanakapur Independent Candidate DK Sureshs Asset Details Revealed

57 ವರ್ಷದ ಡಿ.ಕೆ. ಸುರೇಶ್ ಅವರು ಲೋಕಸಭೆಯಲ್ಲಿ ಕರ್ನಾಟಕದ ಏಕೈಕ ಕಾಂಗ್ರೆಸ್ ಸಂಸದರಾಗಿದ್ದಾರೆ. ಕನಕಪುರ ವಿಧಾನಸಭಾ ಕ್ಷೇತ್ರವು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ ಎಂಬುದು ಗಮನಾರ್ಹ.

ಕನಕಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆರ್. ಅಶೋಕ್ ಅವರನ್ನು ಕಣಕ್ಕಿಳಿಸಿದ್ದಕ್ಕೆ ಪ್ರತ್ಯುತ್ತರವಾಗಿ ಆರ್. ಅಶೋಕ್‌ ಅವರು ಸ್ಪರ್ಧಿಸುತ್ತಿರುವ ಮತ್ತೊಂದು ವಿಧಾನಸಭಾ ಕ್ಷೇತ್ರವಾದ ಪದ್ಮನಾಭನಗರದಿಂದ ಡಿ.ಕೆ. ಸುರೇಶ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಬಹುದು ಎಂಬ ಊಹಾಪೋಹವಿತ್ತು. ಆದರೆ, ಕನಕಪುರದಿಂದ ನಾಮಪತ್ರ ಸಲ್ಲಿಸುತ್ತಿದ್ದಂತೆಯೇ ಎಲ್ಲ ವದಂತಿಗಳಿಗೆ ತೆರೆಬಿತ್ತು.

ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತವಾಗುವ ಭೀತಿ ಹಿನ್ನೆಲೆ ಅವರ ಸಹೋದರ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ತಮ್ಮ ಆಸ್ತಿ ವಿವರಗಳನ್ನೂ ಘೋಷಿಸಿದ್ದಾರೆ.

Karnataka Elections 2023: Kanakapur Independent Candidate DK Sureshs Asset Details Revealed

ಡಿಕೆ ಸುರೇಶ್ ಆಸ್ತಿ ಎಷ್ಟಿದೆ?

1500 ಕೋಟಿ ರೂ. ಒಡೆಯದ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ 300 ಕೋಟಿ ಒಡೆಯರಾಗಿದ್ದು ಇವರ ವಿರುದ್ಧ 10 ಪ್ರಕರಣಗಳು ಕೂಡ ದಾಖಲಾಗಿವೆ.

ಡಿ.ಕೆ. ಸುರೇಶ್ ತಮ್ಮ ಹೆಸರಿನಲ್ಲಿ 55.23 ಕೋಟಿ ರೂ. ಚರಾಸ್ತಿ ಹೊಂದಿದ್ದರೆ, 298.47 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. ಒಟ್ಟಾರೆ 353.7 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಚುನಾವಣಾ ಅಫಿಡವಿಟ್‌ನಲ್ಲಿ ಘೋಷಿಸಿದ್ದಾರೆ. ಅಚ್ಚರಿ ಎಂಬಂತೆ ಡಿ.ಕೆ. ಸುರೇಶ್ ಅವರ ಪತ್ನಿ ಮತ್ತು ಮಕ್ಕಳ ಹೆಸರಿನಲ್ಲಿ ಆಸ್ತಿ ನಮೂದಿಸಿಲ್ಲ.

ಪಿಯುಸಿ ವಿದ್ಯಾರ್ಹತೆ ಹೊಂದಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ತಮ್ಮೊಬ್ಬರ ಹೆಸರಿನಲ್ಲೇ ಎಲ್ಲಾ ಆಸ್ತಿಗಳನ್ನು ನಮೂದಿಸಿದ್ದಾರೆ. ಕಳೆದ ಬಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದಕ್ಕಿಂತಲೂ 15 ಕೋಟಿ ರೂ. ಹೆಚ್ಚಳವಾಗಿದೆ. ಅಫಿಡವಿಟ್‌ನಲ್ಲಿ ನೀಡಿದ ಮಾಹಿತಿ ಪ್ರಕಾರ, ಡಿ.ಕೆ. ಸುರೇಶ್ ಒಟ್ಟು 88.30 ಕೋಟಿ ರೂ. ಸಾಲಗಾರನಾಗಿದ್ದಾರೆ.

ಡಿ.ಕೆ. ಸುರೇಶ್ ವಿರುದ್ಧ 19 ಕ್ರಿಮಿನಲ್ ಪ್ರಕರಣಗಳು

ಸಂಸದ ಡಿ.ಕೆ. ಸುರೇಶ್ ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಸಲ್ಲಿಸಿರುವ ಮಾಹಿತಿ ಪ್ರಕಾರ, 19 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ 10 ಪ್ರಕರಣಗಳು ಸೇರಿವೆ. ಇನ್ನು ನಾಲ್ಕು ತೆರಿಗೆ ವಂಚನೆ ಪ್ರಕರಣಗಳು ಮತ್ತು ಎರಡು ಅಕ್ರಮ ಹಣ ವರ್ಗಾವಣೆ ಕಾನೂನಿನಡಿ ಇವೆ. ಡಿ.ಕೆ. ಸುರೇಶ್ ವಿರುದ್ಧ ಲಂಚ ಪ್ರಕರಣವೂ ಬಾಕಿ ಇದೆ. ಅಕ್ರಮ ಆಸ್ತಿ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಮತ್ತು ಲೋಕಾಯುಕ್ತದಿಂದ ಇತರ ಎರಡು ಪ್ರಕರಣಗಳು ದಾಖಲಾಗಿವೆ.

ಕನಕಪುರ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಿ.ಕೆ. ಶಿವಕುಮಾರ್

ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸತತವಾಗಿ ಗೆಲುವು ಸಾಧಿಸಿದ್ದಾರೆ. ಈಗಾಗಲೇ ಏಪ್ರಿಲ್ 19ರಂದು ನಾಮಪತ್ರ ಸಲ್ಲಿದ್ದಾರೆ. ವಿವಿಧ ಪ್ರಕರಣಗಳಲ್ಲಿ ಎದುರಿಸುತ್ತಿರುವ ವಿಚಾರಣೆಯ ಕಾರಣದಿಂದ ಡಿ.ಕೆ. ಶಿವಕುಮಾರ್​ ಅವರ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಹೋದರ ಡಿ.ಕೆ. ಸುರೇಶ್ ಅವರಿಂದ ನಾಮಪತ್ರ ಕೊಡಿಸಲಾಗಿದೆ.

ಕನಕಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಂತೋಷ್ ಅವರಿಗೆ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಡಿ.ಕೆ. ಸುರೇಶ್, ಆಡಳಿತರೂಢ ಬಿಜೆಪಿಯ ಕುತಂತ್ರಕ್ಕೆ ತಕ್ಕ ಉತ್ತರ ಕೊಡಬೇಕಿದೆ. ಹೀಗಾಗಿ ಕೆಲವೊಂದು ಮಾಹಿತಿ ಆಧಾರದ ಮೇಲೆ ನಾಮಪತ್ರ ಸಲ್ಲಿಸಿದ್ದೇನೆ. ಬಿಜೆಪಿಯಿಂದ ವಿಪಕ್ಷಗಳನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ ಎಂದು ಡಿ.ಕೆ. ಸುರುಶ್ ಆರೋಪಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+