ನನ್ನ ಎದುರಾಳಿ ಜೆಡಿಎಸ್ ಪಕ್ಷ, ಅದನ್ನು ಸೋಲಿಸುವುದೇ ಗುರಿ: ಬಾಲಕೃಷ್ಣ

Posted By: ರಾಮನಗರ ಪ್ರತಿನಿಧಿ
Subscribe to Oneindia Kannada

ಬಿಡದಿ (ರಾಮನಗರ ಜಿಲ್ಲೆ), ಏಪ್ರಿಲ್ 17: ನನಗೆ ಜೆಡಿಎಸ್ ಪಕ್ಷವೇ ಎದುರಾಳಿ. ಇಲ್ಲಿ ಆ ಪಕ್ಷವನ್ನು ಸೋಲಿಸುವುದೇ ನನ್ನ ಗುರಿ ಎಂದು ಬಿಡದಿ ಹೋಬಳಿಯ ಕಾರ್ಯಕರ್ತರ ಸಭೆಯಲ್ಲಿ ಮಾಗಡಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ.ಬಾಲಕೃಷ್ಣ ಹೇಳಿದರು.

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ, ಜೆಡಿಎಸ್ ನಿಂದ ಹೊರಬಂದು, ಎಚ್.ಡಿ.ಕುಮಾರಸ್ವಾಮಿಗೆ ಸಡ್ಡು ಹೊಡೆದು, ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಬಾಲಕೃಷ್ಣ. ಜತೆಗೆ ಮಾಗಡಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿಯೂ ಯಶಸ್ವಿಯಾಗಿದ್ದಾರೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಅಧಿಕೃತವಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿ ಒಂದು ದಿನ ಕಳೆಯುವ ಮುನ್ನವೇ ಎಚ್.ಸಿ.ಬಾಲಕೃಷ್ಣ ಮತ ಬೇಟೆಗೆ ಮುಂದಾಗಿದ್ದಾರೆ. ಬಿಡದಿ ಹೋಬಳಿಯ ಗ್ರಾಮ ಪಂಚಾಯಿತಿಗಳ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ, ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.

Karnataka elections: My opponent is JDS, will defeat that party

ಈ ವೇಳೆ ಮಾತನಾಡಿದ ಬಾಲಕೃಷ್ಣ, ಇದೇ 20ನೇ ತಾರೀಕು ಶುಕ್ರವಾರದಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.

ಡಿಕೆಶಿ ಸಹೋದರರೇ ಅಭ್ಯರ್ಥಿ, ನಾನು ಸೇವಕ‌
ರಾಮನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಖಾತ್ರಿ ಆಗಿರುವ ಡಿ.ಕೆ.ಶಿವಕುಮಾರ್ ಹಾಗೂ ಸುರೇಶ್ ಅಪ್ತ ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಕೂಡ ತಾಲೂಕಿನ ಪ್ರತಿ ಹಳ್ಳಿಗಳಿಗೆ ತೆರಳಿ ಮನೆ ಮನೆ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಸಾಧನೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿ, ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ.

ರಾಮನಗರ ಕ್ಷೇತ್ರದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಮಂತ್ರಿಗಳು ಹಾಗೂ ಶಾಸಕರು. ನಾನು ಇಲ್ಲಿ ಸೇವಕ ಮಾತ್ರ. ಕುಮಾರಸ್ವಾಮಿ ಅವರು ಎರಡಲ್ಲ, ಮೂರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿ. ನನಗೆ ಕಾಂಗ್ರೆಸ್ ಪಕ್ಷ ಜವಬ್ದಾರಿ ನೀಡಿದೆ. ಅದರಂತೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Assembly Elections 2018: My opponent is JDS, will defeat that party, said Magadi constituency Congress candidate H.C.Balakrishna in his elections campaign in Bidadi, Ramanagara district.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ