ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮನಗರ : ಕಾಂಗ್ರೆಸ್ ಅಭ್ಯರ್ಥಿಗಳ ಪರಿಚಯ

|
Google Oneindia Kannada News

ರಾಮನಗರ, ಏಪ್ರಿಲ್ 16 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 218 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಬಾರಿಯ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಮನಗರ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರಿಚಯಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರಿಚಯ

ಭಾನುವಾರ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜೆಡಿಎಸ್‌ ತೊರೆದು ಬಂದಿರುವ ಎಚ್.ಸಿ.ಬಾಲಕೃಷ್ಣ ಅವರಿಗೆ ಮಾಗಡಿಯಲ್ಲಿ ಟಿಕೆಟ್ ನೀಡಲಾಗಿದೆ. ರಾಮನಗರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಎಚ್.ಎ.ಹುಸೈನ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ರಾಮನಗರ ಜಿಲ್ಲೆಯಲ್ಲಿ ಮಾಗಡಿ, ಚನ್ನಪಟ್ಟಣ, ಕನಕಪುರ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳಿವೆ. ಈ ಬಾರಿಯ ಚುನಾವಣೆಯ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಹೋರಾಟವಾಗಿದೆ.

ಕ್ಷೇತ್ರ ಪರಿಚಯ: ರಾಮನಗರದಲ್ಲಿ ಕುಮಾರಸ್ವಾಮಿ ಸೋಲಿಸುವುದು ಸುಲಭವಲ್ಲಕ್ಷೇತ್ರ ಪರಿಚಯ: ರಾಮನಗರದಲ್ಲಿ ಕುಮಾರಸ್ವಾಮಿ ಸೋಲಿಸುವುದು ಸುಲಭವಲ್ಲ

ಚನ್ನಪಟ್ಟಣ ಕ್ಷೇತ್ರದಲ್ಲಿ ಶಾಸಕ ಸಿ.ಪಿ.ಯೋಗೇಶ್ವರ ಅವರನ್ನು ಸೋಲಿಸಲು ಕಾಂಗ್ರೆಸ್ ತಂತ್ರ ರೂಪಿಸಿದೆ. ವಿಧಾನಪರಿಷತ್ ಸದಸ್ಯ, ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಅವರನ್ನು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ಡಿ.ಕೆ.ಶಿವಕುಮಾರ್ ಅವರು ಚನ್ನಪಟ್ಟಣದಲ್ಲಿ ಯಾವ ತಂತ್ರ ಹಣೆದಿದ್ದಾರೆ ಎಂಬುದು ಇನ್ನೂ ನಿಗೂಢವಾಗಿದೆ...

ಇಂಧನ ಸಚಿವ ಡಿ.ಕೆ.ಶಿವಕುಮಾರ್

ಇಂಧನ ಸಚಿವ ಡಿ.ಕೆ.ಶಿವಕುಮಾರ್

ಕನಕಪುರ ಕ್ಷೇತ್ರಕ್ಕೆ ಹಾಲಿ ಶಾಸಕ, ರಾಜ್ಯದ ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್ ಅಭ್ಯರ್ಥಿ. ಇಂಧನ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ಎಷ್ಟು ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಲೆಕ್ಕಾಚಾರ ಆರಂಭವಾಗಿದೆ.

2008ರಲ್ಲಿ 7,600, 2013ರಲ್ಲಿ 13,487 ಮತಗಳ ಅಂತರದಿಂದ ಡಿ.ಕೆ.ಶಿವಕುಮಾರ್ ಗೆಲುವು ಸಾಧಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿಗೆ ಡಿ.ಕೆ.ಶಿವಕುಮಾರ್ ಅಧ್ಯಕ್ಷರು. ರಾಜ್ಯಾದ್ಯಂತ ಪಕ್ಷದ ಪರವಾಗಿ ಪ್ರಚಾರ ನಡೆಸಿ ಪುನಃ ಪಕ್ಷವನ್ನು ಅಧಿಕಾರಕ್ಕೆ ತರುವ ಹೊಣೆ ಅವರ ಮೇಲಿದೆ.

ಎಚ್.ಸಿ.ಬಾಲಕೃಷ್ಣ

ಎಚ್.ಸಿ.ಬಾಲಕೃಷ್ಣ

ಮಾಗಡಿ ಕ್ಷೇತ್ರದಕ್ಕೆ ಎಚ್.ಸಿ.ಬಾಲಕೃಷ್ಣ ಅವರು ಅಭ್ಯರ್ಥಿ. 2013ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಗೆದ್ದಿದ್ದ ಬಾಲಕೃಷ್ಣ ಅವರು ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿ ಪಕ್ಷದಿಂದ ಅಮಾನತುಗೊಂಡಿದ್ದರು. ನಂತರ ಕಾಂಗ್ರೆಸ್ ಸೇರಿದ್ದಾರೆ.

ಡಿ.ಕೆ.ಶಿವಕುಮಾರ್ ಅವರಿಗೆ ಎಚ್.ಸಿ.ಬಾಲಕೃಷ್ಣ ಅವರನ್ನು ಗೆಲ್ಲಿಸಿಕೊಂಡು ಬರುವುದು ಪ್ರತಿಷ್ಠೆಯ ಪ್ರಶ್ನೆ. ಎಲ್ಲಾ ಜೆಡಿಎಸ್ ಬಂಡಾಯ ನಾಯಕರು ಸಹ ಡಿ.ಕೆ.ಶಿವಕುಮಾರ್ ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದರು. ಈಗ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸುವ ಹೊಣೆಯೂ ಡಿ.ಕೆ.ಶಿವಕುಮಾರ್ ಮೇಲಿದೆ.

ಇಕ್ಬಾಲ್ ಹುಸೇನ್ ಕಾಂಗ್ರೆಸ್ ಅಭ್ಯರ್ಥಿ

ಇಕ್ಬಾಲ್ ಹುಸೇನ್ ಕಾಂಗ್ರೆಸ್ ಅಭ್ಯರ್ಥಿ

ರಾಮನಗರ ಕ್ಷೇತ್ರದಲ್ಲಿ ಇಕ್ಬಾಲ್ ಹುಸೇನ್ ಕಾಂಗ್ರೆಸ್ ಅಭ್ಯರ್ಥಿ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಎದುರು ಇಕ್ಬಾಲ್ ಸ್ಪರ್ಧೆಗಿಳಿದಿದ್ದಾರೆ. ರಾಮನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಇಕ್ಬಾಲ್ ಈಗಾಗಲೇ ಕ್ಷೇತ್ರದಲ್ಲಿ ಭರ್ಜರಿಯಾಗಿ ಪ್ರಚಾರ ನಡೆಸುತ್ತಿದ್ದಾರೆ.

2008ರಲ್ಲಿ ಕುಮಾರಸ್ವಾಮಿ ಎದುರಾಳಿಯಾಗಿ ಕಾಂಗ್ರೆಸ್‌ನಿಂದ ಮಮತಾ ಹೆಗೆಡೆ ಸ್ಪರ್ಧಿಸಿದ್ದರು. 23,678 ಮತ ಪಡೆದಿದ್ದರು. 2013ರಲ್ಲಿ ಮರಿದೇವ್ರು ಅವರು 58,049 ಮತಗಳನ್ನು ಪಡೆದಿದ್ದರು. ಎರಡು ಬಾರಿಯೂ ಕುಮಾರಸ್ವಾಮಿ ಜಯಗಳಿಸಿದ್ದರು.

ಎಚ್.ಎಂ.ರೇವಣ್ಣ ಅಭ್ಯರ್ಥಿ

ಎಚ್.ಎಂ.ರೇವಣ್ಣ ಅಭ್ಯರ್ಥಿ

ಎಚ್.ಎಂ.ರೇವಣ್ಣ ಅವರು ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ. ವಿಧಾನಪರಿಷತ್ ಸದಸ್ಯರಾದ ಎಚ್.ಎಂ.ರೇವಣ್ಣ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಸಾರಿಗೆ ಸಚಿವರು, ಸಿದ್ದರಾಮಯ್ಯ ಅವರಿಗೆ ಪರಮಾಪ್ತರು.

ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಈ ಬಾರಿ ಅವರನ್ನು ಸೋಲಿಸಲು ಡಿ.ಕೆ.ಶಿವಕುಮಾರ್ ತಂತ್ರ ರೂಪಿಸಿದ್ದಾರೆ. ಯಾರಿಗೆ ಗೆಲುವು ಸಿಗಲಿದೆ? ಎಂದು ಕಾದು ನೋಡಬೇಕು.

English summary
Karnataka Congress announced 1st list of candidates for Karnataka assembly elections 2018. In Ramanagara district candidates announced for all 4 assembly constituency. Here are the candidates brief profiles of the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X