ಬೆಂಗಳೂರು ದಕ್ಷಿಣದ ಈ ಜಿಲ್ಲೆಯ ನಕಲಿ ಬಿಪಿಎಲ್ ಕಾರ್ಡ್‌ದಾರರಿಗೆ ಶಾಕ್
BPL Ration Card: ರಾಜ್ಯದಲ್ಲಿ ಅನರ್ಹರ ಬಳಿಯಿರುವ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯವನ್ನು ಸರ್ಕಾರ ಮುಂದಿವರೆಸಿದೆ. ಇದೀಗ ಬೆಂಗಳೂರು ದಕ್ಷಿಣ ಜಿಲ್ಲೆಯಾದ ರಾಮನಗರದಲ್ಲಿ ಒಂದಲ್ಲ.. ಎರಡಲ್ಲ.. ಸಾವಿರ ಲೆಕ್ಕದಲ್ಲಿ ಬಿಪಿಎಲ್ ಕಾರ್ಡ್‌ಗಳು ಶಂಕಾಸ್ಪದವಾಗಿದ್ದು, ಇಂತಹವರಿಗೆ ದೊಡ್ಡ ಸಂಕಷ್ಟ ಎದುರಾಗಿದೆ.
ಆಹಾರ ಇಲಾಖೆಯು ರಾಜ್ಯಾದ್ಯಂತ ನಕಲಿ ಬಿಪಿಎಲ್ ಕಾರ್ಡುದಾರರ ವಿರುದ್ಧ ಸಮಯ ಸಾರುತ್ತಿದೆ. ನಕಲಿ ದಾಖಲೆ ಸೃಷ್ಟಿಸಿ ಅನರ್ಹರು ಪಡೆದಂತಹ ಬಿಪಿಎಲ್ ರೇಷನ್ ಕಾರ್ಡ್‌ಗಳನ್ನು ರದ್ದುಪಡಿಸುತ್ತಿದ್ದು, ಅಂತಹವರನ್ನು ಎಪಿಎಲ್‌ಗೆ ವರ್ಗಾಹಿಸುವ ಕೆಲಸವನ್ನು ಮಾಡುತ್ತಿದೆ. ಅರ್ಹರಿಗೆ ಸಮಯಕ್ಕೆ ಸರಿಯಾಗಿ ಪಡಿತರ ವಿತರಣೆ ಮಾಡುವುದು ಇದರ ಉದ್ದೇಶವಾಗಿದೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರೇ ಖುದ್ದಾಗಿ ಯಾರೆಲ್ಲಾ ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್ ಕಾರ್ಡ್ ಪಡೆದಿದ್ದಾರೆಯೋ ಅಂತಹವರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವಂತೆ ತಿಳಿಸಿದ್ದಾರೆ. ಈ ಸೂಚನೆ ಮೇರೆಗೆ ಅನರ್ಹ ಬಿಪಿಎಲ್ ಕಾರ್ಡ್‌ದಾರರ ವಿರುದ್ಧ ಆಹಾರ ಇಲಾಖೆ ಅನರ್ಹರಿಗೆ ಸೂಕ್ತ ಕ್ರಮದೊಂದಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಮಾಡುತ್ತಿದೆ. ಇದೀಗ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶಂಕಾಸ್ಪದ 15,053 ಬಿಪಿಎಲ್ ಕಾರ್ಡ್‌ಗಳನ್ನು ಪರಿಶೀಲನೆಗೆ ಒಳಪಡಿಸಲು ಮುಂದಾಗಿದೆ.
ಸಾಮಾನ್ಯವಾಗಿ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್‌ಗಳನ್ನು ನೀಡಲಾಗುತ್ತದೆ. ಆದರೆ, ಅರ್ಹರಲ್ಲದವರು ಕೂಡ ಈ ಕಾರ್ಡ್ ಹೊಂದಿದ್ದು, ಇದರಿಂದ ಬಡವರಿಗೆ ಸಿಗಬೇಕಾದ ಪಡಿತರ ಸರಿಯಾಗಿ, ಸರಿಯಾದ ಸಮಯಕ್ಕೆ ಸಿಗದಂತಾಗಿದೆ. ಆದ್ದರಿಂದ ರಾಜ್ಯದ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಕೈಹಾಕಿದೆ.
ಅನರ್ಹರ ಬಳಿ ಇರುವ ಬಿಪಿಎಲ್ ಕಾರ್ಡ್‌ಗಳನ್ನು ತಕ್ಷಣ ರದ್ದುಪಡಿಸಿ. ಕೆಲವು ಶ್ರೀಮಂತರು ಸೇರಿದಂತೆ ಸರ್ಕಾರಿ ನೌಕರರೇ ಅನ್ನಭಾಗ್ಯ ಯೋಜನೆ ಫಲಾನುಭವಿಗಳು ಆಗಿದ್ದಾರೆ. ಇಂತಹವರ ಪಡಿತರ ಚೀಟಿ ರದ್ದು ಮಾಡಲಿ ನಿಮಗೆ ಇನ್ನೆಷ್ಟು ಸಮಯ ಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದರು.
ಈ ಖಡಕ್ ಸೂಚನೆಯಿಂದ ಮತ್ತಷ್ಟು ಚುರುಕಾಗಿರುವ ಆಹಾರ ಇಲಾಖೆ ಅಧಿಕಾರಿಗಳು 2025ರ ಆಗಸ್ಟ್ ಅಂತ್ಯಕ್ಕೆ ಹಲವು ಮೂಲಗಳಿಂದ ಮಾಹಿತಿ ಕಲೆಹಾಕಿದೆ. ಈ ವೇಳೆ ಅನುಮಾನಾಸ್ಪದ ಬಿಪಿಎಲ್ ಪಡಿತರದಾರರನ್ನು ಗುರುತಿಸಿ ಅವುಗಳನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಇವು ಅನರ್ಹ ಎಂದು ಸಾಬೀತಾದರೆ, ಅಂತಹವರ ಬಳಿಯ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲಾಗುತ್ತಿದೆ.
ಹಿಂದಿನಿಂದಲೂ ಸಹ ಅನರ್ಹರು ಕೂಡ ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಆಗ ಸರ್ಕಾರ ಅನರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳ ರದ್ದುಪಡಿಸಲು ಮುಂದಾಗಿತ್ತು. ಆದರೆ, ಈ ವೇಳೆ ಬಡವರ ಬಿಪಿಎಲ್ ಕಾರ್ಡ್‌ಗಳನ್ನು ಸಹ ರದ್ದು ಮಾಡಿದ್ದಾರೆ ಎಂದು ಆರೋಪಿಸಿ ಹಲವು ಜಿಲ್ಲೆಗಳಲ್ಲಿ ಜನರು ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದರು. ಬಳಿಕ ಸರ್ಕಾರ ಯಾರೆಲ್ಲ ಅರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳು ರದ್ದು ಮಾಡಲಾಗಿದೆಯೋ ಅವರಿಗೆ ಮತ್ತೆ ಹಿಂತಿರುಗಿಸಿ ಅವರಿಗೆ ಸಿಗಬೇಕಾದ ಪಡಿತರ ನೀಡಲಾಗುತ್ತದೆ ಎಂದು ಹೇಳಿತ್ತು. ಆದರೆ, ಇದೀಗ ಸರಿಯಾಗಿ ಪರಿಶೀಲನೆ ನಡೆಸಿದ ಬಳಿಕವೇ ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲಾಗುತ್ತಿದೆ. ಒಟ್ಟಿನಲ್ಲಿ ಈ ಮಹತ್ವದ ನಿರ್ಧಾರದಿಂದ ಬಡವರಿಗೆ ತುಂಬಾ ಪ್ರಯೋಜನಾ ಆಗಲಿದೆ.
-
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications