Get Updates
Get notified of breaking news, exclusive insights, and must-see stories!

HD Kumaraswamy: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಗೆ ರಿಲೀಫ್‌, ಒತ್ತುವರಿ ತೆರವಿಗೆ ತಡೆ

ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಭೂಮಿ ಒತ್ತುವರಿ ಆರೋಪ ಕೇಳಿಬಂದಿತ್ತು. ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನುಗಳ ಒತ್ತುವರಿ ಮಾಡಿದ್ದಾರೆ ಎನ್ನುವ ಆರೋಪ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿಗಳ ಮೇಲೆ ಇದೆ. ಈ ಸಂಬಂಧ ಈಗಾಗಲೇ ಒತ್ತುವರಿ ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಫೀಲ್ಡಿಗಿಳಿದಿದ್ದರು. ಈ ವಿಚಾರದಲ್ಲಿ ಈಗ ಕುಮಾರಸ್ವಾಮಿ ಅವರಿಗೆ ತುಸು ರಿಲೀಫ್‌ ಸಿಕ್ಕಿದೆ.

ರಾಮನಗರ ತಹಶೀಲ್ದಾರ್‌ ಅವರು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಒತ್ತುವರಿ ತೆರವು ಸಂಬಂಧ ನೋಟಿಸ್‌ ನೀಡಿದ್ದರು. ಈಗ ಕುಮಾರಸ್ವಾಮಿ ಅವರಿಗೆ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಕುಮಾರಸ್ವಾಮಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಿಚಾರಣೆ ವೇಳೆ ಈ ಕುರಿತಂತೆ ಆದೇಶಿಸಲಾಗಿದೆ.

Karnataka HighCourt Stays Notice Against Union Minister HD Kumaraswamy On Land Encroachment

ವಿಚಾರಣೆ ವೇಳೆ ಕುಮಾರಸ್ವಾಮಿ ಪರ ವಕೀಲ ಉದಯ ಹೊಳ್ಳ ವಾದ ಮಂಡಿಸಿದರು. ಅದರಂತೆ ಮುಂದಿನ ಆದೇಶದವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ರಾಮನಗರ ತಾಲ್ಲೂಕು ತಹಶೀಲ್ದಾರ್‌ಗೆ ಆದೇಶಿಸಿದೆ.

Take a Poll

ಏನಿದು ಆರೋಪ?

ಬಿಡದಿಯ ಕೇತಗಾನಹಳ್ಳಿ ಸರ್ವೇ ನಂಬರ್‌ 7 ಮತ್ತು 8ರಲ್ಲಿ ಪೋಡಿ ದುರಸ್ತಿಯಾಗದ ಜಮೀನಿನಲ್ಲಿ ಕುಮಾರಸ್ವಾಮಿ ಅವರು ಅನಧಿಕೃತವಾಗಿ ಒತ್ತುವರಿ ಮಾಡಿದ್ದಾರೆ. ಹಾಗಾಗಿ, ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಕಲಂ 94ರ ಅಡಿಯಲ್ಲಿ ನಿಮ್ಮಿಂದ ದಂಡ ವಸೂಲಿ ಮಾಡಬಾರದು ಎನ್ನುವುದಕ್ಕೆ ಉತ್ತರ ನೀಡಿ. ಈ ಕುರಿತಂತೆ ನಿಮ್ಮ ಬಳಿ ಇರುವ ದಾಖಲೆಗಳನ್ನು ಸಲ್ಲಿಸುವಂತೆ ನೋಟಿಸ್‌ ಮೂಲಕ ಕೋರಲಾಗಿತ್ತು. ನೋಟಿಸ್‌ಗೆ ಉತ್ತರಿಸದಿದ್ದರೆ ಕಾನೂನು ರೀತಿಯ ಕ್ರಮ ಕೈಗೊಳ್ಳುವುದಾಗಿ ರಾಮನಗರ ತಾಲ್ಲೂಕು ತಹಶೀಲ್ದಾರ್‌ ಅವರು ಕುಮಾರಸ್ವಾಮಿ ಅವರಿಗೆ ಒತ್ತುವರಿ ತೆರವು ನೋಟಿಸ್‌ ನೀಡಿದ್ದರು.

ಅಲ್ಲದೆ ಕಂದಾಯ ಇಲಾಖೆ ಅಧಿಕಾರಿಗಳು ಜೆಸಿಬಿ ಸಮೇತ ಕೇತಗಾನಹಳ್ಳಿ ಬಳಿ ಜಮೀನಿನ ಒತ್ತುವರಿ ತೆರವು ಕಾರ್ಯಾಚರಣೆಗೆ ಹೋಗಿದ್ದರು. ಕುಮಾರಸ್ವಾಮಿ ಕುಟುಂಬಸ್ಥರ ವಿರುದ್ಧ ಈ ಒತ್ತುವರಿ ಆರೋಪ ಕೇಳಿಬಂದ ಹಿನ್ನೆಲೆ ಭೂ ಒತ್ತುವರಿ ಆರೋಪ ಸಂಬಂಧದ ತನಿಖೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ಐಟಿ ತಂಡ ರಚಿಸಿದ್ದರು.

Karnataka HighCourt Stays Notice Against Union Minister HD Kumaraswamy On Land Encroachment

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಚಿವ ಕುಮಾರಸ್ವಾಮಿ ಅವರು ಭೂ ದಾಖಲೆಗಳ ಇಲಾಖೆಗೆ ಪತ್ರ ಬರೆದಿದ್ದರು. ಒಂದು ವೇಳೆ ಕಾನೂನುಬಾಹಿರವಾಗಿ ಹೆಚ್ಚುವರಿ ಜಮೀನು ನಮ್ಮ ಅಧೀನದಲ್ಲಿದ್ದರೆ, ಅದನ್ನು ನಿಮ್ಮ ವಶಕ್ಕೆ ಪಡೆದುಕೊಳ್ಳಿ. ಜೊತೆಗೆ ನನಗೆ ನ್ಯಾಯವಾಗಿ ಸೇರಬೇಕಿರುವ ಉಳಿದ ಜಮೀನನ್ನು ಕೂಡ ನೀವೇ ಗುರುತಿಸಿ ಕೊಡಿ ಎಂದು ಪತ್ರ ಬರೆದಿದ್ದರು. ಭೂ ದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕರಿಗೆ ಅವರು ಪತ್ರ ಬರೆದು, ಬಿಡದಿಯ ಕೇತಗಾನಹಳ್ಳಿ ಸರ್ವೆ ನಂಬರ್ 7ರಲ್ಲಿ 5 ಎಕರೆ 20 ಗುಂಟೆ ಜಮೀನನ್ನು ನಾನು ಖರೀದಿಸಿದ್ದು, ಈ ಪೈಕಿ 1.25 ಎಕರೆ ಜಮೀನಿನಲ್ಲಿ ಮಾತ್ರ ನಾವು ಇದ್ದೇವೆ. ಉಳಿದ ಜಮೀನನ್ನು ನೀವೇ ಗುರುತಿಸಿ, ನಮಗೆ ಕೊಡಿ ಎಂದು ಕೋರಿದ್ದರು. ಬಳಿಕ ಹೈಕೋರ್ಟ್‌ ಮೆಟ್ಟಿಲೇರಿದ್ದ ಅವರಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+