ಗುತ್ತಿಗೆದಾರ ವೃತ್ತಿಯಿಂದ ಎರಡೆರಡು ಬಾರಿ ಸಿಎಂ ಗಾದಿ ತನಕ ಎಚ್ ಡಿಕೆ ಜರ್ನಿ

ಜೆಡಿಎಸ್- ಕಾಂಗ್ರೆಸ್ ಮೈತ್ರಿ ಕೂಟದ ಸರಕಾರ ಹದಿನಾಲ್ಕು ತಿಂಗಳಲ್ಲಿ ಪತನವಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ಮತ ಸಾಬೀತು ಮಾಡಲು ಮಂಗಳವಾರ ವಿಫಲರಾಗಿದ್ದಾರೆ. ಎಚ್. ಡಿ. ಕುಮಾರಸ್ವಾಮಿ ಅವರ ಜೀವನದ ಪ್ರಮುಖ ಘಟನೆಗಳು ಹೀಗಿವೆ.

1959 (ಡಿಸೆಂಬರ್ 16): ಹಾಸನ ಜಿಲ್ಲೆ ಹೊಳೆ ನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನನ

1980 : ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಬಿಎಸ್ಸಿ ಪದವಿ

1982 : ಬೆಂಗಳೂರು ಮಹಾನಗರ ಪಾಲಿಕೆಯ ಗುತ್ತಿಗೆದಾರನಾಗಿ ವೃತ್ತಿ ಜೀವನ ಆರಂಭ

1986 (ಮಾರ್ಚ್ 13) : ಅನಿತಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ

1987- 88 : ಸಿನಿಮಾ ರಂಗದಲ್ಲಿ ವಿತರಕ, ಪ್ರದರ್ಶಕರಾಗಿ ಪ್ರವೇಶ

1996 : ಕನಕಪುರ ಲೋಕಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಪ್ರಪ್ರಥಮವಾಗಿ ಸ್ಪರ್ಧಿಸಿ ಗೆಲುವು

Karnataka political crisis: Life journey of HD Kumaraswamy from contractor to CM

1998 : ಕನಕಪುರ ಲೋಕಸಭೆ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿ ಸ್ಪರ್ಧಿಸಿ, ಪರಾಭವಗೊಂಡರು

1999 : ವಿಧಾನಸಭೆ ಚುನಾವಣೆಯಲ್ಲಿ ಸಾತನೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋಲು

2004 : ವಿಧಾನಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆ

2005 : ಜಾತ್ಯತೀತ ಜನತಾ ದಳ ಕಾರ್ಯಾಧ್ಯಕ್ಷರಾಗಿ ನೇಮಕ

2006: ಜೆಡಿಎಸ್ - ಬಿಜೆಪಿ ಸಮ್ಮಿಶ್ರ ಸರಕಾರ ರಚನೆಗೊಂಡು ಹದಿನೆಂಟನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ

2007 (ಅಕ್ಟೋಬರ್ 9) : ರಾಜ್ಯದಲ್ಲಿ 20 ತಿಂಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು.

Karnataka political crisis: Life journey of HD Kumaraswamy from contractor to CM

2007 : ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಪುನರಾಯ್ಕೆ

2009 : ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆ

2009 : ಕೇಂದ್ರ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಪಾರ್ಲಿಮೆಂಟ್ ಹೌಸ್ ಕಾಂಪ್ಲೆಕ್ಸ್ ನ ಮ್ಯಾನೇಜ್ ಮೆಂಟ್ ಕಮಿಟಿ ಸದಸ್ಯ

2013 : ಸಂಸತ್ ಸ್ಥಾನಕ್ಕೆ ರಾಜಿನಾಮೆ, ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಮೂರನೇ ಬಾರಿ ಆಯ್ಕೆ

2013 : ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ

2014 : ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕ

2014 : ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ, ಸೋಲು

2018 : ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರದಿಂದ ಆಯ್ಕೆ

2018 (ಮೇ 19): ವಿಧಾನಸೌಧದಲ್ಲಿ ಚನ್ನಪಟ್ಟಣ ಕ್ಷೇತ್ರ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ

2018 ಮೇ 23: ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರಕಾರದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ

2019 ಜುಲೈ 23: ಬಹುಮತ ಕಳೆದುಕೊಂಡ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರಕಾರ, ರಾಜೀನಾಮೆ ಸಲ್ಲಿಕೆ ಸಾಧ್ಯತೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+