• search
  • Live TV
ರಾಮನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಮನಗರದಲ್ಲಿ ನೂತನ ಕೇಂದ್ರೀಯ ವಿದ್ಯಾಲಯಕ್ಕೆ ಚಾಲನೆ

By Gururaj S
|

ರಾಮನಗರ, ಅಕ್ಟೋಬರ್ 24 : 'ಕೇಂದ್ರೀಯ ಪಠ್ಯಕ್ರಮದಲ್ಲಿ ಕಲಿತ ಮಕ್ಕಳು ಸ್ಪರ್ಧಾತ್ಮಕ ಯುಗದಲ್ಲಿ ಗುಣಾತ್ಮಕ ಶಿಕ್ಷಣ ಪಡೆದು ಯಶಸ್ಸು ಗಳಿಸುತ್ತಾರೆ' ಎಂದು ರಾಮನಗರ ಜಿಲ್ಲಾಧಿಕಾರಿ ಬಿ.ಆರ್.ಮಮತಾ ಅವರು ಅಭಿಪ್ರಾಯಪಟ್ಟರು.

ಚನ್ನಪಟ್ಟಣದ ಪಿಟಿಎಸ್ ಬಳಿ ಆರಂಭಗೊಂಡಿರುವ ಕೇಂದ್ರೀಯ ವಿದ್ಯಾಲಯಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, 'ಈ ಶಾಲೆಯಲ್ಲಿ ಕೇಂದ್ರೀಯ ಪಠ್ಯಕ್ರಮದಂತೆ ತರಗತಿ ನಡೆಯಲಿದ್ದು ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಗುಣಾತ್ಮಕ ಶಿಕ್ಷಣ ಪಡೆದು ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ' ಎಂದರು.

ಆಸ್ಟ್ರೇಲಿಯಾದ ಮೆಲ್ಬೊರ್ನ್ ಶಾಲೆಯಲ್ಲಿ ಕನ್ನಡ ಪಾಠ

'ರಾಮನಗರ ಜಿಲ್ಲೆ ಶಿಕ್ಷಣದಲ್ಲಿ 6ನೇ ಸ್ಥಾನ ಪಡೆದಿದೆ. ಜಿಲ್ಲೆ ಶೈಕ್ಷಣಿಕವಾಗಿ ಪ್ರಥಮ ಸ್ಥಾನ ಪಡೆಯಲು ಕೇಂದ್ರೀಯ ವಿದ್ಯಾಲಯ ಶ್ರಮಿಸಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳು ಅಂಕಕ್ಕೆ ಮಹತ್ವ ನೀಡದೆ ಅವರ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಬೇಕು' ಎಂದು ಕರೆ ನೀಡಿದರು.

ಮಂಗಳೂರಿನ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ CBSEಗೆ ಚಾಲನೆ

ಕೇಂದ್ರಿಯ ವಿದ್ಯಾಶಾಲೆಗೆ ಓರ್ವ ಪ್ರಾಂಶುಪಾಲರು ಹಾಗೂ ಆರು ಜನ ಶಿಕ್ಷಕರು ನೇಮಕವಾಗಿದ್ದು, ಹಿಂದಿ ಮತ್ತು ಇಂಗ್ಲಿಷ್ ಭಾಷಾ ಕೌಶಲ್ಯಕ್ಕೆ ಹೆಚ್ಚು ಒತ್ತು ನೀಡಲಿದ್ದಾರೆ. ತಾತ್ಕಾಲಿಕ ಕಟ್ಟಡದಲ್ಲಿ ಕೇಂದ್ರೀಯ ವಿದ್ಯಾಲಯ ಆರಂಭವಾಗಿದೆ. ಶಾಲೆಯ ನಿರ್ಮಾಣಕ್ಕೆ ಕೆಂಗಲ್ ಬಳಿ 10 ಎಕರೆ ಜಮೀನು ಮಂಜೂರಾಗಿದೆ.

ಶಾಲೆಗೆ ವಿದ್ಯಾರ್ಥಿಗಳನ್ನು ಯಾವುದೇ ಲಾಬಿ ಇಲ್ಲದೆ ಪಾರದರ್ಶಕವಾಗಿ ಆಯ್ಕೆ ಮಾಡಲಾಗಿದೆ. ಸುಮಾರು 1,200 ಅರ್ಜಿಗಳು ಬಂದಿದ್ದು ಅದರಲ್ಲಿ 200 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಶಾಲೆಯಲ್ಲಿ ಪಠ್ಯದ ಜೊತೆಗೆ ಸಂಗೀತ, ಯೋಗ, ಕಂಪ್ಯೂಟರ್, ಕ್ರೀಡಾ ಚಟುವಟಿಕೆಗಳ ಕಲಿಕೆಗೂ ಆದ್ಯತೆ ನೀಡಲಾಗುತ್ತದೆ.

English summary
Ramanagara DC B.R. Mamatha inaugurated Kendriya Vidyalaya atChannapatna, Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X